Yuvavahini

ಘಟಕಗಳು

ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರದಲ್ಲಿ ಯುವವಾಹಿನಿ ಶಕ್ತಿ ನಗರ ಘಟಕದಿಂದ ಸ್ವಯಂಸೇವೆ

ಮಂಗಳೂರು: ಬ್ರಹ್ಮಶ್ರೀ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವಾರ್ಷಿಕ ಜಾತ್ರಾ ಉತ್ಸವದ ಅಂಗವಾಗಿ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಶಕ್ತಿ ನಗರ ಘಟಕದ ಸದಸ್ಯರಿಂದ ಸ್ವಯಂಸೇವಾ ಕಾರ್ಯ ನಡೆಯಿತು. ಜಾತ್ರೋತ್ಸವಕ್ಕೆ ಆಗಮಿಸಿದ ಭಕ್ತಾದಿಗಳಿಗೆ ಅನುಕೂಲವಾಗುವಂತೆ ಸ್ವಚ್ಛತೆ, ಶಿಸ್ತು ಹಾಗೂ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಪಾಲ್ಗೊಂಡರು. ಸೇವೆಯೇ ಸಾಧನೆ ಎಂಬ ಧ್ಯೇಯದೊಂದಿಗೆ ಯುವವಾಹಿನಿ ಶಕ್ತಿ ನಗರ ಘಟಕದ ಸದಸ್ಯರು ಸಮಾಜಮುಖಿ ಸೇವೆ ಸಲ್ಲಿಸಿ ಮೆಚ್ಚುಗೆಗೆ ಪಾತ್ರರಾದರು. ಈ ಸ್ವಯಂಸೇವಾ ಕಾರ್ಯವು ಯುವವಾಹಿನಿಯ […]

Read More

ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರದ ವರ್ಷಾವಧಿ ಉತ್ಸವದಲ್ಲಿ ಯುವವಾಹಿನಿ ಕೊಲ್ಯ ಘಟಕದ ಸ್ವಯಂಸೇವೆ

ಮಂಗಳೂರು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿ ಇಲ್ಲಿ ನಡೆದ ವರ್ಷಾವಧಿ ಉತ್ಸವದ ಪ್ರಯುಕ್ತ, ದಿನಾಂಕ 04-01-2026 ರಂದು ಯುವವಾಹಿನಿ (ರಿ.) ಕೊಲ್ಯ ಘಟಕದ ಸದಸ್ಯರು ಸ್ವಯಂಸೇವಾ ಕಾರ್ಯದಲ್ಲಿ ತೊಡಗಿ ಸೇವೆ ಸಲ್ಲಿಸಿದರು. ಉತ್ಸವದ ವೇಳೆ ಭಕ್ತಾದಿಗಳಿಗೆ ಸಹಾಯ, ಶಿಸ್ತು ಹಾಗೂ ಸ್ವಚ್ಛತೆ ಕಾಪಾಡುವ ಸೇವಾ ಕಾರ್ಯಗಳಲ್ಲಿ ಘಟಕದ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದರು. ಸಮಾಜಮುಖಿ ಸೇವೆಯ ಮೂಲಕ ಯುವವಾಹಿನಿ ಕೊಲ್ಯ ಘಟಕವು ಸಂಘಟನೆಯ ಸೇವಾ ಧ್ಯೇಯವನ್ನು ಮತ್ತೊಮ್ಮೆ ಸಾರಿತು.

Read More

ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ಕ್ಷೇತ್ರದರ್ಶನ

ಮಂಗಳೂರು: ನೆಲ್ಲಿತೀರ್ಥ ಶ್ರೀ ಸೋಮನಾಥೇಶ್ವರ ಗುಹಾಲಯ ದೇವಸ್ಥಾನದ ಜಾತ್ರಾ ಮಹೋತ್ಸವದ ಪ್ರಯುಕ್ತ, ದಿನಾಂಕ 04-01-2026 ರ ಆದಿತ್ಯವಾರದಂದು ಯುವವಾಹಿನಿ (ರಿ.) ಕೆಂಜಾರು–ಕರಂಬಾರು ಘಟಕದ ವತಿಯಿಂದ ಕ್ಷೇತ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಬೆಳಿಗ್ಗೆ 10 ಗಂಟೆಗೆ ಕರಂಬಾರು ಮಾರಿಯಮ್ಮ ಕೋಟೆ ಬಬ್ಬುಸ್ವಾಮಿ ಪರಿವಾರ ದೈವಗಳಿಗೆ ಪ್ರಾರ್ಥನೆ ಸಲ್ಲಿಸಿದ ಬಳಿಕ, ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರು, ಯುವವಾಹಿನಿ ಸದಸ್ಯರು, ಗ್ರಾಮಸ್ಥರು ಹಾಗೂ ಮಕ್ಕಳು ಸೇರಿ ಒಟ್ಟು 72 ಮಂದಿ ಒಂದೇ ಬಸ್ಸಿನಲ್ಲಿ ಪುಣ್ಯಕ್ಷೇತ್ರಕ್ಕೆ ತೆರಳಿದರು. ದೇವಾಲಯದ ಕೆರೆಯಲ್ಲಿ ಸ್ನಾನ ಮಾಡಿ, ಅರ್ಚಕರ […]

