Yuvavahini

SEP 19, 2025 8.00 AM IST

ಆಟಿದ ನೆಂಪು, ಪ್ರತಿಭಾ ಪುರಸ್ಕಾರ, ವಿದ್ಯಾರ್ಥಿ ವೇತನ ‌ಹಾಗೂ ಸಾಧಕರಿಗೆ ಸನ್ಮಾನ-ಯುವವಾಹಿನಿ (ರಿ) ಬಜಪೆ ಘಟಕ

ಆಟಿ ತಿಂಗಳು ವೈಜ್ಞಾನಿಕವಾಗಿ ಅತೀ ಮಹತ್ವದ ತಿಂಗಳು. ಹಿಂದಿನ ಕಾಲದಲ್ಲಿ ಆಟಿ ಕಳೆಂಜೆ ಊರಿಗೆ ಬರುವ ಮಾರಿ, ಹಾಗೆಯೇ ಜನರಿಗೆ ಬರುವ ಮಹಾಮಾರಿ ರೋಗಗಳನ್ನು ನಿವಾರಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತಿತ್ತು” ಎಂದು ರಾಜ್ಯ ಮಟ್ಟದ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿ ಪುರಸ್ಕೃತ, ಖ್ಯಾತ ವಕೀಲೆ ಶ್ರೀಮತಿ ಶೈಲಜಾ ರಾಜೇಶ್ ತಿಳಿಸಿದರು. ಅವರು
ಘಟಕದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಸಹಯೋಗದೊಂದಿಗೆ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಟಿದ ನೆಂಪು ಕಾರ್ಯಕ್ರಮದಲ್ಲಿ ಮಾತನಾಡಿದರು.

ಕಾರ್ಯಕ್ರಮದ ಉದ್ಘಾಟನೆಯನ್ನು ಹಿರಿಯರಾದ ಶ್ರೀ ಶೀನ ಪೂಜಾರಿ, ಉಪಾಧ್ಯಕ್ಷರು, ಕಾಂತಬಾರೆ-ಬೂದಬಾರೆ ಜನ್ಮ ಕ್ಷೇತ್ರ (ರಿ) ಕೊಲ್ಲೂರು, ಮುಲ್ಕಿ ನೇರವೇರಿಸಿ ಶುಭಹಾರೈಸಿದರು.

ದೀಪ ಬೆಳಗಿಸಿ, ನೆಜಿ ನೇಡುವುದರ ಮೂಲಕ ಕಾರ್ಯಕ್ರಮದ ಉದ್ಘಾಟನೆ ಮಾಡಲಾಯಿತು.

ಮುಖ್ಯ ಅತಿಥಿಗಳಾಗಿ ಶ್ರೀಮತಿ ವಿದ್ಯಾ ರಾಕೇಶ್, ದ್ವಿತೀಯ ಉಪಾಧ್ಯಕ್ಷರು, ಯುವವಾಹಿನಿ (ರಿ) ಕೇಂದ್ರ ಸಮಿತಿ,, ಶ್ರೀ ಶಿವರಾಮ್ ಪೂಜಾರಿ, ಅಧ್ಯಕ್ಷರು, ಬ್ರಹ್ಮ ಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ (ರಿ) ಬಜಪೆ – ಕರಂಬಾರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೆಯೇ ವಿದ್ಯಾರ್ಥಿ ವೇತನ ನೀಡಿ ಗೌರವಿಸಲಾಯಿತು. ಇದನ್ನು ವಿಧ್ಯಾ ನಿಧಿ ಸಂಚಾಲಕರಾದ ಶ್ರೀಮತಿ ಪೂಜಾ ಕಿರಣ್ ನಡೆಸಿಕೊಟ್ಟರು.
ಈ ಕಾರ್ಯಕ್ರಮದ ಪ್ರಾಯೋಜಕತ್ವ ನೀಡಿ ಸಹಕರಿಸಿದ ಶ್ರೀ ಸುಕುಮಾರ್ ಬಿ ಸಾಲ್ಯಾನ್ ಮತ್ತು ಶ್ರೀಮತಿ ಯಶೋಧಾ ಎಸ್ ಸಾಲ್ಯಾನ್, ದೇಜಮ್ಮ, ಸ್ವಾಮಿಲಪದವು, ಬಜಪೆ ಮತ್ತು
ಸರಿತಾ ಚಾರಿಟೇಬಲ್ ಟ್ರಸ್ಟ್ (ರಿ), ಕೊಳಂಬೆ, ಬಜಪೆಯ ಅಧ್ಯಕ್ಷರಾದ ಶ್ರೀ ವಿನೋಧರ ಪೂಜಾರಿ ಮತ್ತು ಶ್ರೀಮತಿ ಸುಮಿತ ವಿನೋಧರ ಪೂಜಾರಿಯವರನ್ನು ಗೌರವಿಸಲಾಯಿತು

ಶ್ರೀ ಭೋಜ ಬಂಗೇರ – ಮೆಸ್ಕಾಂ ಉದ್ಯೋಗಿ, ಶ್ರೀ ಸುಜನ್ ಪೂಜಾರಿ – ಕ್ರೀಡೆ, ಶ್ರೀ ಸುಜಯ್ ಪೂಜಾರಿ – ಕ್ರೀಡೆ ಇವರಿಗೆ ಗೌರವಪೂರ್ವಕ ಅಭಿಮಾನದಿಂದ ಸನ್ಮಾನಿಸಲಾಯಿತು.

ಸನ್ಮಾನ ಪತ್ರವನ್ನು ಶ್ರೀಮತಿ ಉಷಾ ಸುವರ್ಣ, ಕುಮಾರಿ ಪ್ರಗತಿ, ಕುಮಾರಿ ಸಾನ್ವಿ ವಾಚಿಸಿದರು.

ಘಟಕ ಈ ಸಾಲಿನಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಆಯೋಜಿಸಿದ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನನಾ ಡೆನ್ನನಾ-2025 ರಲ್ಲಿ ಪಂಚಮ ಸ್ಥಾನ ಪಡೆಯುವಲ್ಲಿ ಕಥಾವಸ್ತು ಮತ್ತು ನಿರ್ದೇಶನ ನೀಡಿ ಸಹಕರಿಸಿದ ಶ್ರೀ ಗಣೇಶ್ ಪ್ರಸಾದ್, ಶ್ರೀ ರಾಮ್ ದಾಸ್ ಇವರಿಗೆ ಗೌರವ ಸಲ್ಲಿಸಲಾಯಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!