Yuvavahini

ಘಟಕಗಳು

ಆಚರಣೆಗಳು‌ ಬದುಕನ್ನು ಶ್ರೀಮಂತವಾಗಿಸುತ್ತದೆ : ಸ್ಮಿತೇಶ್ ಬಾರ್ಯ

ಬಂಟ್ವಾಳ : ನೆಲ ಮೂಲ ಸಂಸ್ಕೃತಿಯನ್ನು ನಂಬಿಕೊಂಡು ಬಂದವರು ತುಳುವರು, ಅವರ ಪ್ರತಿಯೊಂದು ಆಚರಣೆಗಳು ಮೂಲ ನಂಬಿಕೆಯಿಂದ ಕೂಡಿತ್ತು, ಇದಕ್ಕೆ ವೈಜ್ಞಾನಿಕ ಹಿನ್ನಲೆ ಇರುವುದು ವಿಶೇಷ. ಎಲ್ಲರೂ ಕೂಡಿ ಆಚರಿಸುವ ಆಟಿಡೊಂಜಿ‌ ಕೂಟ ಎನ್ನುವ ಇಂತಹ ಕಾರ್ಯಕ್ರಮಗಳು ಇಂದಿನ‌ ಯುವ ಪೀಳಿಗೆಗೆ ತುಳುನಾಡಿನ ಗತವೈಭವವನ್ನು‌ ನೆನಪಿಸುತ್ತದೆ. ಇಂತಹ ಸಂಸ್ಕೃತಿ, ಸಂಸ್ಕಾರಯುತ ಆಚರಣೆಗಳು ಬದುಕನ್ನು ಶ್ರೀಮಂತವಾಗಿಸುತ್ತದೆ ಎಂದು ಎಸ್.ಡಿ.ಎಮ್ ಕಾಲೇಜಿನ‌ ಉಪನ್ಯಾಸಕ ಸ್ಮಿತೇಶ್. ಎಸ್.ಬಾರ್ಯ ತಿಳಿಸಿದರು ಅವರು ದಿನಾಂಕ 22.07.2018 ರಂದು ಯುವವಾಹಿನಿ (ರಿ) ಬಂಟ್ವಾಳ ತಾಲೂಕು ಘಟಕದ […]

Read More

ಕೂಳೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನ

ಕೂಳೂರು : ಯುವ ವಾಹಿನಿ ಕೂಳೂರು ಘಟಕದ ವತಿಯಿಂದ ಸ್ವಚ್ಛತಾ ಅಭಿಯಾನವು ದಿನಾಂಕ 22/07/18ರಂದು ಬಂಗ್ರ ಕೂಳೂರಿನಲ್ಲಿ ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ತನಕ ಸಂಘಟನಾ ಕಾರ್ಯದರ್ಶಿಯಾದ ಪವಿತ್ರ ಅಮೀನ್ ಇವರ ನೇತೃತ್ವದಲ್ಲಿ ನಡೆಯಿತು .ಉಪಾಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್ ಈ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು . ಸುಮಾರು 40ರಿಂದ 45 ಸದಸ್ಯರು ಹಾಗೂ ಕೆಲವೊಂದು ಊರಿನ ಜನರು ಕೂಡ ಈ ಸ್ವಚ್ಛತಾ ಅಭಿಯಾನದಲ್ಲಿ ಭಾಗಿಯಾಗಿದ್ದು ಬಂಗ್ರಕೂಳೂರಿನ ಪ್ರದೇಶವನ್ನು ಸ್ವಚ್ಛಗೊಳಿಸಲಾಯಿತು. ಈ ಸ್ವಚ್ಛತಾ ಅಭಿಯಾನದಲ್ಲಿ […]

