Yuvavahini

JUL 31, 2016 1.01 PM IST

ಯುವವಾಹಿನಿ(ರಿ) ಕೇಂದ್ರ ಸಮಿತಿ ಮಂಗಳೂರು * ಯುವವಾಹಿನಿ(ರಿ) ಉಡುಪಿ ಘಟಕ

ಪಾದರಸದ ಓಟದ ಸರದಾರ ಮನೀಷ್ ಪೂಜಾರಿ

ಕ್ರೀಡಾ ಪಟುಗಳ ವಿಶ್ವದ ಅತ್ಯುನ್ನತ ವೇದಿಕೆ- ಒಲಿಂಪಿಕ್ಸ್ ಇದರಲ್ಲಿ ಭಾಗವಹಿಸಲು ಬೇಕಾದ ಅರ್ಹತೆಯನ್ನು ಗಳಿಸುವುದೇ ಅತ್ಯಂತ ಕಷ್ಟಕರ ಪ್ರಯಾಸಕರ ಸವಾಲು. ಕ್ರೀಡೆಯ ತನ್ನ ಆಸಕ್ತಿಗಳನ್ನು ಮಾರ್ಗದರ್ಶಕರಾದ ಶ್ರೀಯುತ ಅಬ್ಬಾಸ್ ಹಾಗೂ ಲಚ್ಚೇಂದ್ರ ರಿಂದ ಪೋಷಿಸಿಕೊಂಡು ನಂಬಲಸಾಧ್ಯ ಸಾಧನೆ- ಒಲಿಂಪಿಕ್‌ಗೆ ಆಯ್ಕೆಯ ಕನಸನ್ನು ನೆನಸಾಗಿಸಿದ ಕರ್ನಾಟಕದ ಹೆಮ್ಮೆಯ ಶ್ರೀ ಮನೀಷ್ ಪೂಜಾರಿ ಒಬ್ಬ ಧ್ರುವತಾರೆ.

ಕರ್ನಾಟಕದ ಉಸೈನ್ ಬೋಲ್ಟ್ ಎಂದು ಕರೆಯಲ್ಪಡಲು ಅರ್ಹ ರಾಷ್ಟ್ರೀಯ ದಾಖಲೆಯುತ್ತ ಸಾಗುವ ಪ್ರಥಮಹಂತ, ರಾಜ್ಯ ದಾಖಲೆಯ 100ಮೀ. ಓಟದಲ್ಲಿ 10.5 ಸೆಕೆಂಡುಗಳಲ್ಲಿ ಹಾಗೂ 21.5  ಸೆ.ನಲ್ಲಿ 200 ಮೀ ಓಟ ಪೂರ್ತಿಗೊಳಿಸಿ 4×100 ಮೀ ರಿಲೇ ಓಟದಲ್ಲಿ ಚಿನ್ನದ ಪದಕ ಸಹಿತ ಅತುನ್ನತ ಕ್ರೀಡಾಪಟು ಪ್ರಶಸ್ತಿಗೆ ಭಾಜನರಾದ ಮನೀಷ್ ನಮ್ಮ ಸಮಾಜ ಹಮ್ಮೆ ಪಡುವ ಸಾಧನೆ ಮಾಡಿದ್ದಾರೆ.

2016 ಮೇ 26 ರಿಂದ 28 ರವರೆಗೆ ಕೇರಳದ ಕಲ್ಲಿಕೋಟೆಯಲ್ಲಿ ನಡೆದ ರಾಷ್ಟ್ರೀಯ ಯುವ ಅಥ್ಲೆಟಿಕ್ಸ್ ಛಾಂಪಿಯನ್ ಶಿಪ್‌ನಲ್ಲಿ 200 ಮೀ ಓಟದಲ್ಲಿ ಚಿನ್ನದ ಪದಕ ಗಳಿಸಿ 100×4 ಮೀ ರಿಲೇ ಓಟದಲ್ಲಿ ಕಂಚಿನ ಪದಕ ಗಳಿಸಿ 2020 ರಲ್ಲಿ ಜಪಾನ್‌ನಲ್ಲಿ ನಡೆಯಲಿರುವ ಒಲಿಂಪಿಕ್ಸ್ ಕ್ರೀಡಾಕೂಟಕ್ಕೆ ಅರ್ಹತೆ ಗಳಿಸಿರುವ ಅದ್ವಿತೀಯ ಸಾಧನೆ ಮೈನವರೇಳಿಸುವಂಥದ್ದು. ಮನೀಷ್ ನೀವು ನಮ್ಮ ಹೆಮ್ಮೆಯ ಪ್ರತಿಭೆ ನಿಸ್ಸಂಶಯ.

ಪ್ರತಿಭಾನ್ವೇಷಣೆ ಪೋಷಣೆಯಲ್ಲಿ ತೊಡಗಿರುವ ಯುವವಾಹಿನಿ ಮನೀಷ್ ಪೂಜಾರಿಯವರಿಗೆ ಅಂತಾರಾಷ್ಟ್ರೀಯ/ಒಲಿಂಪಿಕ್ಸ್ ಅರ್ಹತೆಯಿಂದ ಜಿಲ್ಲೆಯ ಮಣ್ಣಿಗೆ, ಬಿಲ್ಲವ ಜನತೆಗೆ ಗೌರವ ತರಲಿದ್ದಾರೆ ಎಂಬ ಅಭಿಮಾನದಿಂದ ಗೌರವಿಸಲು ಸಂತೋಷ ಪಡುತ್ತಿದೆ.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!