ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಹಾಗೂ ಯುವವಾಹಿನಿ (ರಿ.) ಮಂಗಳೂರು ಘಟಕದ ಜಂಟಿ ಆಶ್ರಯದಲ್ಲಿ ನಡೆಯುವ ಯುವವಾಹಿನಿ ಸಾಪ್ತಾಹಿಕ ಸಂಕೀರ್ತನ ಸರಣಿಯ 01-09-2025ರ ಭಜನಾ ಸೇವೆಯು ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ, ಕುಳಾಯಿ ಇವರ ಸಹಯೋಗದೊಂದಿಗೆ ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯಲ್ಲಿ ನಡೆಯಿತು.
ಭಜನಾ ಮಂಡಳಿಯ ಸದಸ್ಯರು ಭಕ್ತಿ ಪೂರ್ವಕವಾಗಿ ರಾಗ ತಾಳದೊಂದಿಗೆ ಭಜನಾ ಸೇವೆಯನ್ನು ನೀಡಿದರು. ಅರ್ಚಕರು ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಪೂಜೆ ಸಲ್ಲಿಸಿ ಭಜನಾ ತಂಡಕ್ಕೆ ಪ್ರಸಾದ ಹಾಗೂ ಅನುಗ್ರಹ ಪತ್ರ ನೀಡಿ ಆಶೀರ್ವದಿಸಿದರು.
ಈ ಕಾರ್ಯಕ್ರಮದಲ್ಲಿ ಘಟಕದ ಸದಸ್ಯರು ಭಾಗವಹಿಸಿದ್ದರು.


