16-06-2026, 7:30 PM
ಮಂಗಳೂರು : ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮವು ಜೂನ್ 16ರಂದು ನಡೆಯಿತು. ಕಾರ್ಯಕ್ರಮವು ಗುರು ಪೂಜೆಯೊಂದಿಗೆ ಆರಂಭಗೊಂಡು, ಗುರು ಸ್ತುತಿಯ ಬಳಿಕ ಘಟಕದ ಅಧ್ಯಕ್ಷ ಹರೀಶ್ ಕೆ. ಸುವರ್ಣ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಅಧ್ಯಕ್ಷರು ಸಭಿಕರನ್ನು ಆತ್ಮೀಯವಾಗಿ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಅರೋಲಿನ್ ಡಿ’ಸೋಜ ಅವರು ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಮಹತ್ವ ಹಾಗೂ […]
Read More
15-06-2026, 8:00 PM
ಮಂಗಳೂರು: ದಿನಾಂಕ: 15-06-2026 ರಂದು ಸೋಮವಾರ ಸಂಜೆ 5.30 ಗಂಟೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ಯುವವಾಹಿನಿ (ರಿ.) ಕೂಳೂರು ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಕೂಳೂರು ಘಟಕದ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು ಹಾಗೂ ಸದಸ್ಯರ ತಂಡವು ಭಕ್ತಿ ಭಾವದಿಂದ ಭಜನೆಯನ್ನು ಗೋಕರ್ಣನಾಥ ಹಾಗೂ ನಾರಾಯಣ ಗುರುಗಳಿಗೆ ಸಮರ್ಪಿಸಿದರು. ಸಂಜೆ 7 ಗಂಟೆಗೆ ಸರಿಯಾಗಿ ಕ್ಷೇತ್ರದ ನಾರಾಯಣ […]
Read More
07-06-2026, 10:00 PM
ಮಂಗಳೂರು: ವರ್ಷದಲ್ಲಿ ಕೇವಲ ಒಂದು ತಿಂಗಳ ಅವಧಿಗೆ ಮಾತ್ರ ನಡೆಯುವ ಕೊಟ್ಟಿಯೂರು ಪರಶಿವನ ಜಾತ್ರೆಯ ಅಂಗವಾಗಿ ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಜೂನ್ 6, 2026ರಂದು ವಿಶೇಷ ಕ್ಷೇತ್ರಯಾತ್ರೆಯನ್ನು ಆಯೋಜಿಸಲಾಯಿತು. ರಾತ್ರಿ 8.30 ಗಂಟೆಗೆ ಮಂಗಳೂರಿನಿಂದ ಹೊರಟ ಯಾತ್ರಿಕರು ಮುಂಜಾನೆ ಸುಮಾರು 4 ಗಂಟೆಗೆ ಕೊಟ್ಟಿಯೂರು ಪುಣ್ಯಕ್ಷೇತ್ರವನ್ನು ತಲುಪಿದರು. ಪವಿತ್ರ ವಾವಲಿ ನದಿಯಲ್ಲಿ ಸ್ನಾನ ಮಾಡಿ, ಮಡಿ ಬಟ್ಟೆಯಲ್ಲಿ ಕ್ಷೇತ್ರ ಪ್ರದಕ್ಷಿಣೆ ಸಲ್ಲಿಸಿ, ಭಕ್ತಿಭಾವದಿಂದ ಪರಶಿವ ಮತ್ತು ಸತಿಯ ದರ್ಶನ ಪಡೆದರು. ಕೊಟ್ಟಿಯೂರು ಕ್ಷೇತ್ರವು ತನ್ನ […]
Read More
01-06-2026, 8:00 PM
ಮಂಗಳೂರು: ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಅಂಗವಾಗಿ, ದಿನಾಂಕ 01-06-2026ರಂದು ಸೋಮವಾರ ಸಂಜೆ 5.30 ಗಂಟೆಗೆ ಭಜನಾ ಸೇವಾ ಕಾರ್ಯಕ್ರಮವು ಭಕ್ತಿಭಾವದಿಂದ ನಡೆಯಿತು. ಈ ಭಜನಾ ಸೇವೆಯು ಶ್ರೀರಾಮ ಕ್ಷತ್ರಿಯ ಭಜನಾ ತಂಡ, ಸುರತ್ಕಲ್ ಇವರ ಸಹಯೋಗದೊಂದಿಗೆ ನೆರವೇರಿತು. ಸಂಜೆ 7.00 ಗಂಟೆಗೆ ಶ್ರೀ ನಾರಾಯಣಗುರುಗಳಿಗೆ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಕುದ್ರೋಳಿ ಕ್ಷೇತ್ರದ ವತಿಯಿಂದ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ […]
Read More
18-05-2026, 8:00 PM
ಮಂಗಳೂರು: ಯುವವಾಹಿನಿ ಮಂಗಳೂರು ಘಟಕದ ಸಂಯೋಜನೆಯಲ್ಲಿ ಹಾಗೂ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ನಡೆಯುತ್ತಿರುವ ಸಾಪ್ತಾಹಿಕ ಭಜನಾ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ 18-05-2026 ರಂದು ಸಂಜೆ 5.30 ಗಂಟೆಗೆ ಭಕ್ತಿಭಾವದಿಂದ ನೆರವೇರಿತು. ಈ ಭಜನಾ ಕಾರ್ಯಕ್ರಮವು ಬಿಲ್ಲವ ಮಹಿಳಾ ಸಂಘ SNDP ಕೋಡಿಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಂಗಳೂರು ಘಟಕದ ಅಧ್ಯಕ್ಷರು ಹಾಗೂ ಮಹಿಳಾ ಸಂಘಟನಾ ನಿರ್ದೇಶಕಿ ಜಯಂತಿ ಕೋಟ್ಯಾನ್ ಉಪಸ್ಥಿತರಿದ್ದು, ಭಜನಾ ಸೇವೆಗೆ ವಿಶೇಷ ಮೆರುಗು ನೀಡಿದರು.
