ದಿನಾಂಕ 14-08-2025 ನೇ ಗುರುವಾರ ಬೆಳಿಗ್ಗೆ ಘಟಕದ ವತಿಯಿಂದ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ, ಪಂಜಿಮೊಗರು ಇವರ ಸಹಯೋಗದೊಂದಿಗೆ, ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣಾ ಕಾರ್ಯಕ್ರಮವನ್ನು ಯುವವಾಹಿನಿ ( ರಿ.) ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಕೂಳೂರು ಘಟಕವು ಕಳೆದ 10 ವರ್ಷದಿಂದ ಬಡ ವಿದ್ಯಾರ್ಥಿಗಳಿಗೆ ವಿದ್ಯಾ ನಿಧಿ ವಿತರಣೆ ಮಾಡಿಕೊಂಡು ಬರುತ್ತಿದೆ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಸದಾ ಪ್ರೋತ್ಸಾಹಿಸುವ ಯುವವಾಹಿನಿ ಕೂಳೂರು ಘಟಕದ ಕಾರ್ಯವೈಖರಿಯನ್ನು ಶ್ಲಾಘಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ವಹಿಸಿದ್ದರು.
ಮುಖ್ಯ ಅತಿಥಿಗಳಾಗಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಪೂಜಾ.ಪೈ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಹಿರಿಯ ಪ್ರಾಥಮಿಕ ಶಾಲೆ ಪಂಜಿಮೊಗರು ಇಲ್ಲಿನ ಮುಖ್ಯೋಪಾಧ್ಯಾಯರಾದ ವಾಣಿ, ಶ್ರೀ ಶಾರದೋತ್ಸವ ಸೇವಾ ಟ್ರಸ್ಟ್ ವಿದ್ಯಾ ನಗರ ಇಲ್ಲಿನ ಅಧ್ಯಕ್ಷರಾದ ಉಮೇಶ್ ಪೂಜಾರಿ ಭಾಗವಹಿಸಿದ್ದರು. ಮುಖ್ಯ ಅತಿಥಿಗಳೆಲ್ಲರೂ ಸೇರಿ
ಕಾರ್ಯಕ್ರಮದಲ್ಲಿ 60 ಮಕ್ಕಳಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು.
ವೇದಿಕೆಯಲ್ಲಿ ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಯಶೋಧ, ಉಪಾಧ್ಯಕ್ಷರಾದ ಸಫ್ರೀನಾ ಕೆ.ಎಚ್, ಘಟಕದ ವಿದ್ಯಾರ್ಥಿ ಸಂಘಟನಾ ನಿರ್ದೇಶಕರು ಹಾಗೂ ಕಾರ್ಯಕ್ರಮ ಸಂಚಾಲಕರಾದ ಸೃಜನಿ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ಪ್ರಥಮ ಉಪಾಧ್ಯಕ್ಷರು, ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಶಾಲೆಯ ಮುಖ್ಯೋಪಾಧ್ಯಾಯರು ಎಲ್ಲರನ್ನೂ ಸ್ವಾಗತಿಸಿದರು. ಶಾಲಾ ಮಕ್ಕಳು ಪ್ರಾರ್ಥಿಸಿದರು. ಯುವವಾಹಿನಿ ರಿ ಕೂಳೂರು ಘಟಕದ ಕೋಶಾಧಿಕಾರಿ ಸುಮಂಗಲಾ ಸಿ ಕೋಟ್ಯಾನ್ ನಿರೂಪಿಸಿದರು. ಸಂಚಾಲಕರು ವಂದಿಸಿದರು
SEP 15, 2025 3.55 PM IST


