Yuvavahini

AUG 07, 2025 4.49 PM IST

ಪದಗ್ರಹಣ ಕಾರ್ಯಕ್ರಮ -ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ

ಯುವವಾಹಿನಿ (ರಿ) ಕೆಂಜಾರು- ಕರಂಬಾರು ಘಟಕ
ಪದಗ್ರಹಣ ಕಾರ್ಯಕ್ರಮ 09-03-2025 ಆದಿತ್ಯವಾರ
ಶ್ರೀ ದೇವಿ ಭಜನಾಮಂದಿರ
ಬಜಪೆ ಶ್ರೀ ನಾರಾಯಣ ಗುರು ಸಮಾಜ ಮಂದಿರದ ಅಧ್ಯಕ್ಷರಾದ ಶ್ರೀಯುತ ಶಿವರಾಮ ಪೂಜಾರಿಯವರು ಶ್ರೀ ನಾರಾಯಣ ಗುರು ಸ್ವಾಮಿಯವರ ಭಾವಚಿತ್ರಕ್ಕೆ ದೀಪ ಬೆಳಗಿಸಿ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯಿತ್ತರು.ಶ್ರೀಮತಿ ಪ್ರತಿಮಾ ಪುನಿತ್ ಅವರು ಪ್ರಾರ್ಥನೆ ಮಾಡಿದರು. ಘಟಕದ ಅಧ್ಯಕ್ಷರಾದ ವಿನೋದ್ ಕುಮಾರ್ ಅವರು ಸ್ವಾಗತಿಸಿದರು. ಶ್ರೀಯುತ ಮಂಜು ಪೂಜಾರಿ ಭಂಡಾರಮನೆ ಇವರು ದೀಪ ಬೇಳಗಿಸಿ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರಿಸಿದರು.ಘಟಕದ ಮಾಜಿ ಅಧ್ಯಕ್ಷರಾದ ಪ್ರಸಾದ್ ಪಾಲನ್ ಪ್ರಾಸ್ತಾವಿಕ ಭಾಷಣ ಮಾಡಿದರು. ಕಾರ್ಯದರ್ಶಿ ಮಿಥುನ್ ಕುಮಾರ್ ಒಂದು ವರ್ಷದ ವರದಿ ವಾಚಿಸಿದರು.ನಂತರ ಚುನಾವಣಾ ಅಧಿಕಾರಿಯಾದ ನಿಕಟ ಪೂರ್ವ ಅಧ್ಯಕ್ಷರಾದ ಭರತೇಶ್ ಅವರು ನೂತನ ತಂಡವನ್ನು ಪರಿಚಯಿಸಿದರು, ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೊಕೇಶ್ ಕೋಟ್ಯಾನ್ ಅವರು
ನೂತನ ತಂಡಕ್ಕೆ ಪ್ರಮಾಣ ವಚನ ಭೋಧಿಸಿದರು. ನೂತನ ಅಧ್ಯಕ್ಷರಾಗಿ ಸಂದೀಪ್ ಪೂಜಾರಿ ಕೋರಮನೆ ಹಾಗೂ ಕಾರ್ಯದರ್ಶಿ ಶ್ರೀಮತಿ ನವ್ಯ ಜಯಂತ್ ಅವರು ಇತರ ನಿರ್ದೇಶಕರುಗಳೊಂದಿಗೆ ಪ್ರಮಾಣ ವಚನ ಸ್ವೀಕರಿಸಿದರು. ನಮ್ಮೂರಿನ ಹಿರಿಯ ಭಜನಾ ಗುರುಗಳಾದ ಯಾದವ ಸುವರ್ಣ ಬಜ್ಪೆ, ಶ್ರೀಮತಿ ಜಾನಕಿ ಪರಶುರಾಮ ಪಾಲನ್ ಹಾಗೂ ಯುವವಾಹಿನಿ ಕೇಂದ್ರ ಸಮಿತಿಯ ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿಯವರನ್ನು ಅವರ ಕೊಡುಗೆಯನ್ನು ಗುರುತಿಸಿ ಗಣ್ಯರ ಸಮ್ಮುಖದಲ್ಲಿ ಸನ್ಮಾನ ಮಾಡಲಾಯಿತು.SSLC,PUC ಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ನಮ್ಮ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ವಿತರಿಸಲಾಯಿತು.ಹಾಗೂ ನಮಗೆ ಪ್ರತಿಯೊಂದು ಕಾರ್ಯಕ್ರಮಕ್ಕೆ ಆಶ್ರಯ ನೀಡುತ್ತಿರುವ ಶ್ರೀ ದೇವಿ ಭಜನಾ ಮಂದಿರದ ಮೇಲ್ಛಾವಣಿಯ ಕಾಮಗಾರಿಗೆ ನಮ್ಮ ಘಟಕದಿಂದ ₹5555/- ನ್ನು ಅಧ್ಯಕ್ಷರು ಭಜನಾ ಮಂದಿರದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.ಮುಖ್ಯ ಅತಿಥಿಗಳಾದ ಶ್ರೀ ಅನಿಲ್ ಕುಮಾರ್ ಮತ್ತು ಜಗನ್ನಾಥ ಸಾಲಿಯಾನ್ ಶುಭ ಹಾರೈಸಿದರು.ಪ್ರಮಾಣ ವಚನ ಬೋಧಿಸಿದ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಮಾತಾಡಿ ಸಂದೀಪ್ ಪೂಜಾರಿ ಮತ್ತು ಅವರ ನೂತನ ತಂಡಕ್ಕೆ ಶುಭ ಹಾರೈಸಿದರು ವೇದಿಕೆಯಲ್ಲಿ ಶ್ರೀ ದೇವಿ ಭಜನಾ ಮಂದಿರದ ಅಧ್ಯಕ್ಷ ಮಿತ್ರದಾಸ್ ಅಮೀನ್, ಬಜಪೆ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಉಪಾಧ್ಯಕ್ಷ ರಾದ ಶೇಖರ ಪೂಜಾರಿ ಕರಂಬಾರು, ಕೇಂದ್ರ ಸಮಿತಿಯ ಸಂಘಟಣಾ ಕಾರ್ಯದರ್ಶಿ ಹಾಗೂ ನಮ್ಮ ಘಟಕದ ಉಸ್ತುವಾರಿ ವಹಿಸಿದ ಹರೀಶ್ ಕೋಟ್ಯಾನ್ ಕುದನೆ ಉಪಸ್ಥಿತರಿದ್ದರು. ನೂತನ ಅಧ್ಯಕ್ಷ ಸಂದೀಪ್ ಪೂಜಾರಿ ಮಾತಾಡಿ ಎಲ್ಲರ ಸಹಕಾರ ಕೋರಿದರು… ಅಧ್ಯಕ್ಷರು ಗಣ್ಯರಿಗೆ ಸ್ಮರಣಿಕೆ ನೀಡಿ ಗೌರವಿಸಿದರು. . ನೂತನ ಕಾರ್ಯದರ್ಶಿ ಶ್ರೀಮತಿ ನವ್ಯ ಜಯಂತ್ ಅವರು ಧನ್ಯವಾದ ಸಮರ್ಪಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!