Read More

ಸರಕಾರಿ ಶಾಲೆಗೆ ಸಹಾಯ ಹಸ್ತ

ಶಕ್ತಿನಗರ : ಯುವವಾಹಿನಿ(ರಿ.) ಶಕ್ತಿನಗರ ಘಟಕದ ವತಿಯಿಂದ ದಿನಾಂಕ 20/07/2018ನೇ ಶುಕ್ರವಾರ ನಾಲ್ಯಪದವು ಸರಕಾರಿ ಶಾಲಾ ಬಡ ಮಕ್ಕಳಿಗೆ ಉಚಿತವಾಗಿ ಊಟದ ಸ್ಟೀಲ್ ತಟ್ಟೆಯನ್ನು ವಿತರಿಸಲಾಯಿತು . ಮತ್ತು 10,000/-ರೂಪಾಯಿಗಳ ಧನಸಹಾಯವನ್ನು ಶಾಲೆಯ ಅಭಿವೃದ್ಧಿಗಾಗಿ ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರು ಶಾಲೆಯ ಆಡಳಿತ ಮಂಡಳಿಗೆ ಹಸ್ತಾಂತರ ಮಾಡಿದರು. ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಪರವಾಗಿ ಯುವವಾಹಿನಿ(ರಿ.) ಶಕ್ತಿನಗರ ಘಟಕದ ಅಧ್ಯಕ್ಷರಾದ ಶ್ರೀನಿವಾಸ ಪೂಜಾರಿಯವರನ್ನು ಅಭಿನಂದಿಸಲಾಯಿತು. ಮತ್ತು ಶಾಲೆಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವವನ್ನುಆಚರಿಸಲಾಯಿತು. ಈ […]

Read More

ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಧ್ಯೇಯವಾಗಿರಬೇಕು : ಕೋಟ ಶ್ರೀನಿವಾಸ ಪೂಜಾರಿ

ಉಡುಪಿ : ಸದೃಡ ಸಮಾಜದ ನಿರ್ಮಾಣ ಯುವ ಸಮುದಾಯದ ಮುಖ್ಯ ಧ್ಯೇಯವಾಗಿರಬೇಕು, ಈ ನಿಟ್ಟಿನಲ್ಲಿ ಯುವವಾಹಿನಿ ಉಡುಪಿ ಘಟಕದ ಕಾರ್ಯ ಶ್ಲಾಘನೀಯ ಎಂದು ವಿದಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಅವರು ದಿನಾಂಕ‌ 15.07.2018 ರಂದು ಉಡುಪಿ ಬಲಾಯಿಪಾದೆ ಯುವವಾಹಿನಿ ಸಭಾಂಗಣದಲ್ಲಿ ನಡೆದ ಯುವವಾಹಿನಿ ಉಡುಪಿ ಘಟಕದ ಆಶ್ರಯದಲ್ಲಿ ಜರುಗಿದ ವಿದ್ಯಾನಿಧಿ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿ ಯಾಗಿ ಭಾಗವಹಿಸಿ ಮಾತನಾಡಿದರು. ಉಡುಪಿಯ ಎಡಿಷನಲ್ ಎಸ್ಪಿ ಕುಮಾರ ಚಂದ್ರ ಮಾತನಾಡಿ ಐಎಎಸ್, ಐಪಿಎಸ್ […]

Read More

ಸ್ವಚ್ಚತಾ ಆಂದೋಲನಾ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ಕುಪ್ಪೆಪದವು ಪರಿಸರದ ಸಾರ್ವಜನಿಕ ಸ್ಥಳಗಳಲ್ಲಿ ಅದರ ಸ್ವಚ್ಚತಾ ಕಾರ್ಯವನ್ನು ನಡೆಸಲಾಯಿತು. ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ನೇತ್ರತ್ವದಲ್ಲಿ ಈ ಕಾರ್ಯ ನಡೆಯಿತು

