Yuvavahini

SEP 14, 2025 4.55 PM IST

2025 26 ನೇ ಸಾಲಿನ ಪದಗ್ರಹಣ ಸಮಾರಂಭ-ಯುವವಾಹಿನಿ (ರಿ) ಪಡುಬಿದ್ರಿ ಘಟಕ

ಘಟಕದ 2025 26 ನೇ ಸಾಲಿನ ಪದಗ್ರಹಣ ಸಮಾರಂಭವು ದಿನಾಂಕ 24/8/ 25ರ ಆದಿತ್ಯವಾರ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘದ ಸಭಾಂಗಣದಲ್ಲಿ ಜರಗಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿದ ಅಧ್ಯಕ್ಷರಾದ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕಣ್ಣಂಗಾರು ಸೀನ ಪೂಜಾರಿಯವರು ಮಾತನಾಡಿ ಪಡುಬಿದ್ರಿ ಘಟಕವು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಜೊತೆಗೆ ವಿದ್ಯೆಗೂ ಮಹತ್ವ ನೀಡುತ್ತಿದೆ ಯುವ ಜನರಿಗೆ ವ್ಯಕ್ತಿತ್ವ ವಿಕಸನಗೊಳಿಸಲು ಯುವವಾಹಿನಿ ಅಂತಹ ಸಂಸ್ಥೆಗಳು ಮಾದರಿಯಾಗಿವೆ ಎಂದರು

ಪಡುಬಿದ್ರೆ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾದ ವೈ ಸುಧೀರ್ ಕುಮಾರ್ ಅವರು ಮಾತನಾಡಿ ವಿದ್ಯೆನಮ್ಮನ್ನು ಸ್ವತಂತ್ರವಾಗಿಸುತ್ತದೆ ಯುವಕರು ನಾಗರಿಕ ಸೇವೆಯ ಉದ್ಯೋಗದ ಬಗ್ಗೆ ಗಮನ ಹರಿಸಬೇಕು ಎಂದರು. ಮುಖ್ಯ ಅತಿಥಿಯಾದ ಉದ್ಯಮಿ ಗಣೇಶ್ ಗುಜರನ್ ಮಾತನಾಡಿ ವಿದ್ಯೆ ಉದ್ಯೋಗದಂತೆ ಸಂಘಟನೆಯು ಮುಖ್ಯ ಯುವಕರಿಗೆ ಮಾರ್ಗದರ್ಶನದ ಅಗತ್ಯವಿದೆ ಉದ್ಯೋಗದೊಂದಿಗೆ ಕೃಷಿಯತ್ತ ಆದ್ಯತೆ ಯುವ ಸಮೂಹ ನೀಡಬೇಕು ಎಂದರು .
ಶೈಕ್ಷಣಿಕ ಸಾಧಕರಾದ ಶ್ರೀಶ ಜಯಪುಜಾರಿ ಹಾಗೂ ಸುದೀನ್ ಪೂಜಾರಿ ಇವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಹಾಗೂ 30 ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ನೀಡಲಾಯಿತು .ನೂತನ ಸದಸ್ಯರು ಘಟಕಕ್ಕೆ ಸೇರ್ಪಡೆಗೊಂಡರು . ಯುವ ವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ನೂತನ ಅಧ್ಯಕ್ಷರಾದ ವಿದಿತ್ ಪೂಜಾರಿ ನೂತನ ತಂಡಕ್ಕೆ ಪ್ರತಿಜ್ಞಾವಿಧಿ ಬೋಧಿಸಿ ಶುಭ ಹಾರೈಸಿದರು. ಅಧ್ಯಕ್ಷ ಶಶಿಕಲ ಯಶೋಧರ ರವರು ನೂತನ ಅಧ್ಯಕ್ಷರಾದ ವಿದಿತ್ ಪೂಜಾರಿ ಕರ್ನಿರೆಯವರಿಗೆ ಮತ್ತು ಕಾರ್ಯದರ್ಶಿ ಸುಜಾತ ಪ್ರಸಾದ್ ರವರು ನೂತನ ಕಾರ್ಯದರ್ಶಿ ಭಾಸ್ಕರ್ ಎನ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಘಟಕದ ಅಧ್ಯಕ್ಷರಾದ ಶಶಿಕಲ ಯಶೋದರ ಅಧ್ಯಕ್ಷತೆ ವಹಿಸಿದ್ದರು.

ಉದ್ಯಮಿ ಗಣೇಶ್ ಗುಜರನ್ ಕೇಂದ್ರ ಸಮಿತಿ ಸಂಘಟನಾ ಕಾರ್ಯದರ್ಶಿ ದೀಪಕ್ ಕೋಟ್ಯಾನ್, ಸುಜಾತ ಪ್ರಸಾದ್ ,ಭಾಸ್ಕರ್ ಎನ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು .

ಸುಜಾತ ಹರೀಶ್ ಪ್ರಾರ್ಥನೆ ಮಾಡಿದರು. ಸುರೇಶ್ ಪೂಜಾರಿ ಪ್ರಸ್ತಾಪಿಸಿದರು. ಕಾರ್ಯದರ್ಶಿ ಸುಜಾತ ಪ್ರಸಾದ್ ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು. ಅಶ್ವತ್ ಎಸ್ ನೂತನ ಪದಾಧಿಕಾರಿಗಳ ಪಟ್ಟಿ ವಾಚಿಸಿದರು. ಚೈತ್ರ ಗಣೇಶ್ ಚೈತ್ರ ಮನೋಹರ್ , ಮತ್ತು ರವಿರಾಜ್ ಕೋಟ್ಯಾನ್ ಕಾರ್ಯಕ್ರಮ ನಿರೂಪಿಸಿದರು . ಭಾಸ್ಕರ್ ಏನ್ ಅಂಚನ್ ವಂದಿಸಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!