Yuvavahini

AUG 13, 2025 2.16 PM IST

ವಿಶ್ವ ಮಹಿಳಾ ದಿನಾಚರಣೆ-ಯುವವಾಹಿನಿ (ರಿ)ಮೂಡುಬಿದಿರೆ ಘಟಕದ

ಯುವವಾಹಿನಿ (ರಿ)ಮೂಡುಬಿದಿರೆ ಘಟಕದ*
ಆತಿಥ್ಯದಲ್ಲಿ
*ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘ(ರಿ) ಕಡಂದಲೆ-ಪಾಲಡ್ಕ* ಹಾಗೂ *ಮಹಿಳಾ ಘಟಕದ* ಸಹಯೋಗದೊಂದಿಗೆ *ವಿಶ್ವ ಮಹಿಳಾ ದಿನಾಚರಣೆ* ಅಂಗವಾಗಿ *ಮಾ. 9ರಂದು* *ಬಿಲ್ಲವ ಸಂಘ, ಕಡಂದಲೆ-ಪಾಲಡ್ಕದಲ್ಲಿ* ಸಾಧಕ ಮಹಿಳೆಯರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ *“ಸಮರ್ಪಣೆ-2025”*
ಕಾರ್ಯಕ್ರಮವು ಕಡಂದಲೆ – ಪಾಲಡ್ಕ ಇಲ್ಲಿ ಜರುಗಿತು.
ಅನ್ನಪೂರ್ಣದ *ಶ್ರೀಮತಿ ಪ್ರಶಾಂತಿ ಶೇಖರ ಅಂಚನ್* ರವರು ದೀಪಾ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
ಕಡಂದಲೆ-ಪಾಲಡ್ಕ ಬ್ರಹ್ಮಶ್ರೀ ನಾರಾಯಣ ಗುರು ಮಹಿಳಾ ಘಟಕದ ಅಧ್ಯಕ್ಷೆ *ಶ್ರೀಮತಿ ಸೌಮ್ಯ ಗಣೇಶ್* ರವರು ಪ್ರಸ್ತಾವನೆಯೊಂದಿಗೆ ಎಲ್ಲರನ್ನೂ ಸ್ವಾಗತಿಸಿದರು.
ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕರಾದ *ಸುಶಾಂತ್ ಕರ್ಕೇರ* ರವರು ಮಾತನಾಡಿ ಮಹಿಳಾ ದಿನಾಚರಣೆಯ ಶುಭಾಶಯವನ್ನು ಸಲ್ಲಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಘಟಕದ ಅಧ್ಯಕ್ಷ *ಮುರಳೀಧರ ಕೋಟ್ಯಾನ್* ಮಾತನಾಡುತ್ತಾ ಮಹಿಳೆಯರ ಸಾಧನೆಯನ್ನು ಗುರುತಿಸಿ ಸನ್ಮಾನಿಸುವುದು ಇಡೀ ಸಮಾಜಕ್ಕೆ ಲಾಭದಾಯಕವಾಗಿದ್ದು ಎಲ್ಲವನ್ನೂ ಅರಿತುಕೊಂಡು, ಕಾನೂನಿನ ಅರಿವನ್ನು ಬೆಳೆಸಿಕೊಂಡು ಸಬಲರಾಗಬೇಕು ಎಂದರು.

🔶 ಸಂಪನ್ಮೂಲ ವ್ಯಕ್ತಿ ಗಳಾಗಿ ಭಾಗವಹಿಸಿದ್ದ ದಿಗಂಬರ ಜೈನ ಆಂಗ್ಲ ಮಾಧ್ಯಮ ಶಾಲೆಯ ಸಹ ಶಿಕ್ಷಕಿ *ಶ್ರೀಮತಿ ಶೋಭಾ ಸುರೇಶ್* ಮತ್ತು ವಕೀಲೆ *ಶ್ರೀಮತಿ ಮೇಘರಾಣಿ* ಕಾರ್ಯಕ್ರಮಕ್ಕೆ ಪೂರಕವಾಗಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ಆಶಾ ಕಾರ್ಯಕರ್ತೆಯರೂ ಮತ್ತು ಪಾಲಡ್ಕ ಗ್ರಾ.ಪಂ. ಘನತ್ಯಾಜ್ಯ ನಿರ್ವಹಣಾ ವಾಹನದ ಚಾಲಕಿ ಯವರನ್ನು ಸನ್ಮಾನಿಸಲಾಯಿತು. ವ್ಯಕ್ತಿತ್ವ ವಿಕಸನ ನಿರ್ದೇಶಕರಾದ *ಶುಭಕರ್ ಅಂಚನ್* ರವರು ಮಿಮಿಕ್ರಿ ಪ್ರದರ್ಶಿಸುವ ಮೂಲಕ ನೆರೆದಿರುವ ಸಭೀಕರನ್ನು ಮನರಂಜಿಸಿದರು.
*ಶ್ರೀಮತಿ ರಶ್ಮಿ ರಾಜೇಶ್* ಪ್ರಾರ್ಥಿಸಿದರು. *ಶ್ರೀಮತಿ ಜಾನಕಿ ವಸಂತ್* ನಿರೂಪಿಸಿದ ಕಾರ್ಯಕ್ರಮದಲ್ಲಿ *ಕು. ಅಕ್ಷತಾ ಮಾರೂರು* ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!