Yuvavahini

SEP 16, 2025 7.17 PM IST

ಶ್ರೀ ನಾರಾಯಣಗುರುಗಳ 171 ನೇ ಜನ್ಮದಿನದ ಆಚರಣೆ -ಯುವವಾಹಿನಿ (ರಿ) ಕೂಳೂರು ಘಟಕ

ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ 171 ನೇ ಜನ್ಮದಿನದ ಆಚರಣೆ
ದಿನಾಂಕ 07-09-2025 ನೇ ಆದಿತ್ಯವಾರ ದಂದು ಚಿರಂತನ ಚಾರಿಟೇಬಲ್ ಟ್ರಸ್ಟ್ ಸುರತ್ಕಲ್ ನಲ್ಲಿ ನಡೆಯಿತು
ಹಿರಿಯರಾದ ವಿಶಾಲಾಕ್ಷಿ.ಎಸ್ ರವರು ಗುರುಗಳಿಗೆ ದೀಪ ಬೆಳಗಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಪ್ರಥಮ ಉಪಾಧ್ಯಕ್ಷರಾದ ಗೀತಾ ವಸಂತ್ ವಹಿಸಿದ್ದರು
ಘಟಕದ ಸದಸ್ಯರಾದ ಚಿತ್ರ ಶ್ರೀ ರವರು ಬ್ರಹ್ಮ ಶ್ರೀ ನಾರಾಯಣ ಗುರು ವರ್ಯರ ಬಗ್ಗೆ ಮಾಹಿತಿಯನ್ನು ನೀಡಿದರು.
ಸೂಪರ್ ವೈಸರ್ ವಿದ್ಯಾ ರವರು ಮಾತನಾಡಿ ಘಟಕದ ಸಾಮಾಜಿಕ ಕಾಳಜಿಯನ್ನು ಶ್ಲಾಘಿಸಿದರು.
ವೇದಿಕೆಯಲ್ಲಿ ಕಾರ್ಯದರ್ಶಿ ಜಯಲಕ್ಷ್ಮಿ, ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರು ಹಾಗೂ ಕಾರ್ಯಕ್ರಮದ ಸಂಚಾಲಕರಾದ ಅನಿತಾ ತುಕಾರಾಮ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ನಿಕಟಪೂರ್ವ ಅಧ್ಯಕ್ಷರು, ಮಾಜಿ ಅಧ್ಯಕ್ಷರುಗಳು, ಮಾರ್ಗದರ್ಶಕರು, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಸದಸ್ಯರಾದ ಮಧುಶ್ರೀ ಪ್ರಶಾಂತ್ ಪ್ರಾರ್ಥಿಸಿದರು ಮತ್ತು ನಿರೂಪಿಸಿದರು.
ಸಭಾ ಕಾರ್ಯಕ್ರಮದ ನಂತರ ಅಲ್ಲಿನ ಹಿರಿಯರಿಗೆ ವಿವಿಧ ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಿ, ಅವರೊಂದಿಗೆ ಸದಸ್ಯರೆಲ್ಲರೂ ಸಮಯಕಳೆದರು.
ವೃದ್ಧಾಶ್ರಮದ ಹಿರಿಯರಿಗೆ ಘಟಕದ ವತಿಯಿಂದ ಮಧ್ಯಾಹ್ನದ ಭೋಜನದ ವ್ಯವಸ್ಥೆ ಮಾಡಲಾಗಿತ್ತು.
ನಂತರ ಹಿರಿಯರೆಲ್ಲರ ಆಶೀರ್ವಾದ ಪಡೆಯುವುದರೊಂದಿಗೆ ಕಾರ್ಯಕ್ರಮ ಮುಕ್ತಾಯಗೊಂಡಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!