Yuvavahini

SEP 19, 2025 7.48 AM IST

ಆಟಿದ ಪೊರ್ಲು ಕಾರ್ಯಕ್ರಮ -ಯುವವಾಹಿನಿ( ರಿ.) ಕೂಳೂರು ಘಟಕ

10/08/2025 ಘಟಕದ ವತಿಯಿಂದ ಆಟಿದ ಪೊರ್ಲು ಕಾರ್ಯಕ್ರಮ
ತುಳುನಾಡಿನ ಸಂಪ್ರದಾಯದ ಪ್ರಕಾರ ಭತ್ತ ಕುಟ್ಟುವುದರ ಮೂಲಕ ವಿಶೇಷವಾಗಿ ಆಟಿದ ಪೊರ್ಲು 2025 ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಧನ ಲಕ್ಷ್ಮಿ ಗಟ್ಟಿ .(ಸದಸ್ಯರು ರಾಣಿ ಅಬ್ಬಕ್ಕ ಅಧ್ಯಯನ ಪೀಠ ವಿಶ್ವ ವಿದ್ಯಾನಿಲಯ.ಮಂಗಳ ಗಂಗೋತ್ರಿ) ಆಟಿ ತಿಂಗಳ ವಿಶೇಷ ಆಚರಣೆಗಳ ಬಗ್ಗೆ ಎಳೆ ಎಳೆಯಾಗಿ ವಿವರಿಸಿದರು. ‘ಪರನೀರ್ ನೆಗೆಪೆರೆ ಬಲ್ಲಿ, ಪೊಸ ನೀರ್ ಉರ್ಕರ್ರೆ ಬಲ್ಲಿ’ ಎಂದರೆ ಹಳೇ ನೀರು ಬತ್ತಬಾರದು, ಹೊಸ ನೀರು ಹೆಚ್ಚಾಗಬಾರದು. ಹಿರಿಯರು, ಕಿರಿಯರು ಸಮಾನ ರೀತಿಯಲ್ಲಿ ಮುನ್ನಡೆಯಬೇಕು ಎಂದು ಯುವ ಜನಾಂಗಕ್ಕೆ ಒಳ್ಳೆಯ ಸಂದೇಶ ನೀಡಿದರು.
ಯುವ ಉದ್ಯಮಿ ಜಯಂತ್ ಸುವರ್ಣ ರವರು ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆಟಿ ಅಮಾವಾಸ್ಯೆ ದಿನ ಹಾಲೆ ಮರದ ಕೆತ್ತೆ ತೆಗೆದು ಸುಮಾರು 50 ರಿಂದ 100 ಮನೆಗೆ ಹಂಚುವ ಘಟಕದ ಸದಸ್ಯರಾದ ಚಂದ್ರಹಾಸ ಸುವರ್ಣ ಮತ್ತು ರೋಹಿತ್, ಸುಮಾರು 50 ವರ್ಷದಿಂದ ಕಷಾಯ ಮಾಡಿ 20 ಮನೆಗಳಿಗೆ ಹಂಚಿಕೊಂಡು ಬರುತ್ತಿರುವ ಜಾನಕಿ ಅಮ್ಮ ರವರನ್ನು ಇವರ ಸಾಮಾಜಿಕ ಕಾಳಜಿ, ಸೇವೆಯನ್ನು ಗುರುತಿಸಿ ಅಭಿನಂದಿಸಲಾಯಿತು.
ಧನಲಕ್ಷ್ಮಿ ಗಟ್ಟಿ ರವರನ್ನು ಅವರ ಸಮಾಜ ಸೇವೆ ಗುರುತಿಸಿ ಅಭಿನಂದಿಸಲಾಯಿತು.
ಆಟಿ ಕಳೆಂಜ ಆಗಮನ ಕಾರ್ಯಕ್ರಮದ ಮೆರುಗನ್ನು ಹೆಚ್ಚಿಸಿತು.
ವೇದಿಕೆಯಲ್ಲಿ ಘಟಕದ ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಕಾರ್ಯದರ್ಶಿ ಜಯಲಕ್ಷ್ಮಿ ಹಾಗೂ ಕಾರ್ಯಕ್ರಮದ ಸಂಚಾಲಕರು, ಕುಟುಂಬ ಸಂಪರ್ಕ ನಿರ್ದೇಶಕರು ಆದ ಸುಜಾತ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಘಟಕದ ಮಾಜಿ ಅಧ್ಯಕ್ಷರುಗಳು, ಪದಾಧಿಕಾರಿಗಳು, ನಿರ್ದೇಶಕರು ಹಾಗೂ ಇತರ ಘಟಕದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.
ಅಧ್ಯಕ್ಷರು ಸ್ವಾಗತಿಸಿದರು. ಮಧುಶ್ರೀ ಪ್ರಶಾಂತ್ ನಿರೂಪಿಸಿದರು. ಭವಾನಿ ಶಂಕರ್ ಪ್ರಾರ್ಥಿಸಿದರು. ಕಾರ್ಯಕ್ರಮದ ಸಂಚಾಲಕರು ವಂದಿಸಿದರು.
ಸಭಾ ಕಾರ್ಯಕ್ರಮದ ನಂತರ ಘಟಕದ ಸದಸ್ಯರಿಂದ ದೇವಿ ಪ್ರಸಾದ್ ರವರ ನಿರ್ದೇಶನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಸದಸ್ಯರಿಂದ ಸಂಗೀತ ರಸಮಂಜರಿ ಕಾರ್ಯಕ್ರಮ ನಡೆಯಿತು.
ನಂತರ ಸದಸ್ಯರು ತಯಾರಿಸಿ ತಂದ ಆಟಿ ತಿಂಗಳ ವಿವಿಧ ಖಾದ್ಯಗಳನ್ನು ಬಡಿಸಿ, ಎಲ್ಲರಿಗೂ ಭೋಜನದ ವ್ಯವಸ್ಥೆ ಮಾಡಲಾಗಿತ್ತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!