ಘಟಕಗಳು

ವಿದ್ಯಾ ನಿಧಿ ಸ್ವೀಕರಿಸಿದ ಮಕ್ಕಳು ಮುಂದಿನ ದಿನಗಳಲ್ಲಿ ವಿದ್ಯಾ ನಿಧಿ ಕೊಡುವಂತಹ ಮನಸುಳ್ಳವರಾಗಿ ಬೆಳೆಯಬೇಕು : ಡಾ.ಉಜ್ವಲ್ ಯು ಸುವರ್ಣ, ಎಂ.ಬಿ.ಬಿ.ಎಸ್, ಎಂ.ಎಸ್ (ಆರ್ಥೋ)

ಕೂಳೂರು : ವಿದ್ಯಾನಿಧಿ ಸ್ವೀಕರಿಸಿದ ವಿದ್ಯಾರ್ಥಿಗಳು ಉದ್ಯೋಗ ಪಡೆದ ನಂತರ ವಿದ್ಯಾನಿಧಿ ನೀಡುವ ಮನೋಭಾವ ಬೆಳೆಸಿಕೊಂಡು, ಮುಂಬರುವ ದಿನಗಳಲ್ಲಿ ವಿದ್ಯಾ ನಿಧಿ ವಿತರಿಸುವಂತಾಗಲಿ ಎಂದು ಡಾ.ಉಜ್ವಲ್ ಯು.ಸುವರ್ಣ ಎಂದು ಹಾರೈಸಿದರು. ಅವರು ದಿನಾಂಕ 21-01-2024 ರಂದು ಕೂಳೂರು ಫಲ್ಗುಣಿ ಸಭಾಂಗಣ ನಡೆದ ಯುವವಾಹಿನಿ (ರಿ.) ಕೂಳೂರು ಘಟಕದ ಪದಗ್ರಹಣ ಹಾಗೂ ವಿದ್ಯಾನಿಧಿ ವಿತರಣೆ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಯಶವಂತ್ ಪೂಜಾರಿ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಟ್ರಸ್ಟಿ ರವಿಶಂಕರ್ […]

Read More

ನಿನ್ನೊಳಗಿನ ನಾಯಕನ ಅನ್ವೇಷಣೆ, ನಾಯಕತ್ವದ ಹೆಬ್ಬಾಗಿಲು :ನಿತೇಶ್ ಬಲ್ಲಾಳ್

ಮೂಡುಬಿದಿರೆ : ಯಾವ ವ್ಯಕ್ತಿಯಲ್ಲಿ ಸ್ವಾಭಿಮಾನದ ಜೊತೆಗೆ ಎಲ್ಲರನ್ನೂ ಗೌರವಿಸಿ ಮಾತನಾಡುವ ಗುಣವಿದೆಯೋ ಅಂಥವರು ಒಬ್ಬ ಉತ್ತಮ ನಾಯಕ ಎನಿಸಿಕೊಳ್ಳಲು ಅರ್ಹನಾಗಿರುತ್ತಾನೆ, ನಿನ್ನೊಳಗಿನ ನಾಯಕನ ಅನ್ವೇಷಣೆ ಕಾರ್ಯ ನಿರಂತರ ನಡೆಯಬೇಕಾಗಿದೆ, ಇದು ನಾಯಕತ್ವದ ಹೆಬ್ಬಾಗಿಲು ಎಂದು ಸಂಪನ್ಮೂಲ ವ್ಯಕ್ತಿ ನಿತೇಶ್ ಬಲ್ಲಾಳ್ ರವರು ಶಿಬಿರಾರ್ಥಿಗಳಿಗೆ ಮಾಹಿತಿ ನೀಡಿದರು. ಅವರು ಯುವವಾಹಿನಿ (ರಿ.) ಮೂಡಬಿದರೆ ಘಟಕದ ವತಿಯಿಂದ 2024 ನೇ ಜನವರಿ 21 ರಂದು ನಡೆದ ವ್ಯಕ್ತಿತ್ವ ವಿಕಸನ ಶಿಬಿರ ನಿನ್ನೊಳಗಿನ ನಾಯಕ ಇದರ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ […]

