16-09-2016, 5:11 AM
ಬೆಳ್ತಂಗಡಿಯಲ್ಲಿ ಬ್ರಹ್ಮಶ್ರೀ ನಾರಾಯಣಗುರು ನಗರದ ನಾಮಫಲಕ ಅನಾವರಣ ಕಾರ್ಯಕ್ರಮವು ಸೆ. 16 ರಂದು ಶಾಸಕ ಕೆ. ವಸಂತ ಬಂಗೇರ ಮಾರ್ಗದರ್ಶನದಲ್ಲಿ ಜರಗಿತು. ಪಟ್ಟಣ ಪಂಚಾಯತ್ ಬೆಳ್ತಂಗಡಿ, ಯುವವಾಹಿನಿ ಸಂಚಾಲನಾ ಸಮಿತಿ ಬೆಳ್ತಂಗಡಿ ನಗರ ಇವರ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣಗುರುಗಳ ಜನ್ಮದಿನದ ಸಂದರ್ಭದಲ್ಲಿ ಬೆಳ್ತಂಗಡಿ ಹಳೆಕೋಟೆ ಸಾಯಿ ಮಂದಿರದ ಎದುರುಗಡೆ ಶ್ರೀ ನಾರಾಯಣಗುರು ನಗರದ ನಾಮಫಲಕವನ್ನು ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಎನ್. ಪದ್ಮನಾಭ ಅನಾವರಣಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬೆಳ್ತಂಗಡಿ ಪಟ್ಟಣ ಪಂಚಾಯತ್ ಅಧ್ಯಕ್ಷ ಮುಗುಳಿ ನಾರಾಯಣರಾವ್ […]
Read More
16-09-2016, 5:10 AM
ದಿ. 16-9-2016 ರ ಗುರುಜಯಂತಿಯಂದು ಹಳೆಯಂಗಡಿ ಘಟಕದ ವತಿಯಿಂದ ಹಳೆಯಂಗಡಿ ಗ್ರಾಮ ಪಂಚಾಯತ್ ಸಹಕಾರದೊಂದಿಗೆ ಹಳೆಯಂಗಡಿ ಪರಿಸರದ ಹಳೆಯಂಗಡಿ-ಕೊಪ್ಪಳ ಸಂಪರ್ಕ ರಸ್ತೆಯನ್ನು ಅಧಿಕೃತವಾಗಿ ಬ್ರಹ್ಮಶ್ರೀ ನಾರಾಯಣ ಗುರು ರಸ್ತೆ ಎಂಬ ನಾಮಕರಣದಲ್ಲಿ ಶಾಸಕ ಅಭಯಚಂದ್ರ ಜೈನ್ರವರಿಂದ ಉದ್ಘಾಟಿಸಲಾಯಿತು. ಈ ಕಾರ್ಯಕ್ರಮದಲ್ಲಿ ಘಟಕದ ಹೆಚ್ಚಿನ ಸದಸ್ಯರು ಭಾಗವಹಿಸಿ, ಹಳೆಯಂಗಡಿ ಪರಿಸರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುವರ್ಯರ ಹೆಸರು ಸದಾ ರಾರಾಜಿಸುವಂತೆ ಮಾಡುವಲ್ಲಿ ಯಶಸ್ವಿಯಾಗಿರುತ್ತೇವೆ.
Read More
11-09-2016, 5:19 AM
ದಿನಾಂಕ 11-9-2016 ರಂದು ಹೆಜಮಾಡಿ ಘಟಕದ ವತಿಯಿಂದ ಗುರುಜಯಂತಿಯ ಪ್ರಯುಕ್ತ ಹೆಜಮಾಡಿ ನಾಲ್ಕು ಕರೆಯ ಗ್ರಾಮಸ್ಥರಿಗೆ ಜರಗಿದ ಕ್ರೀಡಾಕೂಟ ’ಹಗ್ಗಜಗ್ಗಾಟ’ ಕಾರ್ಯಕ್ರಮ. ಹೆಜಮಾಡಿ ಘಟಕದ ವತಿಯಿಂದ ಜರಗಿದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ. ತಾ. 6-9-2016 ರಂದು ಸುರತ್ಕಲ್ ಘಟಕದ ವತಿಯಿಂದ ಸುರತ್ಕಲ್ ಲಯನ್ಸ್ ಕ್ಲಬ್ನ ಸ್ಪೆಷಲ್ ಚಿಲ್ಡ್ರನ್ಸ್ ಸ್ಕೂಲ್(ವಿಶೇಷ ಮಕ್ಕಳ ಶಾಲೆ)ನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಜರಗಿತು. ಅಲ್ಲಿದ್ದ ಶಿಕ್ಷಕರನ್ನು ಗೌರವಿಸಿ ಸನ್ಮಾನಿಸಲಾಯಿತು. ಹೆಜಮಾಡಿ ಘಟಕದ ವತಿಯಿಂದ ಕಾಯಿಲೆಯಿಂದ ಬಳಲುತ್ತಿರುವ ವಿದ್ಯಾರ್ಥಿನಿಗೆ ರೂ. 10,000/- ವೈದ್ಯಕೀಯ ನೆರವು ವಿತರಣೆ
