
08-09-2026, 8:00 PM
ಮಂಗಳೂರು ಸೆ 08 : ಇಂದಿನ ಮಕ್ಕಳೇ ಮುಂದಿನ ಪ್ರಜೆಗಳಾಗಿದ್ದು, ಭವಿಷ್ಯದ ಭಾರತವನ್ನು ನಿರ್ಮಿಸುವ ಜವಾಬ್ದಾರಿ ಅವರ ಮೇಲಿದೆ. ಮಕ್ಕಳಲ್ಲಿ ಉತ್ತಮ ಗುಣ, ಮೌಲ್ಯ ಹಾಗೂ ಜವಾಬ್ದಾರಿಯುತ ನಾಗರಿಕ ಪ್ರಜ್ಞೆಯನ್ನು ಬೆಳೆಸುವಲ್ಲಿ ಶಿಕ್ಷಕರ ಪಾತ್ರ ಅತ್ಯಂತ ಮಹತ್ತರವಾದದ್ದು ಎಂದು ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಹಾಗೂ ಶಿಕ್ಷಕಿ ಲತಾಕಿಶೋರ್ ಕೆ. ಬಿಜೈ ಹೇಳಿದರು.ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆಪ್ಟೆಂಬರ್ 8ರಂದು ನಡೆದ ಸಭಾ ಕಾರ್ಯಕ್ರಮದಲ್ಲಿ ಶಿಕ್ಷಕರ ದಿನಾಚರಣೆಯ ಅಂಗವಾಗಿ ಮಾಹಿತಿ ನೀಡಿದ ಅವರು, ಶಿಕ್ಷಕರ […]
Read More

07-09-2026, 8:00 PM
ಮಂಗಳೂರು ಸೆಪ್ಟೆಂಬರ್ 7 : ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (ಸಿಡಾಕ್), ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾ ಕೌಶಲ್ಯ ಮಿಷನ್, ಮಂಗಳೂರು ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಹಯೋಗದಲ್ಲಿ ಹತ್ತು ದಿನಗಳ ಕಾಲ ನಡೆದ ಉದ್ಯಮಶೀಲತಾಭಿವೃದ್ಧಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಸೆ. 7ರಂದು ಉರ್ವಸ್ಟೋರ್ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಮಾತನಾಡಿ, ತರಬೇತಿ ಕಾರ್ಯಾಗಾರದ ಆರಂಭದ ದಿನಗಳಿಗೆ ಹೋಲಿಸಿದರೆ ಇದೀಗ […]
Read More

07-09-2026, 8:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 07-09-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಯುವವಾಹಿನಿ (ರಿ.) ಶಕ್ತಿನಗರ ಘಟಕ ಇವರ ಸಹಯೋಗದಲ್ಲಿ ನೆರವೇರಿತು. ಭಕ್ತಿ ಭಾವ ತುಂಬಿದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳ ಚರಣಕ್ಕೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ, […]
Read More

01-09-2026, 8:00 PM
ಮಂಗಳೂರು, ಸೆ. 1: ನಾರಾಯಣ ಗುರುಗಳ ತತ್ವ ಹಾಗೂ ಆದರ್ಶಗಳನ್ನು ಪಾಲಿಸುವ ಮೊದಲು ಅವುಗಳ ಮೂಲ ಅದ್ವೈತದ ಅರ್ಥವನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯ ಎಂದು ಶ್ರೀ ನಾರಾಯಣ ಗುರು ಧರ್ಮ ಪ್ರಸರಣ ಸೇವಾ ಟ್ರಸ್ಟ್ (ರಿ.)ನ ಟ್ರಸ್ಟಿ ವರದರಾಜ್ ಮಟ್ಟು ಕಟಪಾಡಿ ಹೇಳಿದರು. ಉರ್ವಸ್ಟೋರ್ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಸೆ. 1ರಂದು ನಡೆದ 172ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಕಾರ್ಯಕ್ರಮದಲ್ಲಿ ಗುರು ಸಂದೇಶ ನೀಡಿದ ಅವರು ಮಾತನಾಡಿದರು. ನಾರಾಯಣ ಗುರುಗಳು […]
Read More

