Yuvavahini

SEP 16, 2025 6.50 PM IST

ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್-ಯುವವಾಹಿನಿ (ರಿ.) ಬೆಳ್ತಂಗಡಿ ಘಟಕ

ಯುವವಾಹಿನಿ ಸಂಚಲನಾ ಸಮಿತಿ ಮುಂಡಾಜೆ ಇದರ ಆತಿಥ್ಯದಲ್ಲಿ
” ಬಿರುವೆರೆ ಗೊಬ್ಬು ಕೆಸರ್ ದ ಕಂಡಡ್ ”
ಕಾರ್ಯಕ್ರಮ ದಿನಾಂಕ 14.09.2025 ಆದಿತ್ಯವಾರದಂದು ಮುಂಡಾಜೆಯ ಪಿಲತಡ್ಕದ ಪೂವಪ್ಪ ಪೂಜಾರಿಯವರ ಗದ್ದೆಯಲ್ಲಿ ನಡೆಯಿತು. ಕುದ್ರೋಳಿ ದೇವಸ್ಥಾನದ ಅರ್ಚಕರಾದ ರೂಪೇಶ್ ಶಾಂತಿ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು, ಪ್ರಚಾರ ನಿರ್ದೇಶಕರಾದ ಭಾಸ್ಕರ್ ಕೋಟ್ಯಾನ್ ಸಸಿಹಿತ್ಲು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿ ಅಧ್ಯಕ್ಷರಾದ ಜಯವಿಕ್ರಮ್ ಕಲ್ಲಾಪು ಆಗಮಿಸಿ ಶುಭ ಹಾರೈಸಿದರು. ಕಾರ್ಯಕ್ರಮಕ್ಕೆ ವಿಶೇಷ ಆಹ್ವಾನಿತರಾಗಿ ಯುವವಾಹಿನಿ ಬೆಳ್ತಂಗಡಿ ಘಟಕದ ಮಾಜಿ ಅಧ್ಯಕ್ಷರಾದ ಎಂ.ಕೆ. ಪ್ರಸಾದ್, ಅಶ್ವತ್ ಕುಮಾರ್, ಹರೀಶ್ ಸುವರ್ಣ, ಸುಜಾತ ಅಣ್ಣಿ ಪೂಜಾರಿ, ಸದಾಶಿವ ಊರ, ಗುರುನಾರಾಯಣ ಸ್ವಾಮಿ ಸೇವಾ ಸಂಘ ಬೆಳ್ತಂಗಡಿಯ ನಿರ್ದೇಶಕರುಗಳಾದ ಸಂತೋಷ್ ಕೆಸಿ, ರವೀಂದ್ರ ಬಿ ಅಮೀನ್, ಜಯ ಕುಮಾರ್ ನಡ, ಸುನಿಲ್ ಕನ್ಯಾಡಿ, ನಮಿತಾ ಪೂಜಾರಿ, ಮುಂಡಾಜೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಗಣೇಶ್ ಬಂಗೇರ ಆಗಮಿಸಿದ್ದರು.
ಕಾರ್ಯಕ್ರಮದಲ್ಲಿ ಸದಾನಂದ ಬಿ ಮುಂಡಾಜೆ ಹಾಗೂ ಬಾಬು ಪೂಜಾರಿ ಕೂಳೂರು ಇವರನ್ನು ಸನ್ಮಾನಿಸಲಾಯಿತು. ಪ್ರಮುಖರಾದ ವಿಠಲ್ ಸಿ ಪೂಜಾರಿ ಹೊಸಂಗಡಿ, ಅಣ್ಣಿ ಪೂಜಾರಿ ಉಜಿರೆ, ಕಿಶೋರ್ ಕುರುಡ್ಯ, ನಾರಾಯಣ ಪೂಜಾರಿ, ಉಪಸ್ಥಿತರಿದ್ದರು. ಸ್ಪರ್ಧೆಯಲ್ಲಿ ಮುಂಡಾಜೆ ಗ್ರಾಮದ ಬಿಲ್ಲವರು ಹಾಗೂ ಬೆಳ್ತಂಗಡಿ ಘಟಕದ ಎಲ್ಲಾ ಸದಸ್ಯರೂ ಭಾಗವಹಿಸಿ ಕೆಸರ್ ದ ಗೊಬ್ಬೂ
ಕಾರ್ಯಕ್ರಮದ ಸಂಭ್ರಮದಲ್ಲಿ ಪಾಲ್ಗೊಂಡರು. ಆಗಮಿಸಿದ ಎಲ್ಲಾ ಸಮಾಜ ಬಾಂಧವರನ್ನು ಘಟಕದ ಅಧ್ಯಕ್ಷರಾದ ಗುರುರಾಜ್ ಗುರಿಪಳ್ಳ ಯುವವಾಹಿನಿ ಸಂಚಾಲನ ಸಮಿತಿ ಮುಂಡಾಜೆ ಅಧ್ಯಕ್ಷರಾದ ಕೇಶವ ಮುಂಡಾಜೆ ಆತ್ಮೀಯವಾಗಿ ಸ್ವಾಗತಿಸಿದರು. ಘಟಕದ ಉಪಾಧ್ಯಕ್ಷ ಸಂತೋಷ್ ಅರಳಿ, ಕಾರ್ಯದರ್ಶಿ ಮಧುರ ರಾಘವ್, ಕೋಶಾಧಿಕಾರಿ ನಾಗೇಶ್ ಅದೆಲು, ನಿರ್ದೇಶಕರು ಹಾಗೂ ಸಂಘಟನಾ ಕಾರ್ಯದರ್ಶಿ ಪದಾಧಿಕಾರಿಗಳು ಮಹಿಳಾ ಸಂಚಾಲನ ಸಮಿತಿ ಪ್ರ. ಸಂಚಾಲಕರಾದ ಲೀಲಾವತಿ ಪನಕಜೆ ಹಾಗೂ ಪದಾಧಿಕಾರಿಗಳು, ಯುವವಾಹಿನಿ ಸಂಚಾಲನ ಸಮಿತಿ ಮುಂಡಾಜೆ ಕಾರ್ಯದರ್ಶಿ ಕು. ಜಿತೀಕ್ಷ, ಕ್ರೀಡಾ ಸಂಚಾಲಕ ಸಂತೋಷ್, ಯಶೋಧರ ಮುಂಡಾಜೆ ಹಾಗೂ ಪದಾಧಿಕಾರಿಗಳು ಸಲಹೆಗಾರರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಸದಸ್ಯರೆಲ್ಲರೂ ಹಳದಿ ಟೀ ಶರ್ಟ್ ಧರಿಸಿದ್ದರು, ಮದ್ಯಾಹ್ನ ಊಟದ ವ್ಯವಸ್ಥೆ ಏರ್ಪಡಿಸಲಾಗಿತ್ತು. ಶಾಲಾ ಮಕ್ಕಳಿಂದ ಹಿಡಿದು ಹಿರಿಯರವರೆಗೆ ಎಲ್ಲಾರೂ ಒಟ್ಟಾಗಿ ಆಟೋಟ ಸ್ಪರ್ಧೆಗಳಲ್ಲಿ ಪಾಲ್ಗೊಂಡದ್ದು ಬಹಳ ವಿಶೇಷವಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!