Read More

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ

ದೈವ ದಶಕಂ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮದಲ್ಲಿ ಯುವವಾಹಿನಿ ಮಹಿಳಾ ಘಟಕದ ಭಾಗವಹಿಕೆ ಮಂಗಳೂರು: ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.) ಆಶ್ರಯದಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆತಿಥ್ಯದಲ್ಲಿ, ಕ್ಷೇತ್ರದ ಸಭಾಂಗಣದಲ್ಲಿ ದಿನಾಂಕ 04-01-2026ರಂದು ಪೂಜ್ಯ ನಾರಾಯಣ ಗುರುಗಳು ರಚಿಸಿದ “ದೈವ ದಶಕಂ” ಕೃತಿಯ ಕನ್ನಡ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮ ನಡೆಯಿತು. ಧಾರ್ಮಿಕ ಹಾಗೂ ಸಾಂಸ್ಕೃತಿಕ ಮಹತ್ವ ಹೊಂದಿದ ಈ ಕಾರ್ಯಕ್ರಮದಲ್ಲಿ ಯುವವಾಹಿನಿ (ರಿ.) ಮಂಗಳೂರು ಮಹಿಳಾ ಘಟಕದ ಸದಸ್ಯರು […]

Read More

ಯುವವಾಹಿನಿ ಸದಸ್ಯರ ಸ್ವಯಂ ಸೇವೆ

ಪಣಂಬೂರು ಕುಳಾಯಿ : ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ, ಕಂಕನಾಡಿಯಲ್ಲಿ ನಡೆದ ವರ್ಷಾವಧಿ ಉತ್ಸವದ ಸಂದರ್ಭದಲ್ಲಿ ದಿನಾಂಕ 04.01.2026 ರಂದು ಯುವವಾಹಿನಿ (ರಿ.) ಪಣಂಬೂರು–ಕುಳಾಯಿ ಘಟಕದ ಸದಸ್ಯರು ಸ್ವಯಂಸೇವೆಯ ಮೂಲಕ ಕಾರ್ಯಕ್ರಮದ ಯಶಸ್ಸಿಗೆ ಕೈಜೋಡಿಸಿದರು. ಉತ್ಸವದ ಅವಧಿಯಲ್ಲಿ ಶಿಸ್ತು, ಸಹಕಾರ ಮತ್ತು ಸೇವಾಭಾವನೆಯೊಂದಿಗೆ ಯುವವಾಹಿನಿ ಸದಸ್ಯರು ಕಾರ್ಯ ನಿರ್ವಹಿಸಿದರು

