ದಿನಾಂಕ 23.08.2025 ರಂದು ಅನುದಾನಿತ ಕಳುವಾರು ಹಿರಿಯ ಪ್ರಾಥಮಿಕ ಶಾಲೆ ಮತ್ತು ಆಂಗ್ಲ ಮಾಧ್ಯಮ ಶಾಲೆ, ಚೇಳ್ಯಾರು ಕಾಲೊನಿ ಇಲ್ಲಿ ಘಟಕದ ವತಿಯಿಂದ ವನಮಹೋತ್ಸವ ಹಾಗೂ ಪುಸ್ತಕ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಮಾಜಿ ಅಧ್ಯಕ್ಷರು ಹಾಗೂ ಘಟಕದ ಹಲವು ಸದಸ್ಯರು ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಶಾಲಾ ಆವರಣದಲ್ಲಿ ಅನೇಕ ಸಸಿಗಳನ್ನು ವಿದ್ಯಾರ್ಥಿಗಳು, ಘಟಕದ ಅಧ್ಯಕ್ಷರು, ಸದಸ್ಯರು ಹಾಗೂ ಅಧ್ಯಾಪಕರೆಲ್ಲರೂ ಸೇರಿ ಗಿಡಗಳನ್ನು ನೆಡುವ ಮೂಲಕ ವನಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಅದೇ ಸಂಧರ್ಭದಲ್ಲಿ ಅಧ್ಯಾಪಕರಿಗೆ ಹಾಗೂ ಮಕ್ಕಳಿಗೆ ಉಪಯುಕ್ತವಾದ ಅನೇಕ ಪುಸ್ತಕಗಳನ್ನು ಶಾಲೆಯ ಗ್ರಂಥಾಲಯಕ್ಕೆ ಘಟಕದ ಅಧ್ಯಕ್ಷರು ಶಾಲಾ ಮುಖ್ಯೋಪಾಧ್ಯಾಯರಿಗೆ ನೀಡಿವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಿದರು.
SEP 14, 2025 5.29 PM IST


