Yuvavahini

OCT 21, 2025 3.48 PM IST

ಯುವ ಆರೋಗ್ಯ” ಕಾರ್ಯಕ್ರಮ-ಯುವವಾಹಿನಿ (ರಿ.) ಬೆಂಗಳೂರು ಘಟಕ

ದಿನಾಂಕ: 15 ಸೆಪ್ಟೆಂಬರ್ 2025, ಭಾನುವಾರ ಮಧ್ಯಾಹ್ನ
ಸ್ಥಳ: ಪ್ರಾದೇಶಿಕ ಸಹಕಾರ ನಿರ್ವಹಣಾ ಸಂಸ್ಥೆ, ಪದ್ಮನಾಭನಗರ

ಕಾರ್ಯಕ್ರಮವು ಸದಸ್ಯರಿಗಾಗಿ ಫಿಟ್ನೆಸ್ ಆಟಗಳು (ಫ್ಲ್ಯಾಂಕ್ ಚಾಲೆಂಜ್ ಮುಂತಾದವು)ಗಳಿಂದ ಪ್ರಾರಂಭವಾಯಿತು. ಬಳಿಕ, ಸ್ಪರ್ಶ್ ಆಸ್ಪತ್ರೆಯ ಪ್ರಸಿದ್ಧ ಹೃದ್ರೋಗ ತಜ್ಞರಾದ ಡಾ. ಬಸವರಾಜ್ ಹಗರಗಿ ಅವರು ಹೃದಯದ ಆರೋಗ್ಯ ಕುರಿತಾದ ಪ್ರೇರಣಾದಾಯಕ ಹಾಗೂ ಜ್ಞಾನಮಯ ಉಪನ್ಯಾಸವನ್ನು ನೀಡಿದರು.

ಡಾ ಬಸವರಾಜ್ ಹಗರಗಿಯವರ ಕೆಲವು ಮುಖ್ಯ ಸಂದೇಶಗಳು* :
1. ಹೃದಯವು ನಮ್ಮ ದೇಹದ ಎಂಜಿನ್‌ನಂತೆ ಕಾರ್ಯನಿರ್ವಹಿಸುತ್ತದೆ.
2. ಕೊಲೆಸ್ಟ್ರಾಲ್ ಜಮಾವಣೆಯಿಂದ ಹೃದಯದಲ್ಲಿ ಬ್ಲಾಕ್‌ಗಳು ಉಂಟಾಗುತ್ತವೆ.
3. ಹೃದಯಾಘಾತವು ಕೇವಲ ವಯೋವೃದ್ಧರಿಗೆ ಮಾತ್ರವಲ್ಲ, ಯುವಕರಿಗೂ ಸಂಭವಿಸುತ್ತದೆ. ಆದ್ದರಿಂದ ಲಕ್ಷಣಗಳು ಕಾಣಿಸಿಕೊಳ್ಳುವ ಮುನ್ನವೇ ಕಾಳಜಿಯನ್ನು ವಹಿಸಬೇಕು.
4. ಧೂಮಪಾನ, ಮದ್ಯಪಾನ ಹಾಗೂ ಪ್ಯಾಸಿವ್ ಸ್ಮೋಕಿಂಗ್ ಕೂಡ ಹೃದಯಾಘಾತಕ್ಕೆ ಕಾರಣವಾಗುತ್ತವೆ.
5. ಪ್ರತಿಯೊಂದು ಊಟದಲ್ಲೂ ಕನಿಷ್ಠ 50% ಹಣ್ಣು-ತರಕಾರಿಗಳನ್ನು ಸೇರಿಸಿಕೊಳ್ಳುವುದು, ಸಾಕಷ್ಟು ವ್ಯಾಯಾಮ ಅತ್ಯಗತ್ಯ.
6. ಹೊರಗಿನ ಆಹಾರ, ವಿಶೇಷವಾಗಿ ಜಂಕ್ ಫುಡ್ ಹಾಗೂ ಕೆಟ್ಟ ಎಣ್ಣೆಯಲ್ಲಿ ತಯಾರಾಗುವ ಆಹಾರವನ್ನು ತಪ್ಪಿಸಿಕೊಳ್ಳಬೇಕು.

