Yuvavahini

SEP 19, 2025 8.40 AM IST

23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ -ಯುವವಾಹಿನಿ( ರಿ.) ಮುಲ್ಕಿ ಘಟಕ

ತಾರೀಕು27/07/2025 ರಂದು 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮ

ಆಧುನಿಕ ಯುಗದ ಪಿಜ್ಜಾ ಬರ್ಗರ್ ತಿಂಡಿಗಳನ್ನು ಬದಿಗೆ ಸರಿಸಿ ಹಿಂದಿನ ಕಾಲದ ತಿಂಡಿ ತಿನಿಸುಗಳ ಬಗ್ಗೆ ಮಾಹಿತಿ ನೀಡುವುದರ ಜೊತೆಗೆ ಹಿಂದಿನ ಕಾಲದಲ್ಲಿ ಹಿರಿಯರು ಕೃಷಿ ಕಾರ್ಯದಲ್ಲಿ ಪಟ್ಟ ಶ್ರಮ ವನ್ನೂ ತಿಳಿ ಹೇಳುವ ಕಾರ್ಯವಾಗಬೇಕು ಎಂದು ಪುತ್ತೂರು ಅಕ್ಷಯ ಕಾಲೇಜಿನ ಮುಖ್ಯಸ್ಥ ಜಯಂತ್ ನಡುಬೈಲು ಹೇಳಿದರು.

ಮುಲ್ಕಿ ಬಿಲ್ಲವ ಸಂಘದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಡೆದ ಮುಲ್ಕಿ ಯುವವಾಹಿನಿ 23 ನೇ ವರ್ಷದ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಅಕ್ಕಿ ಮುಡಿಯಿಂದ ಸಾಂಪ್ರದಾಯಿಕ ಸಾಧನದ ಮೂಲಕ ಅಕ್ಕಿಯನ್ನು ಹೊರ ತೆಗೆದು ತಡಪೆಗೆ ಹಾಕಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಜಾನಪದ ಕಲ್ಪಾರ್ಥಿ ದಿನೇಶ್ ಸುವರ್ಣ ರಾಯಿ ಆಷಾಡ ಮಾಸದ ತಿಂಗಳ ಮಹತ್ವದ ಬಗ್ಗೆ ಆಟಿದ ಮದಿಪು ನೀಡಿದರು.

ಅಖಿಲ ಭಾರತ ಬಿಲ್ಲವರ ಯೂನಿಯನ್ ನ್ ಅಧ್ಯಕ್ಷ ನವೀನ್ ಚಂದ್ರ ಡಿ. ಸುವರ್ಣರನ್ನು ಸಾಧಕರ ನೆಲೆಯಲ್ಲಿ ಆಟಿದತಮ್ಮನ ನೀಡಿ ಗೌರವಿಸಲಾಯಿತು.

ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಲೋಕೇಶ್ ಕೋಟ್ಯಾನ್, ತರವಾಡು ಚಲನಚಿತ್ರ ನಟ ,ನಿರ್ಮಾಪಕ ಶೋಧನ್ ಶೆಟ್ಟಿ, ಮುಲ್ಕಿ ಬಿಲ್ಲವ ಸಂಘದ ಅಧ್ಯಕ್ಷ ವಾಮನ್ ಕೋಟ್ಯಾನ್ ನಡಿಕುದ್ರು ಅತಿಥಿಗಳಾಗಿ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷ ವಿನಯಕುಮಾರ್ ಮಟ್ಟು ವಹಿಸಿದ್ದರು. ಘಟಕದ ಕಾರ್ಯದರ್ಶಿ ಪ್ರೇರಣಾ, ಕಾರ್ಯಕ್ರಮ ನಿರ್ದೇಶಕಿ ಶಕೀಲಾ ಹರಿಂದ್ರ ಸುವರ್ಣ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಘಟಕದ ಮಾಜಿ ಅಧ್ಯಕ್ಷ ಜಯ ಕುಮಾರ್ ಕುಬೇರ್ ಹಿಂದಿನ ದೂರದರ್ಶನ ದ ವಾರ್ತಾ ಪ್ರಸಾರ ವಾಚನದ ರೀತಿಯಲ್ಲಿ ಪ್ರಸ್ತಾವನೆಯನ್ನು ಮಾಡಿದರು.

ಬೆಳಿಗ್ಗೆ ಎಲ್ಲರಿಗೂ ಅರೆಪುದಡ್ಡೆ ಚಾ ಕಾಫಿ , ಕಾರ್ಯಕ್ರಮದ ನಡು ನಡುವೆ ಕಡ್ಲೆ ಹಪ್ಪಳ , ಮಧ್ಯಾಹ್ನ ಆಟಿದ ಅಟಿಲ್, ವಿವಿಧ ಬಗೆಯ ತಿನಿಸುಗಳನ್ನು ಸೇರಿದವರು ಸವಿದರು.

ಘಟಕಾಧ್ಯಕ್ಷ ವಿನಯ್ ಕುಮಾರ್ ಮಟ್ಟು ಸ್ವಾಗತಿಸಿದರು, ಕಾರ್ಯದರ್ಶಿ ಪ್ರೇರಣಾ ಧನ್ಯವಾದ ಸಲ್ಲಿಸಿದರು. ಮಾಜಿ ಅಧ್ಯಕ್ಷ ನರೇಂದ್ರ ಕೆರೆಕಾಡ್ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!