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ವಿಟ್ಲ : ಶ್ರೀಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 2024ನೇ ಜನವರಿ 21 ರಂದು  ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಯುವವಾಹಿನಿ (ರಿ ) ವಿಟ್ಲ ಘಟಕದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ಗುರುಪೂಜೆ

ಯುವವಾಹಿನಿ (ರಿ.) ಶಕ್ತಿನಗರ ಘಟಕ ಮತ್ತು ನಾರಾಯಣಗುರು ಮಂದಿರ ಕುಂಟಲ್ಪಾಡಿ ಇದರ ವತಿಯಿಂದ ಗುರು ಪೂಜೆಯು ದಿನಾಂಕ 18-01-2024 ರ ಗುರುವಾರದಂದು ಸಂಜೆ 8:30ಕ್ಕೆ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಸಮಾಜ ಸೇವಾ ನಿರ್ದೇಶಕರಾದ ಜಯರಾಮ್ ಪೂಜಾರಿ ಅವರ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಗೌರವಿಸಲಾಯಿತು. ಕೇಂದ್ರ ಸಮಿತಿಯ ಕೋಶಾಧಿಕಾರಿಗಳಾದ ಹರೀಶ್ ವಿ ಪಚ್ಚನಾಡಿ, ಪ್ರಚಾರ ನಿರ್ದೇಶಕರಾದ ಪೃಥ್ವಿರಾಜ್ ಎಂ ಕಂಕನಾಡಿ, ಘಟಕದ ಮಾಜಿ ಅಧ್ಯಕ್ಷರಾದ ಭಾರತಿ ಜಿ.ಅಮೀನ್, ಕೇಂದ್ರ […]

Read More

ಸ್ವಚ್ಚತಾ ಕಾರ್ಯಕ್ರಮ

ಕಂಕ‌ನಾಡಿ : ಶ್ರೀ ಬ್ರಹ್ಮ ಮುಗೇರ ಮಹಾಂಕಾಳಿ ದೈವಸ್ಥಾನ ಉಜ್ಜೋಡಿ ಕಂಕನಾಡಿ ಇದರ ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ದೈವಸ್ಥಾನ ಹಾಗೂ ಉಜ್ಜೋಡಿ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮವು 2024 ನೇ ಜನವರಿ 21 ರಂದು ಬೆಳಗ್ಗೆ 7 ರಿಂದ 10ರ ವರೆಗೆ ಕಂಕನಾಡಿ ಘಟಕದ ಸದಸ್ಯರ‌ ನೇತ್ರತ್ವದಲ್ಲಿ ಜರಗಿತು. ಈ ಸ್ವಚ್ಚತಾ ಅಭಿಯಾನದಲ್ಲಿ ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು ಹಾಗೂ ಎಲ್ಲಾ ಸದಸ್ಯರು ಭಾಗವಹಿಸಿದ್ದರು.