Read More
16-05-2026, 7:00 PM
ಮಂಗಳೂರು : ಯುವವಾಹಿನಿ (ರಿ) ಮಂಗಳೂರು ಘಟಕದ ವತಿಯಿಂದ ದಿನಾಂಕ: 14-05-2026 ರಿಂದ 16-05-2026 ರವರೆಗೆ ಆಯೋಜಿಸಲಾಗಿದ್ದ ಮೂರು ದಿನಗಳ ‘ಶಿವಗಿರಿ ಯಾತ್ರೆ’ಯು ಅತ್ಯಂತ ಯಶಸ್ವಿಯಾಗಿ ಸಂಪನ್ನಗೊಂಡಿತು. ಆಧ್ಯಾತ್ಮಿಕ ಅನುಭೂತಿ ನೀಡಿದ ಯಾತ್ರೆ : ಘಟಕದ ಪ್ರವಾಸ ಸಂಚಾಲಕರಾದ ಸದಾನಂದ ಪೂಜಾರಿ ಕುಳಾಯಿ ಅವರು ಯಾತ್ರಾರ್ಥಿಗಳಿಗೆ ಶಿವಗಿರಿ ಕ್ಷೇತ್ರದ ಇತಿಹಾಸ, ಮಹಿಮೆ ಮತ್ತು ಮಹತ್ವವನ್ನು ಮನವರಿಕೆ ಮಾಡಿಕೊಡುತ್ತಾ ಸುಸೂತ್ರವಾಗಿ ಕ್ಷೇತ್ರ ದರ್ಶನ ಮಾಡಿಸಿದರು. ಈ ಆಧ್ಯಾತ್ಮಿಕ ಪ್ರವಾಸದಲ್ಲಿ ಒಟ್ಟು 53 ಹಿರಿಯರು ಹಾಗೂ 7 ಮಕ್ಕಳು ಸೇರಿದಂತೆ […]
Read More
11-05-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 11-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ತ್ರಯಂಬಕ ಭಜನಾ ಮಂಡಳಿ ಸುರತ್ಕಲ್ ಇವರ ಸಹಯೋಗದೊಂದಿಗೆ ನಡೆಯಿತು. ಘಟಕದ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
04-05-2026, 9:00 PM
ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 04-05-2026 ರಂದು ಸಂಜೆ 5.30 ಗಂಟೆಗೆ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಕುತ್ತಾರು ಮಂಗಳೂರು ಇವರ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
Read More
27-04-2026, 9:00 PM
ಮಂಗಳೂರು : ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ಆಶ್ರಯದಲ್ಲಿ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಸಂಯೋಜನೆಯಲ್ಲಿ ನಡೆಯುವ ಸಾಪ್ತಾಹಿಕ ಸಂಕೀರ್ತನ ಸರಣಿಯ ಭಜನಾ ಸೇವೆಯು ದಿನಾಂಕ: 27-04-2026 ರಂದು ಸಂಜೆ 5.30 ಗಂಟೆಗೆ ಯುವವಾಹಿನಿ (ರಿ.) ಸುರತ್ಕಲ್ ಘಟಕ ಇವರ ಸಹಯೋಗದೊಂದಿಗೆ ನಡೆಯಿತು. ಮಂಗಳೂರು ಹಾಗೂ ಸುರತ್ಕಲ್ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
Read More
21-04-2026, 6:00 PM
ಮಂಗಳೂರು: ದಿನಾಂಕ 21/04/2026 ರಂದು ನಡೆದ ಯುವವಾಹಿನಿಯ ಕಟ್ಟಡ ಸಮಿತಿಯ ಸಭೆಯಲ್ಲಿ, ಯುವವಾಹಿನಿ (ರಿ.) ಕೇಂದ್ರ ಸಮಿತಿಯ ನೂತನ ಆಡಳಿತ ಕಚೇರಿ ನಿರ್ಮಾಣಕ್ಕಾಗಿ ಸಂಗ್ರಹಿಸಿದ ರೂ. 76,500/- ದೇಣಿಗೆಯನ್ನು ಮಂಗಳೂರು ಘಟಕದ ವತಿಯಿಂದ ಕೇಂದ್ರ ಸಮಿತಿಯ ಅಧ್ಯಕ್ಷರಿಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಮಂಗಳೂರು ಘಟಕದ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಕಟ್ಟಡ ಸಮಿತಿಯ ಸಂಚಾಲಕರು, ಕಾರ್ಯದರ್ಶಿಗಳು, ಕೋಶಾಧಿಕಾರಿಗಳು ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.
Read More