Yuvavahini

JUL 07, 2025 7.17 AM IST

ಯುವವಾಹಿನಿ (ರಿ.) ಕಂಕನಾಡಿ ಘಟಕ…

ವ್ಯಕ್ತಿತ್ವ ವಿಕಸನ

*ಮಕ್ಕಳು ಮೊಬೈಲ್ ಹಾಗೂ ಕಾನೂನುಬಾಹಿರ ಚಟಕ್ಕೆ ಬೀಳದೆ ತಮ್ಮ ಮುಂದಿನ ಭವಿಷ್ಯಕ್ಕಾಗಿ ಉತ್ತಮ ಗುರಿಯನ್ನಿಟ್ಟು ತಮ್ಮ ಜೀವನವನ್ನೇ ಮಕ್ಕಳಿಗಾಗಿ ತ್ಯಾಗ ಮಾಡುತ್ತಿರುವ ಪೋಷಕರು ಹಾಗೂ ನಿಮ್ಮ ಬಗ್ಗೆ ಇತರರು ಹೆಮ್ಮೆ ಪಡುವಂತಹ ಆಕರ್ಷಕ ವ್ಯಕ್ತಿತ್ವ ನಿಮ್ಮದಾಗಬೇಕು .ಮಕ್ಕಳು ಈ ದೇಶದ ಅತ್ಯಮೂಲ್ಯ ಸಂಪತ್ತು. ಮಕ್ಕಳಿಗೆ ಯಾರಿಂದಲಾದರೂ ದೈಹಿಕವಾಗಿ ಅಥವಾ ಮಾನಸಿಕವಾಗಿ ತೊಂದರೆಯಾದಲ್ಲಿ ನಮ್ಮ ಕಾನೂನು ಖಂಡಿತಾ ಸಹಿಸುವುದಿಲ್ಲ. ತಕ್ಷಣವೇ ಮಕ್ಕಳು ತಮ್ಮ ಹೆತ್ತವರ, ಶಿಕ್ಷಕರ ಗಮನಕ್ಕೆ ತರಬೇಕು ಅಥವಾ ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ದೂರನ್ನು ಸಲ್ಲಿಸತಕ್ಕದ್ದು ಎಂದು ಖ್ಯಾತ ನ್ಯಾಯವಾದಿ, ಜವಾಹರ್ ಬಾಲ್ ಮಂಚ್ ಅಧ್ಯಕ್ಷರು,ಕಿತ್ತೂರು ರಾಣಿ ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರಾದ ಶ್ರೀಮತಿ ಶೈಲಜಾ ರಾಜೇಶ್ ರವರು ಯುವವಾಹಿನಿ(ರಿ) ಕಂಕನಾಡಿ ಘಟಕದ ವತಿಯಿಂದ ದಿನಾಂಕ 5-7-2025ರ ಶನಿವಾರದಂದು ಇಂದಿರಾ ಗಾಂಧಿ ಮೆಮೋರಿಯಲ್ ಆಂಗ್ಲ ಮಾಧ್ಯಮ ಶಾಲೆ, ದೇರೆಬೈಲು ಕೊಂಚಾಡಿ, ಮಂಗಳೂರು ಇಲ್ಲಿ ನಡೆದ “ವ್ಯಕ್ತಿತ್ವ ವಿಕಸನ” ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಕ್ಕಳನ್ನು ಉದ್ದೇಶಿಸಿ ಹಿತವಚನ ನೀಡಿದರು..
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ ಶಾಲಾ ಆಡಳಿತ ಮಂಡಳಿಯ ಮುಖ್ಯಸ್ಥರಾಗಿರುವ ಶ್ರೀಯುತ ಬಿ ಮಾಧವ ಸುವರ್ಣ ರವರು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಶಾಲಾ ಮುಖ್ಯ ಶಿಕ್ಷಕಿಯವರಾದ ಶ್ರೀಮತಿ ಸಂಪಾವತಿಯವರು ಮಾತನಾಡುತ್ತಾ ಪಠ್ಯ ಹಾಗೂ ಪಠ್ಯೇತರ ಚಟುವಟಿಕೆಗಳ ಜೊತೆಜೊತೆಗೆ ಇಂತಹ ಕಾರ್ಯಕ್ರಮಗಳು ಮಕ್ಕಳ ಮಾನಸಿಕ, ಬೌದ್ಧಿಕ ಹಾಗೂ ಶಾರೀರಿಕ ಬೆಳವಣಿಗೆಗೆ ಸಹಕಾರಿ ಎಂದರು. ಮಾಜಿ ಅಧ್ಯಕ್ಷರಾದ ಸುಮಾ ವಸಂತ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಶಾಲಾ ವಿದ್ಯಾರ್ಥಿನಿ ಕುಮಾರಿ ದಿಷಿಕಾ ಕುಲಾಲ್ ಪ್ರಾರ್ಥಿಸಿದರು.
ಯುವವಾಹಿನಿ(ರಿ)ಕಂಕನಾಡಿ ಘಟಕದ ಅಧ್ಯಕ್ಷರಾದ ಶ್ರೀ ರಾಹುಲ್ ಸನಿಲ್ ರವರು ಎಲ್ಲರನ್ನು ಸ್ವಾಗತಿಸಿದರು. ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ಶ್ರೀಮತಿ ವೀಣಾ ಬಿ.ಕೆ. ಎಲ್ಲರಿಗೂ ಧನ್ಯವಾದವನ್ನು ಅರ್ಪಿಸಿದರು. ಘಟಕದ ಕಾರ್ಯದರ್ಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾರ್ಯಕಾರಿ ಸಮಿತಿಯ ಸದಸ್ಯರು, ಶಾಲೆಯ ಭೋದಕ ಹಾಗೂ ಭೋದಕೇತರ ವರ್ಗದವರು ಹಾಗೂ ಶಾಲೆಯ ಪ್ರೌಢಶಾಲಾ ವಿಭಾಗದ ವಿದ್ಯಾರ್ಥಿಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!