Read More
11-09-2016, 5:14 AM
ಯುವವಾಹಿನಿ ಬೆಳ್ತಂಗಡಿ ಘಟಕದ 2016-17 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ದಿ. 11-9-2016 ರಂದು ಜರಗಿತು. ಕಾರ್ಯಕ್ರಮವನ್ನು ಶಾಸಕ ಕೆ. ವಸಂತ ಬಂಗೇರರವರು ಉದ್ಘಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾಗಿ ಬಿಲ್ಲವ ಮಹಾಮಂಡಲದ ಉಪಾಧ್ಯಕ್ಷ, ನಿವೃತ್ತ ಪೊಲೀಸ್ ವರಿಷ್ಠಾಧಿಕಾರಿ ಬಿ.ಪಿತಾಂಬರ ಹೇರಾಜೆ, ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ. ಸುವರ್ಣ, ಯುವವಾಹಿನಿ ಕೇಂದ್ರ ಸಮಿತಿಯ ಸಲಹೆಗಾರ ಬಿ. ತಮ್ಮಯ ಭಾಗವಹಿಸಿದ್ದರು. ಈ ಶುಭ ಸಂದರ್ಭದಲ್ಲಿ ಶ್ರೀ ಬಿ. ತಮ್ಮಯರವರು ಬರೆದ ತುಲುವೆ ಅನ್ನುವ ತುಳು ಲಿಪಿ […]
Read More
11-09-2016, 5:01 AM
ದಿ. 11-09-2016 ರಂದು ಕೂಳೂರು ಬ್ರಹ್ಮಶ್ರಿ ನಾರಾಯಣ ಗುರು ಸೇವಾ ಮಂದಿರದ ಸಭಾಂಗಣದಲ್ಲಿ ಯುವವಾಹಿನಿ ಕೂಳೂರು ಘಟಕದ ಉದ್ಘಾಟನಾ ಸಮಾರಂಭ ಹಾಗೂ ಪದಗ್ರಹಣ ಕಾರ್ಯಕ್ರಮ ಜರಗಿತು. ಕೂಳೂರು ಬ್ರಹ್ಮಶ್ರೀ ನಾರಾಯಣಗುರು ಸೇವಾ ಮಂದಿರದ ಗೌರವಾಧ್ಯಕ್ಷ ರಾಘವೇಂದ್ರ ಕೂಳೂರು ನೂತನ ಘಟಕದ ಉದ್ಘಾಟನೆಯನ್ನು ನೆರವೇರಿಸಿ ಘಟಕದ ಸರ್ವರಿಗೂ ಶುಭ ಹಾರೈಸಿದರು. ನೂತನ ಪದಾಧಿಕಾರಿಗಳ ಘೋಷಣೆಯನ್ನು ಮಂಗಳೂರು ತಾಲೂಕು ಸಂಘಟನಾ ಕಾರ್ಯದರ್ಶಿ ಹರೀಶ್ ಕೆ. ಪೂಜಾರಿ ಇವರು ನೆರವೇರಿಸಿಕೊಟ್ಟರು. ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷ ಪದ್ಮನಾಭ ಮರೋಳಿಯವರು ನೂತನ […]
Read More
07-09-2016, 5:12 AM
ದಿ. 7-9-2016 ರಂದು ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯಲ್ಲಿ ನೆರೆದ ಭಕ್ತಾಭಿಮಾನಿಗಳಿಗೆ ಘಟಕದ ವತಿಯಿಂದ ಬಿಲ್ಲವ ಸಮಾಜ ಸೇವಾ ಸಂಘ ಹಳೆಯಂಗಡಿ ಇದರ ಮುಂಭಾಗದಲ್ಲಿ 1000 ಜನರಿಗೆ ರೂ. 16,000/- ಮೊತ್ತದ ಉಪಹಾರದ ವ್ಯವಸ್ಥೆಯನ್ನು ಕಲ್ಪಿಸಿ, ಹಳೆಯಂಗಡಿ ಸಾರ್ವಜನಿಕ ಗಣೇಶೋತ್ಸವದ ಶೋಭಾ ಯಾತ್ರೆಯ ಯಶಸ್ಸಿಗೆ ಸಹಕಾರ ನೀಡಲಾಗಿರುತ್ತದೆ.
Read More
05-09-2016, 5:26 AM
ಶ್ರೀ ನಾರಾಯಣಗುರು ವಿದ್ಯಾ ಸಂಸ್ಥೆ ಮುಲ್ಕಿ ಹಾಗೂ ಯುವವಾಹಿನಿ (ರಿ) ಮೂಲ್ಕಿ ಘಟಕ ಇವರ ಜಂಟಿ ಸಹಭಾಗಿತ್ವದಲ್ಲಿ ಶಿಕ್ಷಕರ ದಿನಾಚರಣೆಯನ್ನು ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ಜರಗಿತು. ಯುವವಾಹಿನಿ(ರಿ) ಕೇಂದ್ರ ಸಮಿತಿ ಅಧ್ಯಕ್ಷ ಪದ್ಮನಾಭ ಮರೋಳಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಶ್ರೀ ನಾರಾಯಣಗುರು ವಿದ್ಯಾಸಂಸ್ಥೆಯ ಹಿರಿಯ ಶಿಕ್ಷಕರಾದ ಹೇಮರಾಜ್ ಹಾಗೂ ಶ್ರೀಮತಿ ಜಯಶ್ರೀ ಇವರನ್ನು ಶಿಕ್ಷಕ ದಿನಾಚರಣೆಯ ಅಂಗವಾಗಿ ಸನ್ಮಾನಿಸಲಾಯಿತು. ಮೂಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ಗೋಪಿನಾಥ ಪಡಂಗರವರು ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ನಾರಾಯಣ ಗುರು ವಿದ್ಯಾಸಂಸ್ಥೆಯ ಸಂಚಾಲಕ […]
Read More
27-08-2016, 5:28 AM
ದಿನಾಂಕ 27-8-2016ರಂದು ವೇಣೂರಿನಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರವು ಘಟಕದ ಅಧ್ಯಕ್ಷ ಸದಾನಂದ ಪೂಜಾರಿ ಉಂಗಿಲಬೈಲು ಅಧ್ಯಕ್ಷತೆಯಲ್ಲಿ ಜರಗಿತು. ನಿವೃತ್ತ ಎಸ್.ಪಿ. ಪೀತಾಂಬರ ಹೇರಾಜೆಯವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಅಳದಂಗಡಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕ ಪ್ರಶಾಂತ್ ಕುಮಾರ್ರವರು ಶಿಬಿರವನ್ನು ನಡೆಸಿಕೊಟ್ಟರು. ಮಹಾಮಾನವತವಾದಿ ನಾರಾ ಯಣ ಗುರುಗಳು ಎಂಬ ವಿಷಯದ ಬಗ್ಗೆ ತಾಲೂಕು ಮಟ್ಟದ ಭಾಷಣ ಸ್ಪರ್ಧೆಯಲ್ಲಿ ರಕ್ಷಾ ಪ್ರಥಮ ಸ್ಥಾನವನ್ನು ಪಡೆದರು. ಅಂದಿನ ಕಾರ್ಯಕ್ರಮದಲ್ಲಿ ಎಸ್.ಎಸ್.ಎಲ್.ಸಿ. ಯಲ್ಲಿ ತಾಲೂಕಿನಲ್ಲಿ ಪ್ರಥಮ ಸ್ಥಾನ ಪಡೆದ ನಿಶಾ, ನೀರಿಕ್ಷಾ ಎನ್. ನಾವರ, ಆಕೃತಿ […]
Read More
27-08-2016, 5:22 AM
ಮಂಗಳೂರು ಘಟಕದ ವತಿಯಿಂದ ದಿನಾಂಕ 27-08-2016 ರಂದು ಗೋಕರ್ಣನಾಥ ಕಾಲೇಜ್ನಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿ ಯರಿಗೆ ನಾಯಕತ್ವ ತರಬೇತಿ ಶಿಬಿರ ನಡೆಯಿತು. 27 ಈ ತರಬೇತಿ ಶಿಬಿರದಲ್ಲಿ ಸುಮಾರು 10 ಕಾಲೇಜುಗಳಿಂದ 48 ವಿದ್ಯಾರ್ಥಿಗಳು ಭಾಗವಹಿಸಿರುವರು. ಶಿಬಿರದ ಉದ್ಘಾಟನೆಯನ್ನು ಬಿ.ಜಿ.ಎಸ್. ಕಾಲೇಜಿನ ಪ್ರಾಧ್ಯಾಪಕ ಕೇಶವ ಕಟೀಲು ನೆರವೇರಿಸಿದರು. ಅಡ್ಯಾರು ಸಹ್ಯಾದ್ರಿ ಎಂ.ಬಿ.ಎ. ಕಾಲೇಜಿನ ಪ್ರಾಧ್ಯಾಪಕ ಪದ್ಮನಾಭರವರು ತರಬೇತಿಯನ್ನು ನಡೆಸಿಕೊಟ್ಟರು. ವಕೀಲರಾದ ನವನೀತ್ ಡಿ. ಹಿಂಗಾಣಿಯವರು ಬಿಲ್ಲವ ಸಂಘಟನೆಯಲ್ಲಿ ವಿದ್ಯಾರ್ಥಿಗಳ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ನಂತರ ನರೇಶ್ ಸಸಿಹಿತ್ಲು ಯುವವಾಹಿನಿ […]
Read More