ಯುವವಾಹಿನಿ( ರಿ.) ಬಂಟ್ವಾಳ ಘಟಕ ,
ಶ್ರೀ ನಾರಾಯಣಗುರು ವೈದಿಕ ಸಮಿತಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಹಾಗೂ ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಸಹಕಾರದಲ್ಲಿ ಬಿ.ಸಿ.ರೋಡ್ ಬ್ರಹ್ಮಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆದ
ರಕ್ತದಾನ ಶಿಬಿರ
ಸಜಿಪ ಮೂರ್ತೆದಾರರ ಸಹಕಾರಿ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಕುಚ್ಚಿಗುಡ್ಡೆ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.
ಘಟಕದ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.
ಅತ್ಯಧಿಕ ಬಾರಿ ರಕ್ತದಾನ ಮಾಡಿದ ಮಹೇಶ್ಚಂದ್ರ ಬಿ.ಟಿ, ಲೋಕೇಶ್ ಸುವರ್ಣ ಅಲೆತ್ತೂರು, ಗಣೇಶ್ ಪೂಂಜರೆಕೋಡಿ, ದಿನೇಶ್ ಸುವರ್ಣ ರಾಯಿ, ಹರೀಶ್ ಶಾಂತಿ, ರತ್ನಾಕರ ಪೂಜಾರಿ ಮದಂಗೋಡಿ ಇವರನ್ನು ಗೌರವಿಸಿ ಅಭಿನಂದಿಸಲಾಯಿತು.
ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷ ಸಂಜೀವ ಪೂಜಾರಿ ಗುರುಕೃಪಾ, ಬಂಟ್ವಾಳ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಶ್ರೀ ನಾರಾಯಣಗುರು ವೈದಿಕ ಸಮಿತಿಯ ಅಧ್ಯಕ್ಷ ಹರೀಶ್ ಶಾಂತಿ, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸಂಘ ರಾಯಿ ಕೊಯಿಲ ಅರಳ ಇದರ ಪ್ರತಿಷ್ಟಾ ಮಹೋತ್ಸವ ಸಮಿತಿಯ ಅಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಯುವವಾಹಿನಿ ಕೇಂದ್ರ ಸಮಿತಿಯ ಆರೋಗ್ಯ ನಿರ್ದೇಶಕ ಗಣೇಶ್ ಪೂಂಜರೆಕೋಡಿ, ಘಟಕದ ಆರೋಗ್ಯ ನಿರ್ದೇಶಕ ಮಹೇಶ್ ಬೊಳ್ಳಾಯಿ ಭಾರತೀಯ ರೆಡ್‌ಕ್ರಾಸ್ ಸಂಸ್ಥೆಯ ನಾಗಭೂಷಣ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಒಟ್ಟು 48 ದಾನಿಗಳು ರಕ್ತದಾನ ಮಾಡಿದರು.
ಯುವವಾಹಿನಿ ಬಂಟ್ವಾಳ ಘಟಕದ ಉಪಾಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ಕಾರ್ಯದರ್ಶಿ ಚೇತನ್ ಮುಂಡಾಜೆ ವಂದಿಸಿದರು ಶ್ರೀನಿಧಿ ಕಾರ್ಯಕ್ರಮ ನಿರೂಪಿಸಿದರು


