Yuvavahini

ವಿಟ್ಲ

ವಿಟ್ಲ ಅರಮನೆ ಗದ್ದೆಯಲ್ಲಿ ಅದ್ದೂರಿಯಾಗಿ ನಡೆದ ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ – ಕೆಸರಿನಲ್ಲಿ ಮಿಂದೆದ್ದ ಮಕ್ಕಳು

ವಿಟ್ಲ : ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ (ರಿ) ವಿಟ್ಲ ಘಟಕ, ಬಿಲ್ಲವ ಸಂಘ (ರಿ) ವಿಟ್ಲ, ಮಹಿಳಾ ಘಟಕ ಮತ್ತು ಆರ್‌ .ಕೆ ಕಲಾ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ದಿ. 28-07-2024 ರಂದು ಕೆಸರ್‍‌ಡ್‌ ಒಂಜಿ ದಿನ ಕಾರ್ಯಕ್ರಮ ವಿಟ್ಲ ಅರಮನೆ ಗದ್ದೆಯಲ್ಲಿ ನಡೆಯಿತು. ಬಂಗಾರು ಅರಸರು ವಿಟ್ಲ ಅರಮನೆ ಇವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಉದ್ಘಾಟನಾ ಸಮಾರಂಭವನ್ನು ಮಾಧವ ಪೂಜಾರಿ ಪಟ್ಲ, ಅಧ್ಯಕ್ಷರು ಬಿಲ್ಲವ ಸಂಘ (ರಿ) ವಿಟ್ಲ ದೀಪ ಬೆಳಗಿಸಿ ಉದ್ಘಾಟಿಸಿದರು. […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ: ಯುವವಾಹಿನಿ(ರಿ.) ವಿಟ್ಲ ಘಟಕ, ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ(ರಿ.) ವಿಟ್ಲ ದ ಅಧ್ಯಕ್ಷರಾದ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ(ರಿ.) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಹರೀಶ್ ಕೆ ಪೂಜಾರಿ ಯುವವಾಹಿನಿ(ರಿ.) ಕೇಂದ್ರ ಸಮಿತಿ […]

Read More

ರಕ್ತದಾನ ಮಾಡಿ ಜೀವ ಉಳಿಸಿ

ವಿಟ್ಲ : ಯುವವಾಹಿನಿ (ರಿ.) ವಿಟ್ಲ ಘಟಕ ಬಿಲ್ಲವ ಸಂಘ ಮತ್ತು ಮಹಿಳಾ ಘಟಕ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಲೇಡಿ ಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಯೋಗದಲ್ಲಿ ದಿನಾಂಕ 16-06-2024 ರಂದು ರಕ್ತದಾನ ಶಿಬಿರ ನಡೆಯಿತು. ಬಿಲ್ಲವ ಸಂಘ (ರಿ.) ವಿಟ್ಲ ದ ಅಧ್ಯಕ್ಷರಾದ ಶ್ರೀ ಮಾಧವ ಪೂಜಾರಿ ಪಟ್ಲ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕೆ ಚಾಲನೆ ನೀಡಿದರು. ಶಿಬಿರದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ) ವಿಟ್ಲ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ವಹಿಸಿದ್ದರು. ಮುಖ್ಯ […]

Read More

ಕಿರು ಪ್ರವಾಸ

ವಿಟ್ಲ : ಯುವವಾಹಿನಿ(ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 8-05-2024 ರಂದು ಒಂದು ದಿನದ ಕಿರು ಪ್ರವಾಸವನ್ನು ಕುಂದಾಪುರದ TINTON ರೆಸಾರ್ಟ್ ಗೆ ಹಮ್ಮಿಕೊಂಡಿದ್ದರು. ಜೀವನದ ಜಂಜಾಟಗಳ ನಡುವೆ ಬಸವಳಿದ ದೇಹಗಳ ಆಯಾಸವನ್ನು ತಣಿಸಲು ಸ್ವಲ್ಪ ರೋಮಾಂಚಕಾರಿಯಾಗಿ ಕಳೆಯಲು ಮುಂಜಾನೆ 5.30ಕ್ಕೆ ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆಯನ್ನು ಸಲ್ಲಿಸಿ ಪ್ರವಾಸವನ್ನು ಪ್ರಾರಂಭಿಸಿದರು. ಬಸ್ಸಿನಲ್ಲಿ ಮೊದಲಿಗೆ ಎಲ್ಲರೂ ಅವರವರ ಪರಿಚಯವನ್ನು ಮಾಡಿಕೊಂಡು ಬಸ್ಸು ಹೊರಟಿತು ಬಡಗಣ ಉಡುಪಿಯತ್ತ ಬೆಳಿಗ್ಗೆ 9.30ಕ್ಕೆ TINTON ತಲುಪಿದರು. ಬೆಳಗ್ಗಿನ ಉಪಹಾರವನ್ನು ಮಾಡಿ ನಂತರ ಈಜು ಕೊಳದಲ್ಲಿ […]