Read More

ಯುವವಾಹಿನಿ (ರಿ) ಸುರತ್ಕಲ್ ಘಟಕದಿಂದ ಎರಡು ದಿನಗಳ ಪ್ರವಾಸ

ಸುರತ್ಕಲ್ : ಯುವವಾಹಿನಿ (ರಿ) ಸುರತ್ಕಲ್ ಘಟಕದ ವತಿಯಿಂದ ಎರಡು ದಿನಗಳ ಸಂಘಟನಾ ಪ್ರವಾಸವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ದಿನಾಂಕ 03.01.2026ರಂದು ಸುರತ್ಕಲ್ ಬಸ್‌ಸ್ಟ್ಯಾಂಡ್‌ನಿಂದ ಪ್ರಯಾಣ ಆರಂಭಿಸಿದ ತಂಡವು ಸೂರ್ಮನೆ ವಾಟರ್‌ಫಾಲ್, ಹೊರನಾಡು ದೇವಸ್ಥಾನ, ಕ್ಯಾತನಮಕ್ಕಿ ರೆಸಾರ್ಟ್ ಹಾಗೂ ಸನ್‌ಸೆಟ್ ಪಾಯಿಂಟ್ ಸೇರಿದಂತೆ ವಿವಿಧ ಪ್ರವಾಸಿ ತಾಣಗಳಿಗೆ ಭೇಟಿ ನೀಡಿತು. ದಿನಪೂರ್ತಿ ಪ್ರವಾಸಿ ಸ್ಥಳಗಳನ್ನು ವೀಕ್ಷಿಸಿದ ನಂತರ ತಂಡವು ರೆಸಾರ್ಟ್‌ನಲ್ಲಿ ವಿಶ್ರಾಂತಿ ಪಡೆದುಕೊಂಡಿತು. ಮರುದಿನ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನದ ಊಟ ಮುಗಿಸಿ, ಹಿಂತಿರುಗುವ ಸಂದರ್ಭದಲ್ಲಿ ದಾರಿಮಧ್ಯೆ ಕಂಡುಬಂದ […]

Read More

ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ

ಕಾರ್ಕಳ: ಯುವವಾಹಿನಿ (ರಿ.) ಕಾರ್ಕಳ ಘಟಕದ ವತಿಯಿಂದ “ಗುರುಭೋ ನಮಃ – ಯುವಮನಸ್ಸಿಗೆ ಗುರು ಸಂದೇಶ” ಕಾರ್ಯಕ್ರಮವು ಜನವರಿ 3ರಂದು ಘಟಕದ ಪೂರ್ವಾಧ್ಯಕ್ಷರಾದ ಗಣೇಶ್ ಸಾಲ್ಯಾನ್ ಅವರ ನಿವಾಸದಲ್ಲಿ ಭಕ್ತಿಭಾವದಿಂದ ನಡೆಯಿತು. ಕಾರ್ಯಕ್ರಮವನ್ನು ನಾರಾಯಣಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ್ ಪೂಜಾರಿ ಮುದ್ರಾಡಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಬ್ರಹ್ಮಶ್ರೀ ನಾರಾಯಣ ಗುರುಗಳ ಆದರ್ಶ ತತ್ವಗಳನ್ನು ಸಮಾಜದ ಎಲ್ಲ ವರ್ಗಗಳಿಗೆ ತಲುಪಿಸುವ ಉದ್ದೇಶದಿಂದ ಸರಕಾರ ಮಟ್ಟದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು […]

Read More

ನಾರಾಯಣಗುರುಗಳ ಸಂದೇಶ ಸಮಾಜದ ಸಮರಸತೆಗೆ ಪ್ರೇರಣೆ

ಬಂಟ್ವಾಳ : ಬ್ರಹ್ಮಶ್ರೀ ನಾರಾಯಣಗುರುಗಳ ಸಂದೇಶವು ಜಾತಿ–ಮತ–ಭೇದಗಳನ್ನು ಮೀರಿ ಮಾನವೀಯತೆಯ ಆಧಾರದ ಮೇಲೆ ಸಮಾಜವನ್ನು ಒಗ್ಗೂಡಿಸುವ ಶಾಶ್ವತ ಚಿಂತನೆಯಾಗಿದೆ. ಗುರುಗಳ ತತ್ತ್ವಗಳು, ಶಾಂತಿ, ಸೌಹಾರ್ದತೆ ಮತ್ತು ಸಮತೋಲನದ ಸಮಾಜ ನಿರ್ಮಾಣಕ್ಕೆ ದಾರಿದೀಪವಾಗಿವೆ. ಗುರುಗಳ ಸಂದೇಶವನ್ನು ಬದುಕಿನಲ್ಲಿ ಅಳವಡಿಸಿಕೊಂಡಾಗ ಮಾತ್ರ ನಿಜವಾದ ಸಮಾಜ ಸಮರಸತೆ ಸಾಧ್ಯವಾಗುತ್ತದೆ ಎಂಬ ಸತ್ಯವನ್ನು ಈ ಚಿಂತನೆ ನಮಗೆ ನೆನಪಿಸುತ್ತದೆ ಎಂದು ಪೆರಿಯಾವು ಗುತ್ತು ಶಿವರಾಜ್ ಗಟ್ಟಿ ಹೇಳಿದರು. ಅವರು ಜನವರಿ 01ರಂದು ಶ್ರೀ ಅಯ್ಯಪ್ಪ ಸ್ವಾಮಿ ಮಂದಿರ ರಾಮನಗರ ಮದ್ವದಲ್ಲಿ, ಯುವವಾಹಿನಿ ಬಂಟ್ವಾಳ […]