Read More

ಆತ್ಮವಿಶ್ವಾಸದಿಂದ ಪರೀಕ್ಷೆಯನ್ನು ಎದುರಿಸಿದಾಗ ಯಶಸ್ಸು ಸಾಧ್ಯ : ಮುನಿರಾಜ ರೆಂಜಾಳ

ಮೂಡುಬಿದಿರೆ : ಎಸ್.ಎಸ್.ಎಲ್.ಸಿ ಪರೀಕ್ಷೆ ಬಹಳ ಮುಖ್ಯವಾದ ಘಟ್ಟ. ಪರೀಕ್ಷೆಯನ್ನು ಕಷ್ಟದಿಂದ ಎದುರಿಸಿದರೂ ಬಹಳ ಇಷ್ಟಪಟ್ಟು ಎದುರಿಸಿ. ಆತ್ಮ ವಿಶ್ವಾಸವಿದ್ದರೆ ಏನನ್ನು ಬೇಕಾದರೂ ಸಾಧಿಸಲು ಸಾಧ್ಯ. ಎಂತಹ ಕಷ್ಟ ಬಂದರೂ ಮೆಟ್ಟಿ ನಿಂತು ಗುರಿ ಮುಟ್ಟಬಲ್ಲೆ ಎಂಬ ಅಚಲ ನಿರ್ಧಾರ, ದೃಢವಿಶ್ವಾಸ ನಮ್ಮದಾಗಲಿ. ಉತ್ತಮವಾಗಿ ಪರೀಕ್ಷೆಯನ್ನು ಎದುರಿಸಿ ಉನ್ನತ ಮಟ್ಟದ ಅಂಕಗಳನ್ನು ಗಳಿಸುವಂತಾಗಲಿ. ಈ ನಿಟ್ಟಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಎದುರಿಸುವುದು ಬಗ್ಗೆ ಸಂಪನ್ಮೂಲ ವ್ಯಕ್ತಿ ಮುನಿರಾಜ ರೆಂಜಾಳ ವಿದ್ಯಾರ್ಥಿಗಳಿಗೆ ತಿಳಿಸಿದರು. ಅವರು ಯುವವಾಹಿನಿ(ರಿ.) ಮೂಡಬಿದರೆ ಘಟಕ, […]

Read More

ಭಜನಾ ಸಂಕೀರ್ತನೆ

ಉಪ್ಪಿನಂಗಡಿ : ಯುವವಾಹಿನಿ(ರಿ) ಉಪ್ಪಿನಂಗಡಿ ಘಟಕದ ವತಿಯಿಂದ ಪುತ್ತೂರಿನ ಬ್ರಹ್ಮಶ್ರೀ ನಾರಾಯಣಗುರು ಮಂದಿರದಲ್ಲಿ, 2024ನೇ ಜನವರಿ 15 ರಂದು ಭಜನಾ ಸಂಕೀರ್ತನಾ ಕಾರ್ಯಕ್ರಮ ಅರ್ಥಪೂರ್ಣವಾಗಿ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ಅಧ್ಯಕ್ಷರಾದ ಸೋಮಸುಂದರ್ ಕೊಡಿಪ್ಪಾನ, ಮಾಜಿ ಅಧ್ಯಕ್ಷರಾದ ಚಂದ್ರಶೇಖರ್ ಸನಿಲ್, ಕಾರ್ಯದರ್ಶಿ ಅನಿತಾ ಸತೀಶ್ ಹಾಗೂ ಪದಾಧಿಕಾರಿಗಳು ಮತ್ತು ಸದಸ್ಯರುಗಳು ಉಪಸ್ಥಿತರಿದ್ದರು.

Read More

ಸಂಘಟನೆಯಿಂದ ಸುಸಂಸ್ಕೃತ ಸಮಾಜ ನಿರ್ಮಾಣ : ಜಯಂತ್ ಪೂಜಾರಿ

ಯಡ್ತಾಡಿ: ಸಮಾಜದಲ್ಲಿ ಸಂಘಟನೆಗಳ ಅರ್ಥಪೂರ್ಣ ಕಾರ್ಯಗಳ ಮೂಲಕ ಸುಸಂಸ್ಕೃತ ಸಮಾಜ ನಿರ್ಮಾಣವಾಗುತ್ತದೆ. ಈ ದಿಸೆಯಲ್ಲಿ ಯುವವಾಹಿನಿಯು ಮುಖ್ಯ ಧ್ಯೇಯಕ್ಕೆ ಪೂರಕವಾಗಿ ಕೆಲಸ ನಿರ್ವಹಿಸುತ್ತಿರುವುದು ಶ್ಲಾಘನೀಯ ಎಂದು ಕೊಕ್ಕರ್ಣೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ್ ಪೂಜಾರಿ ಹೇಳಿದರು. ಅವರು ಯುವವಾಹಿನಿ (ರಿ) ಯಡ್ತಾಡಿ ಘಟಕದ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸ್ವೀಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಾದ ನರೇಂದ್ರ ಕುಮಾರ ಕೋಟ, ಅಂತರಾಷ್ಟ್ರೀಯ ಕ್ರೀಡಾಪಟು ಸುರೇಶ ಪೂಜಾರಿ ಸಾಸ್ತನ, […]