Read More

ಯೋಗೀಶ್ವರ ಮಠದಲ್ಲಿ ಶ್ರಮದಾನ

ವಿಟ್ಲ: ದೇವರಿಗೆ ಸರ್ವ ಸೇವೆಯೂ ಶ್ರೇಷ್ಠ , ಸರ್ವವನ್ನು ಸ್ವೀಕರಿಸುವವರು ದೇವರು. ಎಲ್ಲಕ್ಕಿಂತಲೂ ಮಿಗಿಲೂ ದೇವಾಲಯದ ಸೇವಾ ಕಾರ್ಯ ದೇವರಿಗೆ ಪ್ರೀಯವೂ ಹೌದು. ಜೀರ್ಣೋದ್ಧಾರದಲ್ಲಿ ಒಂದು ಅಳಿಲು ಸೇವೆ ಎನ್ನುವಂತೆ ಶ್ರಮದಾನದ ಮುಖೇನ ಸಾರ್ಥಕ ತೃಪ್ತಿ ಪಟ್ಟುಕೊಂಡದ್ದು ನಮ್ಮ ಸಂಸ್ಥೆ. ಯುವವಾಹಿನಿ(ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಯೋಗೀಶ್ವರ ಮಠ ಜೋಗಿ ಬೆಟ್ಟು ವಿಟ್ಲ ಇದರ ಜೀರ್ಣೋದ್ಧಾರದ ಪ್ರಯುಕ್ತ ದಿನಾಂಕ 14-04-2024 ಆದಿತ್ಯವಾರದಂದು ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು. ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ […]

Read More

ವಿಭಿನ್ನ ಪರಿಕಲ್ಪನಾ – ವಿಶ್ವ ಮಹಿಳಾ ದಿನಾಚರಣೆ

ವಿಟ್ಲ: ವಿಟ್ಲ ಕಸಬಾ ಭಾಗದ ಚಂದಳಿಕೆ ನಿವಾಸಿ ದಾಮೋದರ ಪೂಜಾರಿ ಪತ್ನಿ ಗೀತಾ ಕಿಡ್ನಿ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದು, ಆರ್ಥಿಕವಾಗಿ ತುಂಬಾ ಕಷ್ಟದಲ್ಲಿದ್ದು ಕಿಡ್ನಿ ಮರುಜೋಡಣೆಗಾಗಿ ಯುವವಾಹಿನಿ ವಿಟ್ಲ ಘಟಕದ ನೆರವು ಕೋರಿದ್ದರು. ಯುವವಾಹಿನಿ (ರಿ.) ವಿಟ್ಲ ಘಟಕದ ವತಿಯಿಂದ ದಿನಾಂಕ 11/3/2024 ರಂದು 10,000/- ಸಹಾಯಧನವನ್ನು ನೀಡಲಾಯಿತು. ಈ ಸಂದರ್ಭದಲ್ಲಿ ಯುವವಾಹಿನಿ (ರಿ.) ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ ಸಮಾಜ ಸೇವಾ ನಿರ್ದೇಶಕರಾದ ಧನಲಕ್ಷ್ಮಿ ರಾಜೇಶ್, ಜೊತೆ ಕಾರ್ಯದರ್ಶಿ ಯಶೋಧರ ಪಟ್ಲ ಮತ್ತು ನಯನ, ಶ್ಯಾಮಲಾ […]

Read More

ಅನ್ನಸಂತರ್ಪಣೆ ಸೇವೆ

ವಿಟ್ಲ: ಪುಣಚ ನೀರುಮಜಲು ಬ್ರಹ್ಮ ಬೈದೆರ್ಕಳ ಗರಡಿ ನೇಮೋತ್ಸವದ ಸಂದರ್ಭ ದಿನಾಂಕ 22-02-2024 ಗುರುವಾರ ದಂದು ರಾತ್ರಿ 8-00ರಿಂದ 11-00 ಗಂಟೆಯವರೆಗೆ ಯುವವಾಹಿನಿ ವಿಟ್ಲ ಘಟಕದ ಸದಸ್ಯರು ಅನ್ನ ಸಂತರ್ಪಣೆಯ ಸ್ವಯಂ ಸೇವೆಯಲ್ಲಿ‌ ಭಾಗವಹಿಸಿದರು. ಈ ಸಂದರ್ಭದಲ್ಲಿ ಘಟಕದ ಅಧ್ಯಕ್ಷರಾದ ರಾಜೇಶ್ ವಿಟ್ಲ, ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲಾ, ಪದಾಧಿಕಾರಿಗಳು ಮತ್ತು ಸುಮಾರು 20 ಸದ್ಯಸರು ಸ್ವಯಂ ಸೇವೆಯಲ್ಲಿ ಪಾಲ್ಗೊಂಡರು.

