ಬ್ರಹ್ಮಶ್ರೀ ನಾರಾಯಣಗುರುಗಳ 171 ನೆ ಜನ್ಮ ದಿನಾಚರಣೆ ಪ್ರಯುಕ್ತ ಗುರು ಪೂಜೆ 07/09/2025 ರಂದು ನಡೆಯಿತು .
‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್ ಕೆ ಗುರು ಸಂದೇಶ ನೀಡಿದರು
ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು, ಮಾಜಿ ಅಧ್ಯಕ್ಷರಾದ ಅರುಣ್ ಕುಮಾರ್ ಪೂಜೆ ಮಾಡಿದರು.
ಘಟಕದ ಕೋಶಾಧಿಕಾರಿ ನವೀನ್ ಪೂಜಾರಿ, ಸಲಹೆಗಾರ ಟಿ ರಾಮಚಂದ್ರ ಸುವರ್ಣ ತುಂಬೆ, ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೋಟ್ಯಾನ್, ನಾಗೇಶ್ ಪೊನ್ನೋಡಿ, ದಿನೇಶ್ ಸುವರ್ಣ ರಾಯಿ ಉಪಸ್ಥಿತರಿದ್ದರು
ನಾರಾಯಣಗುರು ತತ್ವ ಪ್ರಚಾರ ಅನುಷ್ಠಾನ ನಿರ್ದೇಶಕ ಹರೀಶ್ ಸಾಲ್ಯಾನ್ ಅಜೆಕಲ ಧನ್ಯವಾದ ನೀಡಿದರು.