Read More

ನಮ್ಮ ನಡೆ ಬೇಸಾಯದ ಕಡೆ

ಕುಪ್ಪೆಪದವು : ಯುವವಾಹಿನಿ (ರಿ) ಕುಪ್ಪೆಪದವು ಘಟಕದ ಆಶ್ರಯದಲ್ಲಿ ನಮ್ಮ ನಡೆ ಬೇಸಾಯದ ಕಡೆ ಎಂಬ ಪರಿಕಲ್ಪನೆಯ ಅಡಿಯಲ್ಲಿ ದಿನಾಂಕ‌ 14.07.2018 ರಂದು ಘಟಕದ ಸದಸ್ಯರು ಹಲ ಉಳುಮೆ ನಡೆಸಿ ಕೃಷಿ ಬಿತ್ತನೆ ಕಾರ್ಯ ನಡೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ ಕುಪ್ಪೆಪದವು ಘಟಕದ ಅಧ್ಯಕ್ಷ ಅರುಣ್ ಕುಮಾರ್ ಹಾಗೂ ಘಟಕದ ಸದಸ್ಯರು ಭಾಗವಹಿಸಿದ್ದರು

Read More

ಕಣ್ಣಿನ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ

ಬಜ್ಪೆ: ವಿದ್ಯೆ ಉದ್ಯೋಗ ಸಂಪರ್ಕವೆನ್ನುವ ಮಹತ್ತರವಾದ ಆಶಯವನ್ನಿರಿಸಿಕೊಂಡು, ಸಮಾಜಮುಖಿಯಾಗಿ ಕಾರ್ಯೋನ್ಮುಖವಾಗಿರುವ ಯುವವಾಹಿನಿ ಆರೋಗ್ಯಪೂರ್ಣ ಸಮಾಜ ನಿರ್ಮಾಣದಲ್ಲೂ ತನ್ನನ್ನು ಬಹುವಾಗಿ ಅನ್ವಯಿತಗೊಳಿಸಿಕೊಂಡಿರುವ ಕಾರಣವಾಗಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ತನ್ನ ಮಡಿಗೇರಿಸಿಕೊಂಡಿರುವುದು ಕಡಿಮೆ ಸಾಧನೆಯೇನಲ್ಲ. ಯುವವಾಹಿನಿ ಕೇಂದ್ರ ಸಮಿತಿಯ ಪಡಿನೆಳಲಲ್ಲಿ ತನ್ನ ಪ್ರತಿಭೆಯನ್ನು ವಿಸ್ತಾರಗೊಳಿಸಿಕೊಂಡಿರುವ ಘಟಕಗಳಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಯುವವಾಹಿನಿ(ರಿ.) ಬಜ್ಪೆ ಘಟಕದ ಆಶ್ರಯದಲ್ಲಿ ದಿನಾಂಕ. 14.07.2018 ರಂದು ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ಕ್ಷೇತ್ರದಲ್ಲಿ ಮಂಗಳೂರು ವಿಶೇಷ ಆರ್ಥಿಕ ವಲಯ(SEZ) ಇದರ ಸಹಭಾಗಿತ್ವದಲ್ಲಿ, ಪ್ರಸಾದ್ ನೇತ್ರಾಲಯ […]

Read More

ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ಭಜನಾ ಕಾರ್ಯಕ್ರಮ

ಪಡುಬಿದ್ರಿ : ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ವತಿಯಿಂದ ದಿನಾಂಕ ೧೨. ೦೭. ೨೦೧೮ ಪಡುಬಿದ್ರಿ ನಾರಾಯಣಗುರು ಮಂದಿರದಲ್ಲಿ ವಾರದ ಭಜನೆಯು ನಡೆಯಿತು. ಈ ಸಂದರ್ಭದಲ್ಲಿ ಘಟಕದ ಪದಾಧಿಕಾರಿಗಳು, ಸದಸ್ಯರು, ಬಿಲ್ಲವ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಮಹಿಳಾ ವಿಭಾಗದ ಸದಸ್ಯೆಯರು ಉಪಸ್ಥಿತರಿದ್ದರು.

