Yuvavahini

JUN 29, 2025 8.44 AM IST

ಡೆನ್ನಾನ ಡೆನ್ನನ 2025

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ(ರಿ.)
ಕೇಂದ್ರ ಸಮಿತಿ ಮಂಗಳೂರು ಆಶ್ರಯದಲ್ಲಿ, ಪುತ್ತೂರು ಘಟಕದ ಆತಿಥ್ಯದಲ್ಲಿ,ಹಾಗೂ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ(ರಿ.) ಪುತ್ತೂರು ಇವರ ಸಹಯೋಗದಲ್ಲಿ ಡೆನ್ನಾನ ಡೆನ್ನನ 2025 ಕಾರ್ಯಕ್ರಮ ದಿನಾಂಕ 25/05/2025ರಂದು ಸುಧಾನ ವಸತಿಯುತ ಶಾಲೆ ಮಂಜಲ್ಪಡ್ಪು ಪುತ್ತೂರು ಇಲ್ಲಿ ನಡೆಯಿತ್ತು. ಬೆಳಿಗ್ಗೆ ಗಂಟೆ 10ಕ್ಕೆ ಕಾರ್ಯಕ್ರಮದ ಧ್ವಜಾರೋಹಣವನ್ನು ಶ್ರೀ ಕ್ಷೇತ್ರ ಗೆಜ್ಜೆಗಿರಿ ನಂದನಬಿತ್ತಿಲು ಯಜಮಾನರಾದ ಶ್ರೀಧರಪೂಜಾರಿಯವರು ನೆರವೇರಿಸಿದರು.
ಈ ಕಾರ್ಯಕ್ರಮದ ಉದ್ಘಾಟನೆಯನ್ನು ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷರಾದ ಸತೀಶ್ ಕುಮಾರ್ ಕೆಡೆಂಜಿ ನಡೆಸಿಕೊಟ್ಟು, ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಪುತ್ತೂರು ಘಟಕದ ಅಧ್ಯಕ್ಷರಾದ ಅಣ್ಣಿ ಪೂಜಾರಿಯವರು ಅಧ್ಯಕ್ಷತೆ ವಹಿಸಿದ್ದರು.. ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕುಳೂರು ಮಾತನಾಡಿ ಯುವವಾಹಿನಿಯ ಪ್ರತಿಷ್ಠಿತ ಕಾರ್ಯಕ್ರಮವು ಈ ವರ್ಷ ಪುತ್ತೂರು ಘಟಕದ ಆಥಿತ್ಯದಲ್ಲಿ ನಡೆಯುತ್ತಿದೆ , ಈ ಕಾರ್ಯಕ್ರಮವು ಯಶಸ್ವಿಯಾಗಿ ಮೂಡಿಬರಲೆಂದು ಶುಭ ಹಾರೈಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಶ್ರೀ ಬಿ.ಎಸ್ ಸತೀಶ್ ಕುಮಾರ್, ಅಧ್ಯಕ್ಷರು ದಕ್ಷಿಣ ಕನ್ನಡ ಜಿಲ್ಲಾ ವಾಲಿಬಾಲ್ ಎಸೋಸಿಯೇಷನ್, ಮಂಗಳೂರು,
ಶ್ರೀ ವಿಜಯ ಹಾರ್ವಿನ್, ಸಂಚಾಲಕರು, ಸುದಾನ ಸಮೂಹ ವಿದ್ಯಾ ಸಂಸ್ಥೆಗಳು, ಮಂಜಲ್ಪಡ್ಪು ಪುತ್ತೂರು. ಶ್ರೀ ವಿಜಯ್ ಕುಮಾರ್ ಸೊರಕೆ, ಮಾಜಿ ಅಧ್ಯಕ್ಷರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ (ರಿ). ಪುತ್ತೂರು. ಶ್ರೀ ಸತೀಶ್ ಬಿ, ಮಾಲಕರು ಸ್ನೇಹ ಸಿಲ್ಕ್ಸ್ ರೆಡಿಮೇಡ್ ಪುತ್ತೂರು. ಶ್ರೀ ಶ್ರೀಮತಿ ಪುಷ್ಪಲತಾ A.S.I Rtd ಕರ್ನಾಟಕ ಪೊಲೀಸ್ ಇಲಾಖೆ. ಹಾಗೂ ಶ್ರೀ ಸುಶಾಂತ್ ಕರ್ಕೇರ, ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಕೇಂದ್ರ ಸಮಿತಿ ಮಂಗಳೂರು,
ಶ್ರೀ ಕೆ. ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು, ಕಾರ್ಯಕ್ರಮದ ಸಂಚಾಲಕರು, ಯುವವಾಹಿನಿ (ರಿ.) ಪುತ್ತೂರು ಘಟಕ,
ಶ್ರೀ ಕೃಷ್ಣಪ್ಪ ಅಮೈ, ಸಂಘಟನಾ ಕಾರ್ಯದರ್ಶಿ ಯುವವಾಹಿನಿ(ರಿ.) ಕೇಂದ್ರ ಸಮಿತಿ ಮಂಗಳೂರು, ಬಾಬು ಪೂಜಾರಿ ಇದ್ಪಾಡಿ ಪ್ರಧಾನ ಕಾರ್ಯದರ್ಶಿ ಯುವವಾಹಿನಿ (ರಿ.) ಕೇಂದ್ರ ಸಮಿತಿ ಮಂಗಳೂರು, ಮೋಹನ್ ಶಿಬರ ಸಾಂಸ್ಕೃತಿಕ ನಿರ್ದೇಶಕರು ಯುವವಾಹಿನಿ (ರಿ.)ಘಟಕ ಹಾಗೂ ಶರತ್ ಸಾಲ್ಯಾನ್ ಕೈಪಂಗಳ ದೋಳ ಕಾರ್ಯದರ್ಶಿ ಯುವವಾಹಿನಿ (ರಿ.) ಪುತ್ತೂರು ಘಟಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶ್ರೀ ನಾರಾಯಣ ಗುರು ವೈಧಿಕ ಸಮಿತಿ ಮಂಗಳೂರು ಇದರ ಅಧ್ಯಕ್ಷರಾದ ಹರೀಶ್ ಶಾಂತಿ ಪ್ರಾರ್ಥಿಸಿದರು, ಕಾರ್ಯಕ್ರಮದ ಸಂಚಾಲಕರಾದ ಪ್ರಭಾಕರ ಸಾಲ್ಯಾನ್ ಬಾಕಿಲಗುತ್ತು ಸ್ವಾಗತಿಸಿದರು ಕಾರ್ಯದರ್ಶಿ ಶರತ್ ಸಾಲ್ಯಾನ್ ಕೈಪಂಗಳ ದೋಳ ರವರು ಧನ್ಯವಾದ ಸಮರ್ಪಿಸಿದರು.

