Yuvavahini

AUG 07, 2025 4.39 PM IST

ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ

ಯುವವಾಹಿನಿ(ರಿ.) ಬೆಳ್ತಂಗಡಿ ಘಟಕ
ಮಹಿಳಾ ದಿನಾಚರಣೆ ಮಹಿಳಾ ಸಾಧಕರಿಗೆ ಸನ್ಮಾನ ಕಾರ್ಯಕ್ರಮ
9.3.2025ನೇ ಆದಿತ್ಯವಾರ ಸ್ಥಳ. ಬೆಳ್ತಂಗಡಿಯ ಶ್ರೀ ಗುರು ನಾರಾಯಣ ಸ್ವಾಮಿ ಸಭಾಭವನ ಅವಳು ಬದುಕಲು ಕಲಿಸಿದವಳು ಎನ್ನುವ ಶೀರ್ಷಿಕೆಯ ಅಡಿಯಲ್ಲಿ ವಿಶ್ವ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಹಿರಿಯ ನಾಟಿವೈದ್ಯ ಶ್ರೀಮತಿ ಡೀಕಮ್ಮ ಅಲ್ಯೊಟ್ಟು ಉಜಿರೆ ಇವರು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ಕಿಲ್ಲೂರಿನ ವೈದ್ಯರಾದ ಡಾ|| ವಾಣಿ ಸುಗುಣ ಕುಮಾರ್ ಆಗಮಿಸಿದ್ದರು. ಕಾರ್ಯಕ್ರಮದಲ್ಲಿ ಸಂಗೀತ ಕ್ಷೇತ್ರದಲ್ಲಿ ಸಾಧನೆಗೈದ ಕುಮಾರಿ ರಶ್ಮಿ ನಾರಾವಿ ಹಾಗೂ ಹಿರಿಯ ನಾಟಿ ವೈದ್ಯರಾದ ಶ್ರೀಮತಿ ಡೀಕಮ್ಮ ಇವರನ್ನು ಸನ್ಮಾನಿಸಲಾಯಿತು. ಘಟಕದ ಅದ್ಯಕ್ಷರು ಅಧ್ಯಕ್ಷತೆ ವಹಿಸಿದ್ದರು..

ವೇದಿಕೆಯಲ್ಲಿ ಮಹಿಳಾ ಸಂಚಾಲನ ಸಮಿತಿಯ ಪ್ರಧಾನ ಸಂಚಾಲಕರಾದ ಶ್ರೀಮತಿ ಲೀಲಾವತಿ ಪಣಕಜೆ, ಘಟಕದ ಕಾರ್ಯದರ್ಶಿ ಶ್ರೀಮತಿ ಮಧುರ ರಾಘವ, ಮಹಿಳಾ ನಿರ್ದೇಶಕರಾದ ಶ್ರೀಮತಿ ಪ್ರಮೀಳಾ ಮಾಲೂರು, ಮಹಿಳಾ ಸಂಚಾಲನ ಸಮಿತಿಯ ಕಾರ್ಯದರ್ಶಿ ಶ್ರೀಮತಿ ಶಾಂಭವಿ ಮುಂಡೂರು ಉಪಸ್ಥಿತರಿದ್ದರು. ಶ್ರೀಮತಿ ಸೇವಂತಿ ನಿರಂಜನ್ ಸ್ವಾಗತಿಸಿ, ಶ್ರೀಮತಿ ಸುಧಾಮಣಿ ಆರ್ ಮತ್ತು ಕುಮಾರಿ ಜಿತೀಕ್ಷ ನಿರೂಪಿಸಿ ಶ್ರೀಮತಿ ಬೇಬಿಂದ್ರ ಧನ್ಯವಾದವಿತ್ತರು. ಕಾರ್ಯಕ್ರಮದ ಮೊದಲು ಘಟಕದ ಮಹಿಳಾ ಸದಸ್ಯರಿಗೆ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!