28-08-2026, 8:00 PM
ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆಗಸ್ಟ್ 28ರಂದು ಸಂಜೆ 6.30ಕ್ಕೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಗುರುಪೂಜೆ ನೆರವೇರಿಸಲಾಯಿತು. ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರವು ಬ್ರಹ್ಮಶ್ರೀ ನಾರಾಯಣ ಗುರುಗಳ ಆಶಯ ಹಾಗೂ ಬಿಲ್ಲವ ಸಮಾಜದ ಸಂಘಟಿತ ಪ್ರಯತ್ನದ ಪ್ರತೀಕವಾಗಿ ರೂಪುಗೊಂಡ ಕ್ಷೇತ್ರವಾಗಿದೆ. 1908ರಲ್ಲಿ ಬಿಲ್ಲವ ಸಮಾಜದ ಮುಖಂಡ ಹಾಗೂ ಉದ್ಯಮಿ ಹೋಯ್ಗೆ ಬಜಾರ್ ಕೊರಗಪ್ಪ ಅವರು ಕೇರಳಕ್ಕೆ ತೆರಳಿ ನಾರಾಯಣ ಗುರುಗಳನ್ನು […]
Read More

28-08-2026, 1:30 PM
ಮಂಗಳೂರು ಅಗಸ್ಟ್ 28 : ಬ್ರಹ್ಮಶ್ರೀ ನಾರಾಯಣ ಗುರುಗಳ 172ನೇ ಜಯಂತಿಯ ಪ್ರಯುಕ್ತ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಶಾಲಾ ಮಕ್ಕಳು ಹಾಗೂ ಅಂಗನವಾಡಿ ಮಕ್ಕಳಿಗೆ ಸಿಹಿ ವಿತರಿಸುವ ಮೂಲಕ ಅರ್ಥಪೂರ್ಣವಾಗಿ ಗುರುಜಯಂತಿಯನ್ನು ಆಚರಿಸಲಾಯಿತು. ಆಗಸ್ಟ್ 28ರಂದು ಕೊಟ್ಟಾರದಲ್ಲಿರುವ ಸೇಂಟ್ ಪೀಟರ್ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಅಂಗನವಾಡಿಯ ಮಕ್ಕಳಿಗೆ ಸಿಹಿ ವಿತರಿಸಲಾಯಿತು. ಅನ್ನದಾನವು ಶ್ರೇಷ್ಠ ದಾನವಾಗಿದ್ದು, ಸಾಧ್ಯವಾದಷ್ಟು ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ಭಗವಂತನ ಸೇವೆ ಮಾಡಿದ ತೃಪ್ತಿ ದೊರೆಯುತ್ತದೆ ಎಂಬ ಆಶಯದೊಂದಿಗೆ ಕಾರ್ಯಕ್ರಮ […]
Read More

24-08-2026, 4:00 PM
ಮಂಗಳೂರು: ಸಮಾಜದಲ್ಲಿ ವ್ಯವಸ್ಥಿತವಾಗಿ ಬದುಕಲು ಉದ್ಯೋಗದ ಅಗತ್ಯವಿದೆ. ಸ್ವ-ಉದ್ಯೋಗದ ಮೂಲಕ ಸ್ವಾವಲಂಬಿಗಳಾಗಲು ಉತ್ತಮ ಅವಕಾಶಗಳು ದೊರೆತಾಗ ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಾರ್ಯಕ್ರಮದ ಉದ್ಘಾಟಕಿ ಚಂದ್ರಿಕಾ ಎಸ್. ನಾಯಕ್ ಹೇಳಿದರು. ಅವರು ಆ. 24ರಂದು ಸೋಮವಾರ ಬೆಳಿಗ್ಗೆ 10.30ಕ್ಕೆ ಉರ್ವ ಸ್ಟೋರ್ನ ರಘು ಬಿಲ್ಡಿಂಗ್ನಲ್ಲಿರುವ ಯುವವಾಹಿನಿ ಸಭಾಂಗಣದಲ್ಲಿ ಆಯೋಜಿಸಲಾದ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ಕಾರ್ಯಕ್ರಮದ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ, ಬೆಂಗಳೂರು, ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ (CEDOK), ಮಂಗಳೂರು […]
Read More