ಸದಸ್ಯರು ಕೇಳಿದ ಪ್ರಶ್ನೆಗಳಿಗೆ ಡಾ. ಬಸವರಾಜ್ ಸಮರ್ಪಕ ಉತ್ತರ ನೀಡಿದರು. ಬಳಿಕ ಅವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಇದೇ ಸಂದರ್ಭದಲ್ಲಿ ಸ್ಪರ್ಶ್ ಆಸ್ಪತ್ರೆ ಮತ್ತು ಯುವವಾಹಿನಿಯ ಸಂಯುಕ್ತ ಆಶಯದಲ್ಲಿ ಕುಟುಂಬ ಆರೋಗ್ಯ ಕಾರ್ಡ್ ಬಿಡುಗಡೆ ಮಾಡಲಾಯಿತು. ಸ್ಪರ್ಶ್ ಆಸ್ಪತ್ರೆಯ ಸಿಬ್ಬಂದಿ ಶ್ರೀಅಕ್ಷಯ್ ಅವರು ಈ ಕಾರ್ಡ್‌ನ ಲಾಭಗಳ ಬಗ್ಗೆ ವಿವರಿಸಿದರು. ಇದು ಯುವವಾಹಿನಿಯ 350ಕ್ಕೂ ಹೆಚ್ಚು ಸದಸ್ಯರಿಗೆ ಬಹಳ ಉಪಯುಕ್ತವಾಗಿದೆ.

ಮಾಸಿಕ ಸಭೆ
ಸಭೆಯನ್ನು ಶ್ರೀ ಜಯಂತ್ ಸಾಲ್ಯಾನ್ ಅವರ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು.

ಆರೋಗ್ಯ ನಿರ್ದೇಶಕಿ ಶ್ರೀಮತಿ ಅನಿತಾ ಕಮಲಾಕ್ಷ ಅವರು ಸ್ವಾಗತ ನೀಡಿ, ಯುವ ಆರೋಗ್ಯ ಕಾರ್ಯಕ್ರಮದ ಮಹತ್ವವನ್ನು ವಿವರಿಸಿದರು.

ಕಾರ್ಯದರ್ಶಿ ಶ್ರೀ ಸಂತೋಷ್ ಪಣಪಿಲ ಅವರು ಹಿಂದಿನ ತಿಂಗಳ ವರದಿಯನ್ನು ವಾಚಿಸಿದರು.

ಅಧ್ಯಕ್ಷರಾದ ಶ್ರೀ ಶಶಿಧರ್ ಕೋಟ್ಯಾನ್ ಅವರು ಖಜಾಂಚಿಯ ಅನುಪಸ್ಥಿತಿಯಲ್ಲಿ ಹಣಕಾಸು ಲೆಕ್ಕ ಪತ್ರವನ್ನು ಮಂಡಿಸಿದರು.

ಸದಸ್ಯರು ಕಾರ್ಯಕ್ರಮದ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಗೌರವ ಸಲಹೆಗಾರರಾದ ಶ್ರೀಸುಧೀರ್ ಪೂಜಾರಿ ಅವರು ಯುವ ಆರೋಗ್ಯ ಕಾರ್ಯಕ್ರಮವು ಅತ್ಯುತ್ತಮ ಹೆಜ್ಜೆ ಮತ್ತು ಇನ್ನಷ್ಟು ಇಂತಹ ಉಪಯುಕ್ತ ಕಾರ್ಯಕ್ರಮಗಳು ನಡೆಯಬೇಕೆಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಅಧ್ಯಕ್ಷರಾದ ಶ್ರೀ ಶಶಿಧರ ಕೋಟ್ಯಾನ್ ಅವರು ಬೆಂಗಳೂರಿನಲ್ಲಿ ಯುವವಾಹಿನಿಯನ್ನು ಇನ್ನಷ್ಟು ಬಲಪಡಿಸುವ ಕುರಿತು ತಮ್ಮ ಅಭಿಪ್ರಾಯ ಹಂಚಿಕೊಂಡು, ಮುಂಬರುವ ರಾಜ್ಯಮಟ್ಟದ ಯುವ ವೈಭವ ಕಾರ್ಯಕ್ರಮವನ್ನು ಉತ್ತಮವಾಗಿ ಬಳಸಿಕೊಳ್ಳಬೇಕೆಂದು ಕರೆ ನೀಡಿದರು.

ಶ್ರೀ ಸುಧೀರ್ ಪೆರಾಡಿ ಅವರು ಯುವ ವೈಭವದ ಪ್ರಮುಖ ಅಂಶಗಳನ್ನು ವಿವರಿಸಿದರು.

ಆರೋಗ್ಯ ನಿರ್ದೇಶಕ ಶ್ರೀಹರೀಶ್ ಅವರು ಮಾತನಾಡಿ, ಆರೋಗ್ಯ ಕಾರ್ಡ್‌ಗಳನ್ನು ವಿತರಿಸಿದರು.

ಶ್ರೀ ದಿನೇಶ್ ಎಂ. ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಕಾರ್ಯಕ್ರಮವು ರಾಷ್ಟ್ರಗೀತೆಯೊಂದಿಗೆ ಅಂತ್ಯಗೊಂಡಿತು.
ಶ್ರೀಮತಿ ಮಧುಮತಿ ಕಾರ್ಯಕ್ರಮವನ್ನು ನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!