Yuvavahini

SEP 14, 2025 5.07 PM IST

ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ಜಯಂತಿ ಹಾಗೂ ಶಿಕ್ಷಕರ ದಿನಾಚರಣೆ -ಯುವವಾಹಿನಿ( ರಿ.) ಮಂಗಳೂರು ಘಟಕ

ದಿನಾಂಕ 09- 09- 2025 ಯುವವಾಹಿನಿ ಸಭಾಂಗಣ ಉರ್ವಸ್ಟೋರ್

ಯುವವಾಹಿನಿ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ಯುವಾಹಿನಿಯು ಹಮ್ಮಿಕೊಳ್ಳುತ್ತಿರುವ ಶಿವಗಿರಿ ಯಾತ್ರೆಯಿಂದ ಅನೇಕರಿಗೆ ನಾರಾಯಣ ಗುರುಗಳ ತತ್ವ ಸಂದೇಶಗಳನ್ನು ಹಾಗೂ ಅವರು ಸಮಾಜದಲ್ಲಿ ತಂದ ಬದಲಾವಣೆಗಳನ್ನು ತಿಳಿಯುವಂತಾಗಿದೆ. ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ ಬಲಯುತರಾಗಿರಿ ಎಂಬ ಗುರುಗಳ ಸಂದೇಶವನ್ನು ಅನುಸರಿಸಿ ವಿದ್ಯೆ ಕಲಿಸಿದ ಶಿಕ್ಷಕರನ್ನು ಗೌರವಿಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು.

ಸಾಹಿತಿ, ಯುವ ವಕೀಲರಾದ ಮನೋಜ್ ಕುಮಾರ್ ವಾಮಂಜೂರು ಮಾತನಾಡಿ ವಿವೇಕಾನಂದರವರನ್ನು ಇಡಿ ವಿಶ್ವಕ್ಕೆ ಪರಿಚಯಿಸಿದ ಸರ್ವಧರ್ಮ ಸಮ್ಮೇಳನ ಚಿಕಾಗೋದಲ್ಲಿ ನಡೆದರೆ ಅದೇ ರೀತಿ ಎರಡನೇ ಸರ್ವಧರ್ಮ ಸಮ್ಮೇಳನ ಕೇರಳದಲ್ಲಿ ನಾರಾಯಣ ಗುರುಗಳು ಆಯೋಜಿಸಿದ್ದರು.ಅಸಮಾನತೆಯಿಂದಾಗಿ ದೌರ್ಜನ್ಯಕ್ಕೊಳಗಾದ ಕೆಳವರ್ಗದ ಜನರು ಮತಾಂತರವಾಗುತ್ತಿದ್ದ ಸಂಧರ್ಭ ಜಾತಿ ಮತ ಯಾವುದಾದರೇನು ಮನುಷ್ಯ ಒಳ್ಳೆಯವನಾದರೆ ಸಾಕು ಎಂಬ ಸಂದೇಶದೊಂದಿಗೆ ಅಂದಿನ ಸರ್ವಧರ್ಮ ಸಮ್ಮೇಳನ ನಡೆಯಿತು ಎಂದರು.

ಶಿಕ್ಷಕರ ದಿನಾಚರಣೆಯ ಕುರಿತು ಸವಿತಾ ಕೋಟ್ಯಾನ್ ರವರು ಮಾತನಾಡಿದರು.ಈ ಸಂದರ್ಭ ಶಿಕ್ಷಕರನ್ನು ಘಟಕದ ವತಿಯಿಂದ ಗೌರವಿಸಲಾಯಿತು.

ಘಟಕದ ಅಧ್ಯಕ್ಷ ಅಶೋಕ್ ಅಂಚನ್ ಕೋಡಿಕಲ್ ಅಧ್ಯಕ್ಷತೆ ವಹಿಸಿದ್ದರು.ಸಮಾಜ ಸೇವಾ ನಿರ್ದೇಶಕರಾದ ಉಷಾರವರು ಸ್ವಾಗತಿಸಿದರು.ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ನಾರಾಯಣ ಗುರುಗಳ ತತ್ವ ಆದರ್ಶಗಳ ಪ್ರಚಾರ ನಿರ್ದೇಶಕರಾದ ಪೂವಪ್ಪ ಕುಕ್ಯಾನ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು.ಜಯಂತಿ ಕೋಟ್ಯಾನ್ ಹಾಗೂ ಪೂರ್ಣಿಮಾ ಯು ಆರ್ ಪ್ರಾರ್ಥನೆ ಗೀತೆ ಹಾಡಿದರು.ಘಟಕದ ಮಾಜಿ ಅಧ್ಯಕ್ಷರು ಹಾಗೂ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!