Read More

ಮಾಡತಡ್ಕ ದೈವಸ್ಥಾನದಲ್ಲಿ ಶ್ರಮದಾನ

ವಿಟ್ಲ: ಯುವವಾಹಿನಿ (ರಿ.) ವಿಟ್ಲ ಘಟಕ ಇದರ ನೇತೃತ್ವದಲ್ಲಿ ಶ್ರೀ ಮಲರಾಯ -ಮೂವರ್ ದೈವಂಗಳ ದೈವಸ್ಥಾನ ಮಾಡತಡ್ಕ ಇದರ ಕಾಲಾವದಿ ನೇಮೋತ್ಸವದ ಪ್ರಯುಕ್ತ ದಿನಾಂಕ 18-02-2024 ಆದಿತ್ಯವಾರ ಬೆಳಿಗ್ಗೆ 8 ರಿಂದ ಮದ್ಯಾಹ್ನ 1ರ ವರೆಗೆ ವಿಟ್ಲ ಘಟಕದ ಸದಸ್ಯರಿಂದ ಶ್ರಮದಾನ ನಡೆಯಿತು.ಈ ಸಂದರ್ಭದಲ್ಲಿ ಯುವವಾಹಿನಿ ವಿಟ್ಲ ಘಟಕದ ಕಾರ್ಯದರ್ಶಿ ಶೋಭಾ, ಕೋಶಾಧಿಕಾರಿ ನಿರ್ಮಲ, ಪ್ರಚಾರ ನಿರ್ದೇಶಕರಾದ ಶ್ರೇಯಸ್ ಪೂಜಾರಿ ಹಾಗೂ ಸದಸ್ಯರು ಉಪಸ್ಥಿತರಿದರು.

Read More

ದೇವಸ್ಥಾನದಲ್ಲಿ ಸ್ವಯಂಸೇವೆ

ವಿಟ್ಲ : ಶ್ರೀಪಂಚಲಿಂಗೇಶ್ವರ ದೇವಸ್ಥಾನ ವಿಟ್ಲ ಇದರ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ದಿನಾಂಕ 2024ನೇ ಜನವರಿ 21 ರಂದು  ಬೆಳಿಗ್ಗೆ 10ರಿಂದ ಸಂಜೆ 4ರ ವರೆಗೆ ಯುವವಾಹಿನಿ (ರಿ ) ವಿಟ್ಲ ಘಟಕದ ಸುಮಾರು 20ಕ್ಕೂ ಹೆಚ್ಚು ಸದಸ್ಯರು ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದರು.

Read More

ರಕ್ತದಾನ ಶಿಬಿರ

ಯುವವಾಹಿನಿ (ರಿ.) ವಿಟ್ಲ ಘಟಕದ ಆಶ್ರಯದಲ್ಲಿ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಸಹಯೋಗದೊಂದಿಗೆ ದಿನಾಂಕ 03-04-2022 ರಂದು ವಿಟ್ಲದ ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ರಕ್ತದಾನ ಶಿಬಿರ ‌ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಯುವವಾಹಿನಿ (ರಿ.) ವಿಟ್ಲ ಘಟಕದ ಅಧ್ಯಕ್ಷರಾದ ಶ್ರೀ ಯಶವಂತ್ ಎನ್. ರವರು ವಹಿಸಿದ್ದರು. ಬೆಳ್ಳಿ ಹಬ್ಬ ಸಮಿತಿಯ ಅಧ್ಯಕ್ಷರಾದ ಡಾ.ಗೀತಪ್ರಕಾಶ್ ದೀಪ ಬೆಳಗಿಸುವ ಮೂಲಕ‌ ಶಿಬಿರಕ್ಕೆ ಚಾಲನೆ ನೀಡಿದರು. ಮುಖ್ಯ ಅತಿಥಿ ಗಳಾಗಿ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಉದಯ ಅಮೀನ್ […]

Read More

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ದಿನಾಂಕ : 2026ನೇ ಜೂನ್ 14 ಭಾನುವಾರ ಬೆಳಗ್ಗೆ ಗಂಟೆ 9.00 ರಿಂದ
ಸ್ಥಳ : ಕರ್ನಾಟಕ ರಾಜ್ಯ ಸರಕಾರಿ ನೌಕರರ ಅಸೋಸಿಯೇಷನ್ ಆಡಿಟೋರಿಯಂ ವಿಧಾನಸೌಧ ಬಳಿ, ಕಬ್ಬನ್ ಪಾರ್ಕ್ ಬೆಂಗಳೂರು

ಯುವವಾಹಿನಿ (ರಿ) ಬೆಂಗಳೂರು ಘಟಕ

ದಿನಾಂಕ : 2026ನೇ ಜೂನ್ 13 ಶನಿವಾರ ಸಂಜೆ ಗಂಟೆ 6.00 ರಿಂದ
ಸ್ಥಳ : ಮುಲ್ಕಿ , ಬಿಲ್ಲವ ಸಮಾಜ ಸೇವಾ ಸಂಘ(ರಿ)

ಯುವವಾಹಿನಿ (ರಿ) ಮುಲ್ಕಿ ಘಟಕ

ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!