Read More

ಯುವವಾಹಿನಿಯ ವಾರ್ಷಿಕ ಸಮಾವೇಶಕ್ಕೆ ಸಚಿವೆ ಜಯಮಾಲರಿಗೆ ಆಹ್ವಾನ

ಬೆಂಗಳೂರು : ಯುವವಾಹಿನಿ(ರಿ) ಕೇಂದ್ರ ಸಮಿತಿಯ ತಂಡವು ಬೆಂಗಳೂರಿಗೆ ತೆರಳಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವರಾಗಿರುವ ಡಾ.ಜಯಮಾಲರನ್ನು ವಿದಾನಸೌಧದಲ್ಲಿ ಭೇಟಿಯಾಗಿ ಯುವವಾಹಿನಿಯ ೩೧ನೆೇ ವಾರ್ಷಿಕ ಸಮಾವೇಶದ ಆಮಂತ್ರಣ ಪತ್ರ ನೀಡಿ ಸಮಾವೇಶಕ್ಕೆ ಆಹ್ವಾನ ನೀಡಲಾಯಿತು. ಆಗಸ್ಟ್ 05 ರಂದು ಮಂಗಳೂರಿನ ಫಾದರ್ ಮುಲ್ಲರ್ ಕನ್ವೆಷನ್ ಸೆಂಟರ್ ನಲ್ಲಿ ನಡೆಯುತ್ತಿರುವ ಯುವವಾಹಿನಿಯ 31ನೇ ವಾರ್ಷಿಕ ಸಮಾವೇಶದಲ್ಲಿ ತಾನೂ ಪಾಲ್ಗೊಳ್ಳುತ್ತಿದ್ದು, ಎಲ್ಲರೂ ಸಮಾವೇಶ ಯಶಸ್ವಿಗೊಳಿಸೋಣ ಎಂದು ಅವರು ತಿಳಿಸಿದರು ಈ ಸಂದರ್ಭದಲ್ಲಿ […]

Read More

ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ

ಕೂಳೂರು : ಯುವ ವಾಹಿನಿ (ರಿ) ಕೂಳೂರು ಘಟಕದ ವತಿಯಿಂದ ಕ್ಷೇತ್ರ ದರ್ಶನ ದಿನಾಂಕ 08/07/2018 ರಂದು ಒಂದು ದಿನದ *ಕ್ಷೇತ್ರ ದರ್ಶನ* ಪ್ರವಾಸವನ್ನು ಏರ್ಪಡಿಸಲಾಗಿದ್ದು 120 ಮಂದಿ ಸದಸ್ಯರನ್ನು ಒಳಗೊಂಡ ತಂಡವು ಯುವವಾಹಿನಿ(ರಿ) ಕೂಳೂರು ಘಟಕದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಇವರು ಇದಕ್ಕೆ ಚಾಲನೆ ನೀಡಿದರು… 6 ಗಂಟೆಗೆ ಸರಿಯಾಗಿ ಕೂಳೂರಿನಿoದ ಹೊರಟು 7.15ಕ್ಕೆ ಪಾಜಕ ಕ್ಷೇತ್ರವನ್ನು ತಲುಪಿ ದೇವರ ದರ್ಶನದ ನಂತರ ಅಲ್ಲಿಂದ ಹೊರಟು 8.45 ಕ್ಕೆ ಆನೆಗುಡ್ಡೆ ಕುಂಭಾಶಿ ದೇವಸ್ಥಾನಕ್ಕೆ ತಲುಪಿದೆವು .ಅಲ್ಲಿ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026 ಎಪ್ರಿಲ್ 19
ಸ್ಥಳ : ಬಿ.ಸಿ.ರೋಡ್ ಸ್ಪರ್ಶ ಕಲಾ ಮಂದಿರ

ದಿನಾಂಕ : 2026 ಎಪ್ರಿಲ್ 19
ಸ್ಥಳ : ಸ್ಪರ್ಶ ಕಲಾ ಮಂದಿರ ಬಿ.ಸಿ.ರೋಡ್

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಯುವವಾಹಿನಿ ಡೆನ್ನಾನ ಡೆನ್ನನ 2026

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!