Yuvavahini

SEP 14, 2025 5.42 PM IST

ಪಚ್ಚೆ ಸಿರಿತೊಟ್ಟಿಗೆ ಸೋಣದ ಪೊರ್ಲು -ಯುವವಾಹಿನಿ (ರಿ) ಸುರತ್ಕಲ್ ಘಟಕ

ಅಳಿವಿನಂಚಿನಲ್ಲಿರುವ ನಮ್ಮ ತುಳುನಾಡ ಸಂಸ್ಕ್ರತಿಯ ಆಚಾರ ವಿಚಾರಗಳನ್ನು ಮುಂದಿನ ಪೀಳಿಗೆಗೆ ತಿಳಿಸಿಕೊಡುವುದು ನಮ್ಮ ಆದ್ಯ ಕರ್ತವ್ಯ ಎಂದು ಮುಖ್ಯ ಅತಿಥಿಗಳಾದ ದೇವೇಂದ್ರ ಡಿ. ಕೋಟ್ಯಾನ್ ತಿಳಿಸಿದರು. ಅಲ್ಲದೆ ಆಷಾಢದ ಕಷ್ಟ ಶ್ರಾವಣದ ಸುಖವನ್ನು ಸವಿವರವಾಗಿ ತಿಳಿಸುವುದರ ಮೂಲಕ ಕೃಷಿ ಬದುಕಿನ ಮೂಲಕ ತುಳುನಾಡ ಜನರ ಜೀವನ ಯಾವ ರೀತಿ ಬೆಸೆದುಕೊಂಡಿದೆ ಎನ್ನುವುದನ್ನು ತಿಳಿಸಿಕೊಟ್ಟರು. ಅಲ್ಲದೆ ತುಳುನಾಡ ಜನರ ಹಬ್ಬ ಹರಿದಿನಗಳ ಮಹತ್ವವನ್ನು ತಿಳಿಸಿಕೊಟ್ಟರು. ಅದೇ ರೀತಿ ಆಷಾಢ ಮಾಸದಲ್ಲಿ ದೇವಸ್ಥಾನಗಳು, ದೈವ ದೇವರುಗಳ ಪೂಜಾ ಕೈಂಕರ್ಯಗಳು ಸ್ಥಗಿತಗೊಂಡು ಶ್ರಾವಣ ಮಾಸದಲ್ಲಿ ಮತ್ತೆ ಪೂಜಾ ವಿಧಿ ವಿಧಾನಗಳ ಆರಂಭವನ್ನು ಜೊತೆಗೆ ಹಚ್ಚ ಹಸಿರಿನ ಸುಂದರ ಪರಿಸರದ ಬದಲಾವಣೆಯನ್ನು ಸುಲಲಿತವಾಗಿ ತಿಳಿಸಿಕೊಟ್ಟರು.

ಕಾರ್ಯಕ್ರಮವನ್ನು ಗಿಡ ನೀಡುವುದರ ಮೂಲಕ ಚಾಲನೆಯನ್ನು ಕೊಟ್ಟ ಶ್ರೀಯುತ ಆನಂದ ಪೂಜಾರಿ ಯವರು ಕೃಷಿಯಿಂದ ಸ್ವಾವಲಂಬಿ ಬದುಕಿನ ಬಗೆಗೆ ವಿವರವಾಗಿ ತಿಳಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀಯುತ ದೇವೆಂದ್ರ ಕೋಟ್ಯಾನ್ ಹಾಗೂ ಶ್ರೀಯುತ ಆನಂದ ಪೂಜಾರಿ ಭಾಗವಹಿಸಿದ್ದರು. ಅಳಿವಿನಂಚಿನಲ್ಲಿರುವ ಕೃಷಿ ಬದುಕನ್ನು ಮುಂದಿನ ಪೀಳಿಗೆಗೆ ತಿಳಿಸುವಲ್ಲಿ ಇಂತಹ ಕಾರ್ಯಕ್ರಮಗಳು ಮಾದರಿ ಎಂಬುವುದನ್ನು ಶ್ರೀಯುತ ಯೋಗೀಶ್ ಸನಿಲ್ ಇವರು ತಮ್ಮ ಪ್ರಾಸ್ತಾವಿಕ ನುಡಿಗಳ ಮೂಲಕ ತಿಳಿಸಿದರು. ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ಘಟಕದ ಅಧ್ಯಕ್ಷರಾದ ಶ್ರೀಮತಿ ವಾಣಿ ಗಣೇಶ್ ರವರು ವಹಿಸಿ ಕೊಂಡಿದ್ದರು. ಶ್ರೀಯುತ ಭಾಸ್ಕರ್ ಸಾಲ್ಯಾನ್ ಇವರು ಘಟಕದ ಸದಸ್ಯರಿಗೆ ಸಾಂಪ್ರದಾಯಿಕ ಆಟಗಳನ್ನು ಆಡಿಸಿ ರಂಜಿಸಿದರು.ಕಾರ್ಯದರ್ಶಿ ದಿವಿತ್ ಕುಮಾರ್ ಇವರು ಘಟಕದ ಸದಸ್ಯರಿಗಾಗಿ ಏರ್ಪಡಿಸಲಾದ ಛಾಯಾಚಿತ್ರ ಸ್ಪರ್ಧೆಯ ವಿಜೇತರ ಪಟ್ಟಿಯನ್ನು ಓದಿದರು. ಘಟಕದ ಸದಸ್ಯರು ಜಾನಪದ ನೃತ್ಯಕ್ಕೆ ಹೆಜ್ಜೆ ಹಾಕುವುದರ ಮೂಲಕ ಮೆರುಗು ತಂದರು. ಕುಮಾರಿ ಆದ್ಯ ಇವರು ಪ್ರಾರ್ಥನೆಯ ಮೂಲಕ ಕಾರ್ಯಕ್ರಮ ಆರಂಭಿಸಿದರು. ಶ್ರೀಯುತ ರಿತೇಶ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!