
ಯುವವಾಹಿನಿ (ರಿ.) ಮಂಗಳೂರು ಘಟಕ: ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ
ದಿನಾಂಕ 26-06-2025: ಯುವವಾಹಿನಿ (ರಿ.) ಮಂಗಳೂರು ಘಟಕದಲ್ಲಿ ಕ್ಯಾನ್ಸರ್ ಚಿಕಿತ್ಸಾ ಯೋಜನೆಗಳ ಕುರಿತು ಮಾಹಿತಿ ಕಾರ್ಯಗಾರ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ್ದ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟ್ ಇದರ ಕಮ್ಯುನಿಟಿ ರಿಲೇಶನ್ ಆಫೀಸರಾದ ತ್ರೀವಿಕ್ರಮ್ ಸಂಜೀವಿನಿ ಕ್ಯಾನ್ಸರ್ ಸೇವಾ ಟ್ರಸ್ಟಿನಲ್ಲಿ ಕ್ಯಾನ್ಸರ್ ಚಿಕಿತ್ಸೆಗಾಗಿ ಲಭ್ಯವಿರುವ ವಿವಿಧ ಯೋಜನೆಗಳ ಮಾಹಿತಿಯನ್ನು ವಿವರವಾಗಿ ತಿಳಿಸಿದರು
ಈ ಸಂದರ್ಭ ತ್ರಿವಿಕ್ರಮ್ ರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು. ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್, ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು, ನಿಕಟಪೂರ್ವ ಅಧ್ಯಕ್ಷರಾದ ನಾಗೇಶ್ ಅಮೀನ್, ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ, ದ್ವಿತೀಯ ಉಪಾಧ್ಯಕ್ಷರಾದ ಯತೀಶ್ ಬಳಂಜ, ಹಾಗೂ ಘಟಕದ ಮಾಜಿ ಅಧ್ಯಕ್ಷರು , ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು


