Yuvavahini

JUL 14, 2025 3.40 AM IST

ಯುವವಾಹಿನಿ (ರಿ.) ಸುರತ್ಕಲ್ ಘಟಕದ ಪದಗ್ರಹಣ

ಯುವವಾಹಿನಿ (ರಿ) ಸುರತ್ಕಲ್ ಘಟಕದ 2025 -26 ನೇ ಸಾಲಿನ ಪದಗ್ರಹಣ ‘ಸಾರಥ್ಯ- 2025’ ಸಮಾರಂಭವು ದಿನಾಂಕ 19.01.2025 ರಂದು ಬ್ರಹ್ಮ ಶ್ರೀ ನಾರಾಯಣ ಗುರು ಸಭಾಗೃಹ ಕುಳಾಯಿಯಲ್ಲಿ ನಡೆಯಿತು. ಜಗದ್ಗುರು ಬ್ರಹ್ಮ ಶ್ರೀ ನಾರಾಯಣ ಗುರುಗಳ ಪೂಜೆಯ ಮುಖೇನ
ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಅನಂತರ ಘಟಕದ ಸದಸ್ಯರ ನೃತ್ಯ ವೈವಿದ್ಯ ನಡೆಯಿತು. ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಯ ಮಾಜಿ ಉಪಾಧ್ಯಕ್ಷರಾದ ಚಂದ್ರಹಾಸ ಮೂಡುಬೆಟ್ಟು ಉದ್ಘಾಟಿಸಿ ಶುಭಹಾರೈಸಿದರು. ಮುಖ್ಯ ಅತಿಥಿಗಳಾದ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸ೦ಘ ಜಿಲ್ಲಾ ಸಮಿತಿ ಮಂಗಳೂರು ನ ಅಧ್ಯಕ್ಷರಾದ ಕುಶಾಲ್ ಪೂಜಾರಿ ,ತಾಲೂಕು ಯುವಜನ ಒಕ್ಕೂಟ ಮಂಗಳೂರು ಇದರ ಅಧ್ಯಕ್ಷರಾದ ಸುಧಾಕರ ಅಮೀನ್ ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಎಬಿವಿಪಿ ವಿದ್ಯಾರ್ಥಿ ಸಂಘಟನೆಯ ಕಾರ್ಯದರ್ಶಿಯಾಗಿ ಆಯ್ಕೆಯಾದ ಘಟಕದ ಸದಸ್ಯರಾದ ಯಶಸ್ ಕುಕ್ಯಾನ್ ಮತ್ತು ರಾಷ್ಟ್ರ ಮಟ್ಟದ ಕರಾಟೆಯಲ್ಲಿ ಮಾಡಿದ ಸಾಧನೆಗಾಗಿ ಚಿನ್ನದ ಪದಕ ಗಳಿಸಿಕೊಂಡಿರುವ ಮಾಸ್ಟರ್ ಲಿಖಿತ್ ಸುವರ್ಣ ರವರಿಗೆ ಅಭಿನಂದಿಸಲಾಯಿತು. ಘಟಕದ ವಾರ್ಷಿಕ ಪತ್ರಿಕೆ ‘ಚಿಲುಮೆ’ ಯನ್ನು ಶ್ರೀಯುತ ಸುಧಾಕರ್ ಅಮೀನ್ ಅವರಿಂದ ಬಿಡುಗಡೆಗೊಳಿಸಲಾಯಿತು. ಈ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪಡೆದ ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸ೦ಘ ಕುಳಾಯಿ ಗೆ ಘಟಕದ ಪರವಾಗಿ ಅಭಿನಂದಿಸಲಾಯಿತು. ಘಟಕದ ವಾರ್ಷಿಕ ಕ್ರೀಡಾಕೂಟದ ಬಹುಮಾನ ವಿತರಣೆಯನ್ನು ಅತಿಥಿಗಳು ನೆರವೇರಿಸಿದರು.

ನಿಯೋಜಿತ ಅಧ್ಯಕ್ಷರು ಶ್ರೀಮತಿ ವಾಣಿ ಗಣೇಶ್ ಇವರಿಗೆ ಹಾಗೂ ಸಾರಥ್ಯದ ನೂತನ ಪದಾಧಿಕಾರಿಗಳ ತಂಡಕ್ಕೆ ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಲೋಕೇಶ್ ಕೋಟ್ಯಾನ್ ಕೂಳೂರು ಇವರು ಪ್ರಮಾಣ ವಚನ ಭೋಧಿಸಿ,ಘಟಕದ ನಿರ್ಗಮನ ಅಧ್ಯಕ್ಷರು ನಿಯೋಜಿತ ಅಧ್ಯಕ್ಷರಿಗೆ ಪೇಟ ತೊಡಿಸುವುದರ ಮುಖೇನ ಅಧಿಕಾರ ಹಸ್ತಾಂತರಿಸಿ ಶುಭ ಹಾರೈಸಿದರು.

ತಮ್ಮ ಅಧಿಕಾರವದಿಯಲ್ಲಿ ಕ್ರಿಯಾಶೀಲರಾಗಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸಿದ ನಿರ್ಗಮನ ಅಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ದಂಪತಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು ಮತ್ತು ಕೇಂದ್ರ ಸಮಿತಿಯ ಚುಕ್ಕಾಣಿ ಹಿಡಿದಿರುವ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಕೂಳೂರು ಅವರನ್ನು ಅಭಿನಂದಿಸಿ ಗೌರವಿಸಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆ ಆಶೋಕ್ ಕುಮಾರ್ ವಹಿಸಿದರು. ಕುಮಾರಿ ಅದಿತಿಯವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮಕ್ಕೆ ಗುರುಗಳ ಶುಭಾಶಿರ್ವಾದವನ್ನು ಬೇಡಿದರು.ಅಧ್ಯಕ್ಷರು ಎಲ್ಲರನ್ನೂ ಸ್ವಾಗತಿಸಿದರು.  ಪ್ರಧಾನ ಕಾರ್ಯದರ್ಶಿ ಶ್ರೀಮತಿ ಸುಲತಾ ಪೂಜಾರಿ ವಾರ್ಷಿಕ ವರದಿಯನ್ನು  ಮಂಡಿಸಿದರು. ಯುವವಾಹಿನಿ (ರಿ) ಸುರತ್ಕಲ್ ಘಟಕದ ಮಾಜಿ ಅಧ್ಯಕ್ಷರಾದ ಶ್ರೀಯುತ ಭಾಸ್ಕರ್ ಸಾಲ್ಯಾನ್ ಪ್ರಾಸ್ತಾವಿಕ ನುಡಿಗಳೊಂದಿಗೆ ಯುವವಾಹಿನಿಯ ಪರಿಚಯ ಮತ್ತು ಸಾಧನೆಯ ವಿವರ ನೀಡಿದರು . ಕಾರ್ಯಕ್ರಮವನ್ನು ಶ್ರೀಯುತ ಸತೀಶ್ ಕೋಟ್ಯಾನ್ ಮತ್ತು ಗಾಯತ್ರಿ ಸತೀಶ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!