ಅತಿಥಿಯಾಗಿ ಆಗಮಿಸಿದ ಅಶೋಕ್ ಕುಮಾರ್ ರೈ ಶಾಸಕರು ಪುತ್ತೂರು ವಿಧಾನಸಭಾ ಕ್ಷೇತ್ರ ಇವರಿಗೆ ಕಾರ್ಯಕ್ರಮದ ಪರವಾಗಿ ಸನ್ಮಾನಿಸಲಾಯಿತು .

ಸ್ಪರ್ಧಾ ಕಾರ್ಯಕ್ರಮವನ್ನು ಡೋಲು ಬಾರಿಸುವ ಮೂಲಕ ಚಾಲನೆ ನೀಡಲಾಯಿತು.

ಕಾರ್ಯಕ್ರಮದ ಸ್ಪರ್ಧೆಯಲ್ಲಿ ಒಟ್ಟು 12 ತಂಡಗಳು ಭಾಗವಹಿಸಿದ್ದವು. ಸ್ಪರ್ಧೆಯಲ್ಲಿ ಪ್ರಥಮ ಕುಳೂರು ಘಟಕ,
ದ್ವಿತೀಯ ಸುರತ್ಕಲ್ ಘಟಕ,
ತೃತೀಯ ಬೆಳ್ತಂಗಡಿ ಘಟಕ,
ಚತುರ್ಥ ಪಣಂಬೂರುಕುಳಾಯಿ ಘಟಕ,
ಪಂಚಮ ಬಜ್ಪೆ ಘಟಕ ಪಡೆದುಕೊಂಡಿತು,
ಸ್ಪರ್ಧಿಸಿದ ಎಲ್ಲಾ ಘಟಕಗಳಿಗೆ ಸಮಾಧಾನಕರ ಬಹುಮಾನ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!