Yuvavahini

JUL 06, 2025 1.51 PM IST

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ಯುವವಾಹಿನಿ (ರಿ.) ಮಂಗಳೂರು ಘಟಕ : ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

ದಿನಾಂಕ 10-06-2025: ಆಸ್ತಿ ಅಂತಸ್ತನ್ನ ಬೇಕಾದರೆ ನಾವು ಕಳೆದುಕೊಳ್ಳಬಹುದು ಆದರೆ ಪಡೆದಂತಹ ವಿದ್ಯಾಭ್ಯಾಸವನ್ನು ನಮ್ಮಿಂದ ಯಾರು ಕಸಿಯಲು ಸಾಧ್ಯವಿಲ್ಲ ಎಂದು ಶಾರದಾ ವಿದ್ಯಾಲಯ ಮಂಗಳೂರು ಇದರ ಪ್ರಾಂಶುಪಾಲರಾದ ದಯಾನಂದ ಕಟೀಲು ಹೇಳಿದರು.

ಅವರು ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ನಡೆದಂತಹ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹೆತ್ತವರು ವಿದ್ಯಾರ್ಥಿಗಳಿಗೆ ಕಲಿಕೆಗೆ ಪೂರಕವಾದ ವಾತಾವರಣವನ್ನು ಕಲ್ಪಿಸಬೇಕು. ವಿದ್ಯಾರ್ಥಿಗಳಿಗೆ ಬೇಕಾಗಿರುವುದು ಪ್ರೀತಿ ವಾತ್ಸಲ್ಯ. ಸೋತಾಗ ಅಥವಾ ಎಡವಿದಾಗ ಅವರನ್ನು ಕೈಯೆತ್ತಿ ಮೇಲೆ ತರುವಂತಹ ಕೆಲಸವನ್ನು ಹೆತ್ತವರು ಮಾಡಬೇಕೆಂದರು.

ಮುಖ್ಯ ಅತಿಥಿಯಾಗಿದ್ದ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತನಾಡಿ ಮಂಗಳೂರು ಘಟಕವು ಅರ್ಹ ಬಡ ವಿದ್ಯಾರ್ಥಿಗಳನ್ನು ದತ್ತು ಸ್ವೀಕರಿಸುವುದರ ಮೂಲಕ ಅವರ ಸಂಪೂರ್ಣ ವಿದ್ಯಾಭ್ಯಾಸದ ಜವಾಬ್ದಾರಿಯನ್ನು ಹೊತ್ತು ವಿದ್ಯಾವಂತರನ್ನಾಗಿ ಮಾಡುತ್ತಿರುವ ಕಾರ್ಯವು ಶ್ಲಾಘನೀಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಯುವವಾಹಿನಿ (ರಿ.) ಮಂಗಳೂರು ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಮಾತನಾಡಿ ವಿದ್ಯಾರ್ಥಿಗಳು ತಮಗೆ ವಿದ್ಯಾಭ್ಯಾಸವನ್ನು ನೀಡಲು ಶ್ರಮಿಸಿದ ಹೆತ್ತವರನ್ನು ಎಂದಿಗೂ ಆಶ್ರಮಕ್ಕೆ ಸೇರಿಸದೆ ಅವರನ್ನು ಕೊನೆ ಉಸಿರಿರುವರೆಗೂ ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಕಿವಿ ಮಾತನ್ನು ಹೇಳಿದರು.

ಈ ಸಂದರ್ಭದಲ್ಲಿ ಎಸ್.ಎಸ್.ಎಲ್.ಸಿ, ಪಿ. ಯು.ಸಿ, ಸಿ.ಬಿ.ಎಸ್.ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಯುವವಾಹಿನಿ (ರಿ.) ಮಂಗಳೂರು ಘಟಕದ ವತಿಯಿಂದ ಅಭಿನಂದಿಸಲಾಯಿತು. ಕಾರ್ಯಕ್ರಮದ ಉದ್ಘಾಟಕರಾದ ದಯಾನಂದ ಕಟೀಲು ಇವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಘಟಕದ ಮಾಜಿ ಅಧ್ಯಕ್ಷರು,ಸದಸ್ಯರು ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ವಿಧ್ಯಾರ್ಥಿ ಸಂಘಟನಾ ಕಾರ್ಯದರ್ಶಿ ಕ್ಷಿತಿಜ್ ಸ್ವಾಗತಿಸಿದರು.ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ಸದಸ್ಯರಾದ ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!