ಯುವವಾಹಿನಿ( ರಿ.) ಕೂಳೂರು ಘಟಕ
ವಿಶ್ವ ಮಹಿಳಾ ದಿನಾಚರಣೆ
ದಿನಾಂಕ 12-03-2025
ಶ್ರೀಮತಿ ವಾಣಿ, ಮುಖ್ಯೋಪಾಧ್ಯಾಯಿನಿ ದಕ್ಷಿಣ ಕನ್ನಡ ಜಿಲ್ಲಾ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು* ಕಾರ್ಯಕ್ರಮ ಉದ್ಘಾಟಿಸಿ ಮಹಿಳಾ ದಿನಾಚರಣೆಯ ಅಗತ್ಯತೆ ಬಗ್ಗೆ ಮಾತನಾಡಿದರು..
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಶ್ರೀ ಲತೀಶ್ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಯುವವಾಹಿನಿ (ರಿ) ಕೇಂದ್ರ ಸಮಿತಿಯ ಮಹಿಳಾ ಸಂಘಟನಾ ನಿರ್ದೇಶಕರಾದ ಶ್ರೀಮತಿ ಕವಿತಾ ಅಡ್ವೆ ಮಾತನಾಡಿ ಯುವವಾಹಿನಿ ಸಂಸ್ಥೆಯಲ್ಲಿ ಮಹಿಳೆಯರಿಗೆ ಪ್ರಾಧಾನ್ಯತೆ ಇದ್ದು, ಉತ್ತಮ ಪ್ರೋತ್ಸಾಹ ಸಿಗುತ್ತದೆ ಎಂದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಮಾತನಾಡಿ ನಮ್ಮ ಘಟಕದಲ್ಲಿ ಮಹಿಳೆಯರ ಸಂಖ್ಯೆ ಹೆಚ್ಚು. ಹಾಗೆಯೇ ಪ್ರತೀ ಕಾರ್ಯಕ್ರಮದಲ್ಲೂ ಮಹಿಳೆಯರ ಪಾತ್ರವೇ ಹೆಚ್ಚಾಗಿ ಕಂಡು ಬರುತ್ತದೆ ಎಂದರು.
ಕಾರ್ಯಕ್ರಮದಲ್ಲಿ ಶ್ರೀಮತಿ ವಾಣಿ ಮತ್ತು ಶ್ರೀಮತಿ ಕವಿತಾ ರವರನ್ನು ಅಭಿನಂದಿಸಲಾಯಿತು.
ಮಹಿಳೆಯರಿಗೆ ಬೆಂಕಿಯನ್ನು ಬಳಸದೆ ಅಡುಗೆ ಸ್ಪರ್ಧೆ ಹಾಗೂ ಸೌಂದರ್ಯ ಸ್ಪರ್ಧೆ ಆಯೋಜಿಸಲಾಗಿತ್ತು. ವಿಜೇತರ ಹೆಸರನ್ನು ಘಟಕದ ಮಾಜಿ ಅಧ್ಯಕ್ಷರಾದ ಪುಷ್ಪರಾಜ್ ಕುಮಾರ್ ರವರು ಘೋಷಿಸಿದರು. ವಿಜೇತರಿಗೆ ಅತಿಥಿಗಳು ಬಹುಮಾನ ವಿತರಿಸಿದರು.
ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಶ್ರೀಮತಿ ಜಯಲಕ್ಷ್ಮಿ ಹಾಗೂ ಕಾರ್ಯಕ್ರಮದ ಸಂಚಾಲಕರು, ಘಟಕದ ಮಹಿಳಾ ಸಂಘಟನಾ ನಿರ್ದೇಶಕರು ಆದ ಮಮತಾ ಪುಷ್ಪರಾಜ್ ಉಪಸ್ಥಿತರಿದ್ದರು.
ಸಾಂಸ್ಕೃತಿಕ ಕಾರ್ಯಕ್ರಮವು ಘಟಕದ ವ್ಯಕ್ತಿತ್ವ ವಿಕಸನ ನಿರ್ದೇಶಕರಾದ ದೇವಿಪ್ರಸಾದ್ ರವರ ನಿರ್ದೇಶನದಲ್ಲಿ ನಡೆಯಿತು.
ಅಧ್ಯಕ್ಷರು ಸ್ವಾಗತಿಸಿದರು. ಮೋಕ್ಷ ಪ್ರಾರ್ಥಿಸಿದರು. ಮಾಜಿ ಅಧ್ಯಕ್ಷರಾದ ದೀಕ್ಷಿತ್ ಸಿ ಎಸ್ ನಿರೂಪಿಸಿದರು. ಮಮತಾ ಪುಷ್ಪರಾಜ್ ವಂದಿಸಿದರು.