Read More

ಆತ್ಮವಿಶ್ವಾಸವೇ ಗೆಲುವಿನ ಮೆಟ್ಟಿಲು : ಲೋಕೇಶ್ ಎಸ್ ಆರ್ ಕ್ಷೇತ್ರ ಶಿಕ್ಷಣಧಿಕಾರಿ

ಪುತ್ತೂರು: ನಮ್ಮಲ್ಲಿರುವ ಆತ್ಮ ವಿಶ್ವಾಸ, ಬದ್ದತೆ, ಪ್ರಾಮಾಣಿಕತೆ ನಮ್ಮ ಜೀವನದ ಗೆಲುವಿನ ಪ್ರಮುಖ ಮೆಟ್ಟಿಲುಗಳು ವಿದ್ಯಾಸ್ಫೂರ್ತಿ ಯೋಜನೆಯಡಿ ಯುವವಾಹಿನಿ ಸಂಘಟನೆಯು ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ವಿದ್ಯಾರ್ಥಿಗಳು ಸ್ಫೂರ್ತಿಯಿಂದ, ಆತ್ಮವಿಶ್ವಾಸವನ್ನು ಬೆಳೆಸಿಕೊಂಡು ಪರೀಕ್ಷೆಯನ್ನು ಧೈರ್ಯದಿಂದ ಎದುರಿಸುವವರಾಗಬೇಕು ಎಂದು ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಧಿಕಾರಿ ಲೋಕೇಶ್ ಎಸ್ ಆರ್ ತಿಳಿಸಿದರು. ಅವರು ದಿನಾಂಕ 12 ಜನವರಿ 2024ರ ಶುಕ್ರವಾರದಂದು ಪುತ್ತೂರು-ಬಪ್ಪಳಿಗೆ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸಭಾಭವನದಲ್ಲಿ ಜರಗಿದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕದ ಆಶ್ರಯದಲ್ಲಿ ದ.ಕ. […]

Read More

ಕ್ರೀಡೆಯಿಂದ ದೈಹಿಕ ಸದೃಢತೆ, ಮಾನಸಿಕ ಆರೋಗ್ಯದ ಸುಧಾರಣೆ: ಲ| ಶೀನಾ ಪೂಜಾರಿ

ಮಂಗಳೂರು: ಕ್ರೀಡೆಯಲ್ಲಿ ತೊಡಗಿಸಿಕೊಂಡಲ್ಲಿ ದೈಹಿಕ ಸದೃಢತೆ ಸಾಧಿಸಿಲಾಗುವುದು ಹಾಗೂ ಮಾನಸಿಕ, ದೈಹಿಕ, ಆರೋಗ್ಯವು ಸುಧಾರಿಸುತ್ತದೆ ಎಂದು ಲಯನ್ಸ್ ಕ್ಲಬ್ ಮಂಗಳೂರು ಅಧ್ಯಕ್ಷರಾದ ಲ| ಶೀನಾ ಪೂಜಾರಿ ಇವರು ತಿಳಿಸಿದರು. ಅವರು ಯುವವಾಹಿನಿ ಮಂಗಳೂರು ಘಟಕದ ಆಶ್ರಯದಲ್ಲಿ 2024 ನೇ ಜನವರಿ 7 ರಂದು ಮಂಗಳೂರಿನ ನಂತೂರಿನ ಪಾದುವ ಕ್ರೀಡಾಂಗಣದಲ್ಲಿ ಜರುಗಿದ ವಾರ್ಷಿಕ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು. ಯುವವಾಹಿನಿ(ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಗಣೇಶ್ ಸುವರ್ಣ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು. ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 29-12-2024
ಸ್ಥಳ : ಸೈಟ್ಸ್ ಗೈಡ್ಸ್ ಕನ್ನಡ ಭವನ, ಮೂಡುಬಿದಿರೆ

ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು ಇದರ ಆಶ್ರಯದಲ್ಲಿ ಮೂಡುಬಿದಿರೆ ಘಟಕದ ಆತಿಥ್ಯದಲ್ಲಿ

ದಿನಾಂಕ : 16-11-2024
ಸ್ಥಳ : ಯುವವಾಹಿನಿ ಸಭಾಂಗಣ 3ನೇ ಮಹಡಿ, ರಘು ಬಿಲ್ಡಿಂಗ್ ಊರ್ವ ಸ್ಟೋರ್, ಮಂಗಳೂರು

ಯುವವಾಹಿನಿ (ರಿ) ಮಂಗಳೂರು ಮಹಿಳಾ ಘಟಕ

ದಿನಾಂಕ : 15-11-2024
ಸ್ಥಳ : ಸಿ. ಎಸ್. ಐ. ಬಾಲಿಕಾಶ್ರಮ, ಮೂಲ್ಕಿ

ಯುವವಾಹಿನಿ (ರಿ.) ಮೂಲ್ಕಿ ಘಟಕ

ದಿನಾಂಕ : 23-11-2024
ಸ್ಥಳ : ಸಂಪಿಗೆ ನಗರ, ಉದ್ಯಾವರ ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ದಿನಾಂಕ : 24-11-2024
ಸ್ಥಳ : ನಾಗಪ್ಪ ಕಾಂಪ್ಲೆಕ್ಸ್ , ಎನ್ .ಹೆಚ್-66, ಬಲಾಯಿಪಾದೆ, ಉಡುಪಿ

ಯುವವಾಹಿನಿ (ರಿ) ಉಡುಪಿ ಘಟಕ

ಜಾಹೀರಾತುಗಳು

ಪ್ರಮುಖ ಕಾರ್ಯಕ್ರಮ
ವಿಶುಕುಮಾರ್ ಪ್ರಶಸ್ತಿ ಪ್ರದಾನ‌ ಸಮಾರಂಭ 2024ರ

ಅವಿಸ್ಮರಣೀಯ ದೃಶ್ಯಾವಳಿ

ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ, ವಿಶುಕುಮಾರ್ ದತ್ತಿನಿಧಿ ಸಹಯೋಗದೊಂದಿಗೆ, ಯುವವಾಹಿನಿ ಪಣಂಬೂರು ಕುಳಾಯಿ ಘಟಕದ ಆತಿಥ್ಯದಲ್ಲಿ ಮಂಗಳೂರಿನ ಉರ್ವಸ್ಟೋ‌ರ್ ತುಳುಭವನದಲ್ಲಿ ಜರುಗಿದ ವಿಶುಕುಮಾ‌ರ್ ಪ್ರಶಸ್ತಿ ಪ್ರದಾನ ಸಮಾರಂಭ 2024ರ ಅವಿಸ್ಮರಣೀಯ...

Tuesday, 26-11-2024
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ) ಮಂಗಳೂರು ಘಟಕದ ಆತಿಥ್ಯದಲ್ಲಿ

