Yuvavahini

OCT 21, 2025 3.40 PM IST

ಮಾಧವ ಕೀರ್ತನೋತ್ಸವ-ಯುವವಾಹಿನಿ (ರಿ) ಪಣಂಬೂರು-ಕುಳಾಯಿ ಘಟಕ

ಹಿರಿಯ ಭಜಕರಾದ ಶ್ರೀ ಮಾಧವ ಅಂಚನ್ ರವರ ಸಹಕಾರದಲ್ಲಿ ನಾಲ್ಕನೇ ವರುಷದ ”

“ಮಾಧವ ಕೀರ್ತನೋತ್ಸವ”

ಕಾರ್ಯಕ್ರಮವು ತಾ:14-09-2025 ರಂದು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಕುಳಾಯಿ ಇದರ ಸಭಾಂಗಣದಲ್ಲಿ ನಡೆಯಿತು.
ಮದ್ಯಾಹ್ನ ಘಟಕದ ಅಧ್ಯಕ್ಷರಾದ ಧನಿಶ್ ಕುಳಾಯಿ, ಹಿರಿಯರಾದ ಮಾಧವ ಅಂಚನ್, ಸಂಚಾಲಕರದ ಹರೀಶ್ ಪೂಜಾರಿ ಮತ್ತು ಮಾಜಿ ಅಧ್ಯಕ್ಷರೆಲ್ಲರ ಉಪಸ್ಥಿತಿಯಲ್ಲಿ ಕಾರ್ಯಕ್ರಮವನ್ನ ದೀಪ ಬೆಳಗಿಸಿ ಉದ್ಘಾಟಿಸಿದರು.
ಭಜನೆ ಸಂಕೀರ್ತನೆ ಕಾರ್ಯಕ್ರಮದಲ್ಲಿ ಮೊದಲಿಗೆ ಪಣಂಬೂರು ಕುಳಾಯಿ ತಂಡದಿಂದ ಪ್ರಾರಂಭವಾಗಿ ನಂತರ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘ ಸಂಘ ಇಡ್ಯಾ, ಕಾಟಿಪಳ್ಳ, ಮೂಲ್ಕಿ, ಕೂಳೂರು ಮತ್ತು ಕುಳಾಯಿ ತಂಡದಿಂದ ಭಜನೆ ಸಂಕೇರ್ತನೆ ಕಾರ್ಯಕ್ರಮ ನಡೆಯಿತು.ಪಣಂಬೂರು ಕುಳಾಯಿ ತಂಡದಿಂದ ಕುಣಿತ ಭಜನೆಯ ಹಾಗೂ ಗುರು ಪೂಜೆಯ ಮೂಲಕ ಕಾರ್ಯಕ್ರಮವನ್ನ ಮಂಗಳಗೊಳಿಸಲಾಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನ ಘಟಕದ ಅಧ್ಯಕ್ಷರಾದ ಶ್ರೀ ಧನಿಶ್ ಕುಳಾಯಿ ವಹಿಸಿದ್ದರು ಮುಖ್ಯ ಅತಿಥಿಯಾಗಿ ಶ್ರೀ ಲೋಕೇಶ್ ಕೋಟ್ಯಾನ್, ಅಧ್ಯಕ್ಷರು ಯುವವಾಹಿನಿ(ರಿ)ಕೇಂದ್ರ ಸಮಿತಿ ಭಾಗವಹಿಸಿದರು, ಗೌರವ ಉಪಸ್ಥಿತಿಯಾಗಿ ಘಟಕದ ಸ್ಥಾಪಕ ಅಧ್ಯಕ್ಷರು ಹಾಗೂ ಕೇಂದ್ರ ಸಮಿತಿಯ. ಮಾಜಿ ಅಧ್ಯಕ್ಷರಾದ ಶ್ರೀ ವಿಶ್ವನಾಥ್. ಕೆ. ಭಾಗವಹಿಸಿದರು, ವೇದಿಕೆಯಲ್ಲಿ ಹಿರಿಯರಾದ ಮಾಧವ ಅಂಚನ್, ಕಾರ್ಯದರ್ಶಿ ಮನೋಜ್ ಕುಮಾರ್, ಸಂಚಾಲಕರಾದ ಹರೀಶ್ ಪೂಜಾರಿ ಹಾಗೂ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕರಾದ ಪ್ರಜ್ವಲ್ ಪಾಲುಗೊಂಡರು. ಸಂಚಾಲಕರಾದ ಹರೀಶ್ ಪೂಜಾರಿಯವರು ಸ್ವಾಗತಿಸಿದರು, ಮಾಜಿ ಅಧ್ಯಕ್ಷರಾದ ಸುರೇಶ ಪೂಜಾರಿಯವರು ಪ್ರಾಸ್ತವಿಸಿದರು,ಕೇಂದ್ರದ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಅವರು ಪಣಂಬೂರು ಕುಳಾಯಿ ಘಟಕದ ಸಮಾಜ ಮುಖಿ ಕಾರ್ಯಕ್ರಮದ ಬಗ್ಗೆ ಮಾತನಾಡಿ ಮೆಚ್ಚುಗೆ ವ್ಯಕ್ತಪಡಿಸಿದರು.
2025ರ ಮಾಧವ ಕೀರ್ತನೋತ್ಸವ ಪ್ರಶಸ್ತಿಯನ್ನ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರು, ಹಿರಿಯ ಭಜಕರು, ತಬಲಾ ಹರ್ಮೋನಿಯಂ ಹಾಗೂ ಗುರುಗಳಾದ ಶ್ರೀ ಸದಾನಂದ. ಬಿ. ಎಸ್, ಹೊಸಬೆಟ್ಟು ಅವರಿಗೆ ನೀಡಿ ಗೌರವಿಸಲಾಯಿತು. ಕಾರ್ಯದರ್ಶಿ ಮನೋಜ್ ಅವರು ಧನ್ಯವಾದ ನೀಡಿದರು. ಕಾರ್ಯಕ್ರಮವನ್ನು ರೇಖಾ ಅಂಚನ್ ಹಾಗೂ ಸಂಜೀವ ಪೂಜಾರಿ ಅವರು ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!