Read More

ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮ

ಬೆಳ್ತಂಗಡಿ: ಯುವವಾಹಿನಿ (ರಿ.) ಬೆಳ್ತಂಗಡಿ ಘಟಕದ ಆಶ್ರಯದಲ್ಲಿ ಹಾಗೂ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ, ಬೆಳ್ತಂಗಡಿ ತಾಲೂಕು ಇವರ ಸಹಕಾರದೊಂದಿಗೆ ದಿನಾಂಕ 30-12-2025ರಂದು ಸಂಭ್ರಮ ಯುವವಾಹಿನಿ ಕುಟುಂಬದ ಸ್ನೇಹ ಸಮ್ಮಿಲನ ಕಾರ್ಯಕ್ರಮವು ಘಟಕದ ನಿರ್ದೇಶಕ ಸೌಮ್ಯ ಲಾಯಿಲಾ ಅವರ “ಕನಸು” ನಿವಾಸದಲ್ಲಿ ಯುವವಾಹಿನಿ ಕುಟುಂಬ ಸದಸ್ಯರ ಭಾಗವಹಿಸುವಿಕೆಯೊಂದಿಗೆ ನಡೆಯಿತು. ಘಟಕದ ಅಧ್ಯಕ್ಷ ಗುರುರಾಜ್ ಗುರಿಪಳ್ಳ ಅವರ ಅಧ್ಯಕ್ಷತೆಯಲ್ಲಿ ಆರಂಭವಾದ ಕಾರ್ಯಕ್ರಮವನ್ನು ಹಿರಿಯರಾದ ಗಿರಿಧರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಘಟಕದ ಸ್ಥಾಪಕ ಅಧ್ಯಕ್ಷ ರಾಕೇಶ್ ಕುಮಾರ್ ಮೂಡುಕೋಡಿ, […]

Read More

ಶಿವಗಿರಿ ತೀರ್ಥಾಟನೆ

ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯರು ಹಾಗೂ ಬ್ರಹ್ಮಶ್ರೀ ನಾರಾಯಣಗುರುಗಳ ಅನುಯಾಯಿಗಳ ತಂಡವು ದಿನಾಂಕ: 29- 12-2025 ರಂದು ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, ಕೇರಳದ ಶಿವಗಿರಿಯಲ್ಲಿ ಡಿಸಂಬರ್ 30, 31 ರಂದು ನಡೆಯಲಿರುವ ತೀರ್ಥಾಟನೆಯಲ್ಲಿ ಭಾಗವಹಿಸಲು ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.)ಮಂಗಳೂರು ಘಟಕದ ಮಾಜಿ ಅಧ್ಯಕ್ಷರುಗಳಾದ ಹರೀಶ್ ಪೂಜಾರಿ, ಹರೀಶ್ ವಿ. ಪಚ್ಚನಾಡಿ ಮತ್ತು ಘಟಕದ ಸದಸ್ಯರು ಉಪಸ್ಥಿತರಿದ್ದರು.

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026, ಮಾರ್ಚ್ 14
ಸ್ಥಳ : ಮಂಗಳೂರು ಪುರಭವನ

ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಕೊಲ್ಯ ಘಟಕದ ಆತಿಥ್ಯದಲ್ಲಿ, “ಸಖೀ ಸಂವಾದ”ಕಾರ್ಯಾಗಾರ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶ ಸಂಪನ್ನ

ಮೂಡುಬಿದಿರೆ : ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 37ನೇ ವಾರ್ಷಿಕ ಸಮಾವೇಶವು ಮೂಡಬಿದಿರೆಯ ಸ್ಜೌಟ್ಸ್ ಗೈಡ್ಸ್ ಕನ್ನಡ ಭವನದಲ್ಲಿ ದಿನಾಂಕ‌ 29-12-2024 ರಂದು ಸಂಪನ್ನಗೊಂಡಿತು. ಯುವವಾಹಿನಿಯ ಶಿಸ್ತು, ಅಚ್ಚುಕಟ್ಟುತನ, ಹೊಸತನ ಎಲ್ಲರಿಗೂ ಮಾದರಿ :...

Sunday, 29-12-2024
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
error: Content is protected !!