ಅರವಿಪುರದಿಂದ ಓಂಕಾರೇಶ್ವರದವರೆಗೆ ಗ್ರಂಥ ಲೋಕಾರ್ಪಣೆ

ಮಂಗಳೂರು: ಯುವವಾಹಿನಿ ಕೇಂದ್ರ ಸಮಿತಿ ಆಶ್ರಯದಲ್ಲಿ ಮಂಗಳೂರು ಘಟಕದ ಆತಿಥ್ಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 170ನೇ ಜಯಂತಿಯ ಪ್ರಯುಕ್ತ ನಾರಾಯಣಗುರುಗಳ ಸ್ವಹಸ್ತದಿಂದ ಹಾಗೂ ಅವರ ನಿಷ್ಠಾವಂತ ಶಿಷ್ಯರಿಂದ ಪ್ರತಿಷ್ಠಾಪಿಸಲ್ಪಟ್ಟ ಪವಿತ್ರ ಕ್ಷೇತ್ರಗಳ ಪರಿಚಯವನ್ನು ಒಳಗೊಂಡಿರುವ, ಡಾ.ಮೀನಾಕ್ಷಿ ರಾಮಚಂದ್ರರಿಂದ ಕನ್ನಡಕ್ಕೆ ಅನುವಾದಿಸಲ್ಪಟ್ಟ ಅರವಿಪುರದಿಂದ...

Saturday, 24-08-2024
ಬಂಟ್ವಾಳದಲ್ಲಿ ಸಂಪನ್ನಗೊಂಡ ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶ

ಹೊಸತನದ ಮೆರುಗು… ಸಮಾವೇಶದ ಮಿನುಗು…

ಯುವವಾಹಿನಿಯ 36 ನೇ ವಾರ್ಷಿಕ ಸಮಾವೇಶವು ಬಂಟ್ವಾಳದ ಬೆಂಜನಪದವು ಶುಭಲಕ್ಷ್ಮೀ ಸಭಾಂಗಣದಲ್ಲಿ ದಿನಾಂಕ 24.12.2023 ರಂದು  ಸಂಪನ್ನಗೊಂಡಿತು. ಯುವವಾಹಿನಿಯು ವಿದ್ಯೆ ಉದ್ಯೋಗ ಸಂಪರ್ಕದ ಜೊತೆ ಸಮಾಜದ ಅಭಿವೃದ್ಧಿಗಾಗಿ ರಾಜಕೀಯ ಪ್ರಜ್ಞೆಯನ್ನು ಬೆಳೆಸುವ ಅಗತ್ಯವನ್ನು ಕೂಡ ಹೇಳುತ್ತದೆ ಹಾಗೂ ಕಟ್ಟಕಡೆಯ ವ್ಯಕ್ತಿಗಳನ್ನು ಮುಖ್ಯವಾಹಿನಿಗೆ...

Sunday, 24-12-2023
ಯುವವಾಹಿನಿ (ರಿ) ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬೆಂಜನಪದವು ಶುಭಲಕ್ಷ್ಮೀ ಆಡಿಟೋರಿಯಂನಲ್ಲಿ ಜರುಗಿದ ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಅವಿಸ್ಮರಣೀಯ ದೃಶ್ಯವಳಿ

ಯುವವಾಹಿನಿಯ 36ನೇ ವಾರ್ಷಿಕ ಸಮಾವೇಶದ ಹೈಲೈಟ್ಸ್

...

Sunday, 24-12-2023
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು

ಮುಲ್ಕಿಯಲ್ಲಿ ಮೇಳೈಸಿದ ಯುವವಾಹಿನಿಯ 35ನೇ ವಾರ್ಷಿಕ ಸಮಾವೇಶ

  ಮಂಗಳೂರು :- ಕರಾವಳಿ ಕರ್ನಾಟಕದ ಅವಳಿ ಜಿಲ್ಲೆ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಮೂವತೈದು ವರುಷಗಳನ್ನು ಮೆಟ್ಟಿ ನಿಂತು, ಬ್ರಹ್ಮ ಶ್ರೀ ನಾರಾಯಣಗುರುಗಳ ತತ್ವಾದರ್ಶದ ಭದ್ರ ಅಡಿಪಾಯದ ಮೇಲೆ ಸುಭದ್ರ ನೆಲೆ ಕಂಡಿಕೊಂಡಿರುವ ಯುವವಾಹಿನಿ ಸಂಸ್ಥೆಯ 35ನೇ ವಾರ್ಷಿಕ ಸಮಾವೇಶವು 2022...

Sunday, 25-12-2022
error: Content is protected !!