Yuvavahini

OCT 21, 2025 3.33 PM IST

2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ -ಯುವವಾಹಿನಿ (ರಿ.) ಹೆಜಮಾಡಿ ಘಟಕ

2025-26ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಆಗಸ್ಟ್ 10, 2025ರಂದು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು.

ಕಾರ್ಯಕ್ರಮವು ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾರ್ಯದರ್ಶಿ ಪ್ರಥಮೇಶ್ ರವರು ಎಲ್ಲರನ್ನು ಸ್ವಾಗತಿಸಿದರು.

ಕಾರ್ಯಕ್ರಮವನ್ನು ಹೆಜಮಾಡಿ ಬಿಲ್ಲವರ ಸಂಘದ ಅಧ್ಯಕ್ಷರಾದ ಶ್ರೀ ಮೋಹನ್ ದಾಸ್ ಹೆಜಮಾಡಿ ಉದ್ಘಾಟಿಸಿ, ನೂತನ ತಂಡಕ್ಕೆ ಶುಭಾಶಯಗಳನ್ನು ಕೋರಿದರು.ಪ್ರಬೋಧ್ ಚಂದ್ರ ಹೆಜಮಾಡಿ ಪ್ರಸ್ತಾಪಿಸಿದರು.ಜೊತೆ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ಗತ ಸಾಲಿನ ಕಾರ್ಯ ಚಟುವಟಿಕೆಗಳ ವರದಿ ಮಂಡಿಸಿದರು.ಈ ಸಮಾರಂಭದಲ್ಲಿ ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಉಪಸ್ಥಿತರಿದ್ದು, ನೂತನ ಪದಾಧಿಕಾರಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಿ ತಂಡಕ್ಕೆ ಶುಭ ಹಾರೈಸಿದರು.
* ಹೊಸದಾಗಿ ಘಟಕದ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿಶಾಂಕ್ ಎಸ್. ಕೋಟ್ಯಾನ್ ಅವರು ಮಾತನಾಡಿ, “ಘಟಕದೊಂದಿಗೆ ಇನ್ನಷ್ಟು ಕಲ್ಯಾಣಕಾರಿ ಯೋಜನೆಗಳನ್ನು ಕಾರ್ಯರೂಪಕ್ಕೆ ತರುವುದರ ಜೊತೆಗೆ, ಎಲ್ಲರ ಸಹಕಾರ ನಮ್ಮ ತಂಡಕ್ಕೆ ಇರಲಿ,” ಎಂದು ಅಭಿಪ್ರಾಯಪಟ್ಟರು.

* ಪದಗ್ರಹಣ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿದ್ದ ನಿರ್ಗಮನ ಘಟಕಾಧ್ಯಕ್ಷೆ ಶ್ರೀಮತಿ ದೀಪ ದಿನೇಶ್ ಅವರು ಮಾತನಾಡಿ ತಮ್ಮ ಸೇವಾ ಅವಧಿಯಲ್ಲಿ ಬೆಂಬಲ ನೀಡಿದ ಎಲ್ಲರಿಗೂ ಧನ್ಯವಾದಗಳನ್ನು ಸಲ್ಲಿಸಿದರು.

* ಕಾರ್ಯಕ್ರಮದ ಅಂಗವಾಗಿ SSLC ಹಾಗೂ PUC ಪರೀಕ್ಷೆಯಲ್ಲಿ ಶೇ.95 ಕ್ಕಿಂತ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಜೊತೆಗೆ 1 ರಿಂದ 10ನೇ ತರಗತಿವರೆಗಿನ 50 ವಿದ್ಯಾರ್ಥಿಗಳಿಗೆ ಟಿಫಿನ್ ಬಾಕ್ಸ್ಗಳನ್ನು ವಿತರಿಸಲಾಯಿತು.ನಮ್ಮೂರಿನ ಪಿ. ಎಚ್. ಡಿ(PHD) ಪದವೀಧರರಾದ ಡಾ|ಗಂಗೋತ್ರಿ ಸನಿಲ್ ರವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು.

* ಮುಖ್ಯ ಅತಿಥಿಗಳಾಗಿ ಶ್ರೀ ವೈ. ಸುಕುಮಾರ್, ಶ್ರೀ ರವಿ ಪೂಜಾರಿ ಚಿಲಿಂಬಿ ಹಾಗೂ ಶ್ರೀ ಲೋಹಿತ್ ರೆಂಜಾಳ ಸುಳ್ಯ ವೇದಿಕೆಯಲ್ಲಿ ಉಪಸ್ಥಿತರಿದ್ದರು. ನೂತನ ಕಾರ್ಯದರ್ಶಿ ಕು. ಪ್ರಾಪ್ತಿ ಆರ್ ಸುವರ್ಣ ರವರು ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!