Yuvavahini

SEP 15, 2025 4.24 PM IST

ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ -ಯುವವಾಹಿನಿ( ರಿ.) ಶಕ್ತಿನಗರ ಘಟಕ

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಟ್ರಸ್ಟ್(ರಿ) ಕುಂಟಲ್ಪಾಡಿ ಸಹಭಾಗಿತ್ವದೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರುಗಳ 171 ನೇ ಜಯಂತಿ ಆಚರಣೆ
11/09/2025
ಬ್ರಹ್ಮಶ್ರೀ ನಾರಾಯಣ ಗುರುಮಂದಿರದಲ್ಲಿ ಮುಂಜಾನೆ ಗಣಹೋಮ ನಡೆಸಿ ಮಂದಿರವನ್ನು ಶುದ್ಧೀಕರಿಸಿ ಗುರುಗಳ ಮೂರ್ತಿಗೆ ಅಭಿಷೇಕವನ್ನು ಮಾಡಲಾಯಿತು. ನಂತರ ಹೂಗಳಿಂದ ಅಲಂಕರಿಸಿ ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ಕಕ್ಕೆಬೆಟ್ಟು ರವರ ಮನೆಯಲ್ಲಿ ಗುರುಗಳ ಮೂರ್ತಿಯನ್ನು ಇರಿಸಿ, ಬ್ರಹ್ಮಶ್ರೀ ನಾರಾಯಣ ಗುರು ಭಜನಾ ಮಂಡಳಿ ಮೇರಿಹಿಲ್ ಗುರುನಗರ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಸತ್ಸಂಗ ಹಾಗೂ ಧಾರ್ಮಿಕ ಕಾರ್ಯಕ್ರಮಗಳನ್ನು ಹಾಗೂ ಗುರು ಪೂಜೆಯನ್ನು ನಡೆಸಿ ಗುರುಗಳ ಮೂರ್ತಿಯನ್ನು ಚೆಂಡೆ ತಾಳ ಹಾಗೂ ಮಕ್ಕಳ ಕುಣಿತ ಭಜನೆಯೊಂದಿಗೆ ಶೋಭಾಯಾತ್ರೆಯೊಂದಿಗೆ ಊರ ಸರ್ವರ ಸಹಕಾರದೊಂದಿಗೆ ಕಕ್ಕೆಬೆಟ್ಟುವಿನಿಂದ ಮಹಾಕಾಳಿ , ಮುತ್ತಪ್ಪ ಗುಡಿ, ರಮಾಶಕ್ತಿ ಮಿಷನ್, ನಾಲ್ಯಪದವು ಶ್ರೀ ಕೃಷ್ಣ ಭಜನಾ ಮಂದಿರ ರಸ್ತೆಯಿಂದ ಕುಂಟಲ್ಪಾಡಿಯವರೆಗೆ ವೈಭವದ ಮೆರವಣಿಗೆಯೊಂದಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಂಟಲ್ಪಾಡಿ ಇಲ್ಲಿಗೆ ಆಗಮಿಸಿ, ನಂತರ ಮಂದಿರದಲ್ಲಿ ಭಜನಾ ಕಾರ್ಯಕ್ರಮವನ್ನು ನಡೆಸಿದ ಶ್ರೀ ಚಂಡ ಚಾಮುಂಡೇಶ್ವರಿ ಭಜನಾ ಮಂಡಳಿ ಬೊಲ್ಪು ಗುಡ್ಡೆ ಇವರಿಗೆ ಗೌರವ ಸಲ್ಲಿಸಿ, ಗುರುಗಳಿಗೆ ಗುರುಪೂಜೆ ಹಾಗೂ ಮಹಾಪೂಜೆಯನ್ನು ನಡೆಸಲಾಯಿತು. ಕಾರ್ಯಕ್ರಮದಲ್ಲಿ ಶಾಸಕರಾದ ವೇದವ್ಯಾಸ ಕಾಮತ್ , ಮಾಜಿ ಕಾರ್ಪೊರೇಟರ್ ಕಿಶೋರ್ ಕೊಟ್ಟಾರಿ, ಶಕೀಲ ಕಾವ ಹಾಗೂ ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್, ನಿಕಟಪೂರ್ವ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ, ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ,ಮತ್ತು ಕೇಂದ್ರ ಸಮಿತಿಯ ಹಲವಾರು ಸದಸ್ಯರು ಹಾಗೂ ವಿವಿಧ ಘಟಕಗಳಿಂದ ಆಗಮಿಸಿದ ಅಧ್ಯಕ್ಷರು ಹಾಗೂ ಸದಸ್ಯರು ಭಾಗಿಯಾಗಿದ್ದರು . ನಂತರ ಆಗಮಿಸಿದ ಎಲ್ಲಾ ಭಕ್ತಾದಿಗಳಿಗೆ ಅನ್ನ ಸಂತರ್ಪಣೆ ಮಾಡಲಾಯಿತು…

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!