Yuvavahini

SEP 15, 2025 3.29 PM IST

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆ-ಯುವವಾಹಿನಿ (ರಿ) ಕುಪ್ಪೆಪದವು – ಎದಪದವು ಘಟಕ

7 ನೇ ವರ್ಷದ ಕೃಷ್ಣವೇಷ ಸ್ಪರ್ಧೆಯು ದಿನಾಂಕ 10.8.25 ನೇ ಆದಿತ್ಯವಾರ ಆಶಾಕಿರಣ ಸಭಾ ಭವನದಲ್ಲಿ ಗುರುಗಳಿಗೆ ದೀಪ ಬೆಳಗಿಸುವ ಮೂಲಕ ಪ್ರಾರಂಭವಾಯಿತು..
ಕಾರ್ಯಕ್ರಮದ ಉದ್ಘಾಟನೆಯನ್ನು ಧಾರ್ಮಿಕ ಮುಂದಾಳು ಐ ಕೃಷ್ಣ ಅಸ್ರಣ್ಣ ರವರು ನಡೆಸಿಕೊಟ್ಟರು..ವೇದಿಕೆಯಲ್ಲಿ ಅಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಸ್ಥಾಪಕ ಅಧ್ಯಕ್ಷರು, ಘಟಕದ ಕಾರ್ಯದರ್ಶಿ, ಉಪಸ್ಥಿತರಿದ್ದರು.
ಯಶೋಧ ಕೃಷ್ಣ, ಮುದ್ದುಕೃಷ್ಣ,ಬಾಲಕೃಷ್ಣ ,ತುಂಟಕೃಷ್ಣ ಎಂಬ 4 ವಿಭಾಗದಲ್ಲಿ ಕಾರ್ಯಕ್ರಮವನ್ನು ನಡೆಸಲಾಯಿತು.. ಪ್ರತಿವಿಭಾಗಕ್ಕೂ ಪ್ರಥಮ, ದ್ವಿತೀಯ ಪ್ರಶಸ್ತಿಯನ್ನು ಹಾಗೂ ಸ್ಪರ್ಧಿಸಿದ ಎಲ್ಲಾ ಸ್ಪರ್ಧಿಗಳಿಗೆ ಸಮಾಧಾನಕರ ಬಹುಮಾನ ಹಾಗೂ ಪ್ರಶಸ್ತಿಪತ್ರ ನೀಡಿ ಗೌರವಿಸಲಾಯಿತು..
ಸ್ಪರ್ಧೆಯ ತೀರ್ಪುಗಾರರಾಗಿ ಶಿಕ್ಷಕರಾದ ಯೋಗಿತಾ ನವಾನಂದ, ಹಾಗೂ ಸುರೇಂದ್ರ ಪೂಜಾರಿಯವರು ಉತ್ತಮವಾಗಿ ನಡೆಸಿಕೊಟ್ಟರು..
ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ನಮ್ಮ ಘಟಕದ ಅಧ್ಯಕ್ಷರಾದ ಶ್ರೀಧರ ಪೂಜಾರಿಯವರು ವಹಿಸಿದ್ದರು, ಅತಿಥಿಗಳಾಗಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾದ ವೈ ಭರತ್ ಶೆಟ್ಟಿ ,ಕೇಂದ್ರ ಸಮಿತಿಯ ಸಾಂಸ್ಕೃತಿಕ ನಿರ್ದೇಶಕರಾದ ಸುಶಾಂತ್ ಪೂಜಾರಿ, ಇಮ್ಯಾಕುಲೆಟ್ ಹಾರ್ಟ್ ಆಫ್ ಮೇರಿ ಚರ್ಚ್ ನ ಧರ್ಮಗುರುಗಳಾದ ಮಾರ್ಸೆಲ್ ಸಲ್ದಾನಾ,
ಶ್ರೀ ರಾಮ ಮಂದಿರ ಎಡಪದವು ಇದರ ಟ್ರಸ್ಟಿಗಳಾದ ಸುಕುಮಾರ್ ಅಮೀನ್,ವಿಶ್ವ ಹಿಂದೂ ಪರಿಷತ್ ನ ಗುರುಪುರ ಪ್ರಖಂಡ ದ ಉಪಾಧ್ಯಕ್ಷರಾದ ವಿಶ್ವನಾಥ್ ಪಾಕಜೆ, ಮುತ್ತೂರು ಗ್ರಾಮಪಂಚಾಯತ್ ಅಧ್ಯಕ್ಷರಾದ ಪ್ರವೀಣ್ ಆಳ್ವ ಗುಂಡ್ಯ, ಉದ್ಯಮಿ ಗಜಾನನ ಕನ್ಸ್ಟ್ರಕ್ಷನ್ ಮಾಲಕರಾದ ಜಗದೀಶ್ ಪಾಕಜೆ,
ಎಡಪದವು ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಗೋಪಾಲ ಪೂಜಾರಿ, ಮುತ್ತೂರು ಗ್ರಾಮಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಷ್ಮಾ, ಘಟಕದ ಕಾರ್ಯದರ್ಶಿ ಶ್ರೀಮತಿ ಅಕ್ಷತಾ,
ಘಟಕದ ಕಲೆ,ಸಾಹಿತ್ಯ, ಮತ್ತು ಸಾಂಸ್ಕೃತಿಕ ನಿರ್ದೇಶಕರಾದ ಧನ್ಯಶ್ರೀ ಮುಗಿಲ ವೇದಿಕೆಯಲ್ಲಿದ್ದರು.
ನಿಕಟಪೂರ್ವ
ಅಧ್ಯಕ್ಷರಾದ ಅಕ್ಷಿತ್ ಕುಮಾರ್ ರವರು ಎಲ್ಲರನ್ನೂ ಸ್ವಾಗತಿಸಿದರು.
ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ನಮ್ಮ ಘಟಕದ ಸದಸ್ಯರನ್ನು ಗೌರವಿಸಲಾಯಿತು.
ಅಧ್ಯಕ್ಷರಾದ ಶ್ರೀಧರ ಪೂಜಾರಿಯವರು ಅಧ್ಯಕ್ಷೀಯ ಭಾಷಣ ಮಾಡಿದರು.
ಕುಮಾರಿ ಧನ್ಯಶ್ರೀ ಮುಗಿಲ, ಶ್ರೀಮತಿ ಸಂಜಾತ, ಕುಮಾರಿ ಬಿಂದಿಯಾ ಕಾರ್ಯಕ್ರಮವನ್ನು ನಿರೂಪಿಸಿದರು.
ಶ್ರೀಮತಿ ಅಕ್ಷತಾ ಧನ್ಯವಾದಗೈದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!