24-08-2026, 2:00 PM
ಮಂಗಳೂರು ಅಗಸ್ಟ್ 24 : “ಭಜನೆಯು ಕೇವಲ ಹಾಡಲ್ಲ, ಅದು ಭಕ್ತನಿಗೂ ಪರಮಾತ್ಮನಿಗೂ ನಡುವಿನ ಮಧುರವಾದ ಅನುಸಂಧಾನ” ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 24-08-2026 ರಂದು ಸಂಜೆ ನಡೆಯಿತು. ಈ ವಾರದ ಭಜನಾ ಸೇವೆ ಝೆಡ್ ಕಲಾ ವೇದಿಕೆ ಭಜನಾ ತಂಡ ಕುಳಾಯಿ ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿತು. ಹರಿನಾಮ ಸ್ಮರಣೆಯ ಭಕ್ತಿ ಭಾವ […]
Read More

21-08-2026, 8:00 PM
ಮಂಗಳೂರು ಅಗಸ್ಟ್ 21: “ಕ್ಯಾನ್ಸರ್ ರೋಗಕ್ಕೆ ಭಯಪಡುವ ಅಗತ್ಯವಿಲ್ಲ. ಆರಂಭದ ಹಂತದಲ್ಲಿಯೇ ರೋಗವನ್ನು ಪತ್ತೆಹಚ್ಚಿ ಸೂಕ್ತ ಚಿಕಿತ್ಸೆ ನೀಡಿದರೆ ಗುಣಪಡಿಸಲು ಸಾಧ್ಯ. ದೇಹದಲ್ಲಿ ಯಾವುದೇ ಅಸಹಜ ಬದಲಾವಣೆ ಕಂಡುಬಂದರೆ ನಿರ್ಲಕ್ಷ್ಯ ಮಾಡದೆ ವೈದ್ಯರನ್ನು ಸಂಪರ್ಕಿಸಿ ತಪಾಸಣೆ ಮಾಡಿಸಿಕೊಳ್ಳಬೇಕು” ಎಂದು ಕೆ.ಎಂ.ಸಿ. ಆಸ್ಪತ್ರೆ ಮಂಗಳೂರು ಕ್ಯಾನ್ಸರ್ ವಿಭಾಗದ ಸಲಹೆಗಾರ್ತಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸದಸ್ಯೆ ಮಮತಾ ಸುವರ್ಣ ಹೇಳಿದರು. ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಆ.21ರಂದು ಆಯೋಜಿಸಲಾದ ಕ್ಯಾನ್ಸರ್ ರೋಗದ ಮಾಹಿತಿ ಹಾಗೂ ಜಾಗೃತಿ […]
Read More

17-08-2026, 8:00 PM
ಮಂಗಳೂರು, ಆಗಸ್ಟ್ 17: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ಪ್ರತೀ ಸೋಮವಾರ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಅಂಗವಾಗಿ ಭಜನಾ ಸೇವೆಯು ಸೋಮವಾರ ಸಂಜೆ ಕ್ಷೇತ್ರದಲ್ಲಿ ಭಕ್ತಿ ಭಾವದಿಂದ ನಡೆಯಿತು. ಈ ವಾರದ ಭಜನಾ ಸೇವೆಯನ್ನು ವೇದಾವತಿ ಮತ್ತು ಬಳಗ, ಅಳಪೆ–ಮಂಗಳೂರು ಇವರ ಸಹಯೋಗದಲ್ಲಿ ನೆರವೇರಿಸಲಾಯಿತು. ಹರಿನಾಮ ಸ್ಮರಣೆಯೊಂದಿಗೆ ಭಕ್ತಿ ಭಾವಪೂರ್ಣವಾಗಿ ಭಜನೆ ನಡೆಸಿ, ಶ್ರೀ ಗೋಕರ್ಣನಾಥ ಹಾಗೂ ಶ್ರೀ ನಾರಾಯಣಗುರುಗಳ ಚರಣಕ್ಕೆ ಭಜನಾ ಸೇವೆಯನ್ನು […]
Read More