ಘಟಕ ಮತ್ತು ಮೂರ್ತೆದಾರರ ಸೇವಾ ಸಹಕಾರಿ ಸಂಘದ ವತಿಯಿಂದ ಪದವಿ ವ್ಯಾಸಂಗ ಮಾಡಿ ಬ್ಯಾಂಕಿಂಗ್ ಉದ್ಯೋಗದ ಆಸಕ್ತಿ ಇರುವ ಆಕಾಂಕ್ಷಿಗಳಿಗಾಗಿ ದಿನಾಂಕ 13.09.2025ರಂದು ಮಾಹಿತಿ ಕಾರ್ಯಕ್ರಮ ನಡೆಸಲಾಯಿತು.
ಉಪ್ಪಿನಂಗಡಿ ಸಹಸ್ರ ಕೋಚಿಂಗ್ ಸೆಂಟರ್ ನಲ್ಲಿ ನಡೆದ ಮಾಹಿತಿ ಕಾರ್ಯಕ್ರಮದಲ್ಲಿ ಮಂಗಳೂರಿನ ಸರ್ವಜ್ಞ IAS ಅಕಾಡೆಮಿಯ ಸುರೇಶ್ ಎಂ ಎಸ್ ರವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ್ಪಿನಂಗಡಿ ಮೂರ್ತೆದಾರರ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಅಜಿತ್ ಕುಮಾರ್ ಪಾಲೇರಿ ವಹಿಸಿದ್ದರು. ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು , ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡೀಕಯ್ಯ ಗೌಂಡತ್ತಿಗೆ ಉಪಸ್ಥಿತರಿದ್ದರು.


