30-06-2026, 3:00 PM
ಮಂಗಳೂರು, ಜೂನ್ 30: ಮಹಿಳೆಯರು ಸ್ವಂತ ಉದ್ಯಮ ಆರಂಭಿಸುವ ಮೂಲಕ ಆರ್ಥಿಕವಾಗಿ ಸ್ವಾವಲಂಬಿಗಳಾಗಬೇಕು. ದಿಟ್ಟ ನಿರ್ಧಾರ ಮತ್ತು ಆತ್ಮವಿಶ್ವಾಸದಿಂದ ಯಾವುದೇ ಕ್ಷೇತ್ರದಲ್ಲಿಯೂ ಯಶಸ್ಸು ಸಾಧಿಸಲು ಸಾಧ್ಯ ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರದೀಪ್ ಡಿಸೋಜಾ ಹೇಳಿದರು. ಅವರು ಮಹಿಳಾ ಮಂಡಲ (ರಿ.) ಕುಳಾಯಿ, ಮಂಗಳೂರಿನಲ್ಲಿ ನಡೆದ “ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ಶಿಬಿರ”ವನ್ನು ಉದ್ಘಾಟಿಸಿ ಮಾತನಾಡಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಪ್ರಧಾನ ಕಾರ್ಯದರ್ಶಿ ರೇಖಾ ಗೋಪಾಲ್ ಮಾತನಾಡಿ, ಮಹಿಳೆಯರು ಸಣ್ಣ-ಪುಟ್ಟ […]
Read More
30-06-2026, 1:00 PM
ಪರಪಾದೆ, ಜೂನ್ 30: ಯುವವಾಹಿನಿ (ರಿ.) ಕೂಳೂರು ಘಟಕದ ವತಿಯಿಂದ ಪರಪಾದೆಯ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆಯ ಸುಮಾರು 135 ವಿದ್ಯಾರ್ಥಿಗಳಿಗೆ ಉಚಿತವಾಗಿ ಕೊಡೆಗಳನ್ನು ವಿತರಿಸುವ ಸಮಾಜಮುಖಿ ಸೇವಾ ಕಾರ್ಯಕ್ರಮ ನಡೆಯಿತು. ಶಾಲೆಯ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷೆ ಗೀತಾ ವಸಂತ್ ವಹಿಸಿದ್ದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ವಂದೀಪ್, ಕಾರ್ಯಕ್ರಮದ ಸಂಚಾಲಕಿ ಹಾಗೂ ವಿದ್ಯಾರ್ಥಿ ಸಂಘಟನೆ ನಿರ್ದೇಶಕಿ ವೀಣಾ ಭಾಸ್ಕರ್, ಮಾರ್ಗದರ್ಶಕರಾದ ಜಯಾನಂದ ಅಮೀನ್ ಹಾಗೂ ಶಾಲೆಯ ಮುಖ್ಯೋಪಾಧ್ಯಾಯಿನಿ ರೇಖಾ […]
Read More
29-06-2026, 9:00 PM
ಮಂಗಳೂರು: ದಿನಾಂಕ: 29-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಮಿತ್ರ ಮಂಡಳಿ ಯೋಗ ಭಜನಾ ತಂಡ ಬಿಜೈ ಇವರ ಸಹಯೋಗದೊಂದಿಗೆ ನಡೆಯಿತು. ಭಕ್ತಿಯ ನಾಮ ಸ್ಮರಣೆ ಒಂದೇ ಮುಕ್ತಿಯ ದಾರಿ ಎಂಬಂತೆ ಭಕ್ತಿ ಭಾವದಿಂದ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು.ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ […]
Read More
29-06-2026, 2:00 PM
ಮೂಡುಬಿದಿರೆ, ಜೂನ್ 29: ಯುವವಾಹಿನಿ (ರಿ.) ಮೂಡುಬಿದಿರೆ ಘಟಕ, ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲ ಹಾಗೂ ವೀಚೀಸ್ ಕೌಶಲ್ಯಪರ ತರಬೇತಿ ಕೇಂದ್ರ, ಮೂಡುಬಿದಿರೆ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ 5 ದಿನಗಳ ಉಚಿತ ಸೀರೆ ಕುಚ್ಚು ಕೌಶಲ್ಯ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೂಡುಬಿದಿರೆಯ ಸಮಾಜ ಮಂದಿರದ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಭಾರತೀಯ ವಿಕಾಸ ಟ್ರಸ್ಟ್, ಮಣಿಪಾಲದ ಕಾರ್ಯಕ್ರಮ ವ್ಯವಸ್ಥಾಪಕರಾದ ಜೀವನ್ ಕೊಲ್ಯ ಮಾತನಾಡಿ, ಮಹಿಳೆಯರು ಕಾಲಕ್ಕೆ ತಕ್ಕಂತೆ ಬೇಡಿಕೆಯಿರುವ ಕೌಶಲ್ಯಗಳನ್ನು ಕಲಿತು ಸ್ವಯಂ […]
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ 2026ನೇ ಅಗಸ್ಟ್ 23ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುವ ಮಾಧವ ಕೀರ್ತನೋತ್ಸವ ಭಜನಾ ಸ್ಪರ್ಧೆ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
28-06-2026, 5:00 PM
ಮಂಗಳೂರು : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ 2026ನೇ ಅಕ್ಟೋಬರ್ 4ರಂದು ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯುವ ಯುವವಾಹಿನಿ ಕ್ರೀಡೋತ್ಸವ 2026 ಆಮಂತ್ರಣ ಪತ್ರವನ್ನು ಮಂಗಳೂರಿನ ಯುವವಾಹಿನಿ ಸಭಾಂಗಣದಲ್ಲಿ ನಡೆದ ಕೇಂದ್ರ ಸಮಿತಿಯ ಮಾಸಿಕ ಸಭೆಯಲ್ಲಿ ಬಿಡುಗಡೆ ಮಾಡಲಾಯಿತು
Read More
28-06-2026, 2:00 PM
ಶಕ್ತಿನಗರ, ಜೂನ್ 28: ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವ ಮೂಲಕ ಸಾರ್ವಜನಿಕ ಆರೋಗ್ಯವನ್ನು ಕಾಪಾಡುವ ಉದ್ದೇಶದಿಂದ ಯುವವಾಹಿನಿ (ರಿ.) ಶಕ್ತಿನಗರ ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಮಂದಿರ ಸೇವಾ ಟ್ರಸ್ಟ್ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಆವರಣದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಯುವವಾಹಿನಿಯ ಪದಾಧಿಕಾರಿಗಳು, ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಉತ್ಸಾಹದಿಂದ ಭಾಗವಹಿಸಿ ಮಂದಿರದ ಆವರಣವನ್ನು ಸ್ವಚ್ಛಗೊಳಿಸುವ ಮೂಲಕ ಪರಿಸರ ಸಂರಕ್ಷಣೆ ಮತ್ತು ಸ್ವಚ್ಛತೆಯ ಕುರಿತು ಜಾಗೃತಿ ಮೂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಯುವವಾಹಿನಿ […]
Read More
28-06-2026, 1:00 PM
ಮಾಣಿ, ಜೂ. 28: ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಕರ್ನಾಟಕ ಪ್ರೌಢಶಾಲೆ, ಮಾಣಿಯಲ್ಲಿ ಯುವ ಸದಸ್ಯತ್ವ ಅರಿವು, ನಾಯಕತ್ವ ತರಬೇತಿ ಹಾಗೂ ವಿದ್ಯಾರ್ಥಿ ಅಭಿನಂದನಾ ಕಾರ್ಯಕ್ರಮ ಘಟಕದ ಅಧ್ಯಕ್ಷ ಗಣೇಶ್ ಸಾಯಿ ಅವರ ಅಧ್ಯಕ್ಷತೆಯಲ್ಲಿ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದ ಆರಂಭದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ ಭಾವಚಿತ್ರಕ್ಕೆ ರಾಜೇಶ್ ಸುವರ್ಣ, ಬಂಟ್ವಾಳ ದೀಪ ಪ್ರಜ್ವಲನೆ ನೆರವೇರಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ಪ್ರೌಢಶಾಲಾ ಮಂಡಳಿಯ ಅಧ್ಯಕ್ಷ ಕಿರಣ್ ಹೆಗ್ಡೆ ಮಾತನಾಡಿ, “ಯುವಜನರಲ್ಲಿ ಸಂಘಟನಾ ಮನೋಭಾವ, […]
Read More
28-06-2026, 1:00 PM
ಬೆಂಗಳೂರು, ಜೂ. 28: ಯುವವಾಹಿನಿ (ರಿ.) ಬೆಂಗಳೂರು ಘಟಕದ ನೂತನ ಕಚೇರಿಯನ್ನು ಚಿಕ್ಕಬಿದಿರೆಕಲ್ಲು ಸಮೀಪದ ಭವಾನಿನಗರದಲ್ಲಿ ವೈದಿಕ ವಿಧಿ ವಿಧಾನಗಳೊಂದಿಗೆ ಭಾನುವಾರ ಉದ್ಘಾಟಿಸಲಾಯಿತು. ಗುರುಗಳಾದ ಜಯಂತ್ ಸಾಲಿಯಾನ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಸಲಹೆಗಾರರಾದ ಕೆ.ಬಿ. ಜಯರಾಮ್ ಹಾಗೂ ಸುಧೀರ್ ಎಸ್.ಪಿ. ಅವರು ರಿಬ್ಬನ್ ಕತ್ತರಿಸುವ ಮೂಲಕ ನೂತನ ಕಚೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷ ಶ್ರೀಧರ್ ಡಿ., ನಿಕಟಪೂರ್ವ ಅಧ್ಯಕ್ಷ ಶಶಿಧರ್ ಕೋಟ್ಯಾನ್, ನಿಕಟಪೂರ್ವ ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ, ನೂತನ ಅಧ್ಯಕ್ಷ […]
Read More
28-06-2026, 1:00 PM
ಮಾಣಿ: ಯುವ ಮನಸ್ಸುಗಳಲ್ಲಿ ಕನಸುಗಳ ಕಿಡಿ ಹೊತ್ತಿಸಿ, ಸೇವಾ ಮನೋಭಾವ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಉದ್ದೇಶದಿಂದ ಯುವವಾಹಿನಿ (ರಿ.) ಮಾಣಿ ಘಟಕದ ವತಿಯಿಂದ ಸದಸ್ಯತ್ವ ಅರಿವು ಹಾಗೂ ನಾಯಕತ್ವ ತರಬೇತಿ ಶಿಬಿರ ಯಶಸ್ವಿಯಾಗಿ ನಡೆಯಿತು. “ಯುವಶಕ್ತಿ ಜಾಗೃತಿಯಾದರೆ ಸಮಾಜದ ನಾಳೆ ಬೆಳಗುತ್ತದೆ” ಎಂಬ ಆಶಯದೊಂದಿಗೆ ನಡೆದ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಾಮಾಜಿಕ ಜಾಲತಾಣ ಹಾಗೂ ವೆಬ್‌ಸೈಟ್ ಸಂಪಾದಕರಾದ ರಾಜೇಶ್ ಸುವರ್ಣ ಅವರು ಯುವಕರಿಗೆ ಸದಸ್ಯತ್ವದ ಮಹತ್ವ, ನಾಯಕತ್ವದ ಗುಣಗಳು […]
Read More