Yuvavahini

OCT 22, 2025 3.06 PM IST

ಕಾರ್ಗಿಲ್ ವಿಜಯ ದಿವಸ -ಯುವವಾಹಿನಿ(ರಿ.)ಮಂಗಳೂರು ಘಟಕ

ದಿನಾಂಕ 29-07-2025: ಕಷ್ಟಕರವಾದ ಭಾರತದ ಗಡಿ ಪ್ರದೇಶದಲ್ಲಿ ಹಗಲು ರಾತ್ರಿ ಎನ್ನದೇ ಬಿಸಿಲು, ಮಳೆ, ಕೊರೆಯುವ ಚಳಿಯ ನಡುವೆಯೂ ಭಾರತೀಯರಿಗೆ ರಕ್ಷಣೆ ನೀಡುತ್ತಿರುವ ನಮ್ಮ ಸೈನಿಕರ ಸಾಮರ್ಥ್ಯ ನಿಜವಾಗಿಯೂ ಹೆಮ್ಮೆಯ ವಿಷಯ ಎಂದು ಯುವವಾಹಿನಿ (ರಿ.) ಕೇಂದ್ರ ಸಮಿತಿಯ ದ್ವಿತೀಯ ಉಪಾಧ್ಯಕ್ಷರಾದ ವಿದ್ಯಾ ರಾಕೇಶ್ ಹೇಳಿದರು.
ಅವರು ಘಟಕದಲ್ಲಿ ನಡೆದಂತಹ ಕಾರ್ಗಿಲ್ ವಿಜಯ ದಿವಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ತಮ್ಮ ಮಕ್ಕಳು ಡಾಕ್ಟರ್, ಇಂಜಿನಿಯರ್ ಆಗಬೇಕೆಂದು ಹೆಚ್ಚಿನ ಹೆತ್ತವರು ಬಯಸುತ್ತಾರೆ. ಆದರೆ ತನ್ನ ಮಗ ಸೈನ್ಯಕ್ಕೆ ಸೇರಿ ದೇಶ ಸೇವೆ ಮಾಡಲಿ ಎಂದು ಪ್ರೋತ್ಸಾಹಿಸಿದ ಹೆತ್ತವರಿಗೆ ನಿಜವಾಗಿಯೂ ಕೃತಜ್ಞತೆ ಸಲ್ಲಿಸಬೇಕಾಗಿದೆ ಎಂದರು.

ಅತಿಥಿಗಳಾಗಿದ್ದ ನಿವೃತ್ತ ಯೋಧರಾದ ಜನಾರ್ದನ್ ಕರ್ಕೇರ ಮಾತನಾಡಿ ತನ್ನ ಕುಟುಂಬದಿಂದ ದೂರ ಬಂದು ಕಷ್ಟಕರವಾದ ವಾತಾವರಣದಲ್ಲಿ ದೇಶದ ರಕ್ಷಣೆಯಲ್ಲಿ ತೊಡಗಿರುವ ಸೈನಿಕರ ಆರೋಗ್ಯ ಉತ್ತಮವಾಗಿರಲಿ ಎಂದು ಪ್ರತಿಯೊಬ್ಬ ಭಾರತೀಯನು ದೇವರಲ್ಲಿ ಪ್ರಾರ್ಥಿಸಬೇಕೆಂದರು.
ಇನ್ನೋರ್ವ ಅತಿಥಿ ನಿವೃತ್ತ ಯೋಧ ಪ್ರಶಾಂತ್ ಶೆಟ್ಟಿಗಾರ್ ಗೋಳಿಜೋರ ಯಾವುದೇ ದೇಶವು ಯುದ್ಧವನ್ನು ಬಯಸುವುದಿಲ್ಲ ಆದರೆ ಕೆಲವೊಂದು ದೇಶದೊಳಗಿನ ಆಂತರಿಕ ವಿಷಯಗಳು ಯುದ್ಧಕ್ಕೆ ಕಾರಣವಾಗುತ್ತದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಘಟಕದ ಅಧ್ಯಕ್ಷರಾದ ಅಶೋಕ್ ಅಂಚನ್ ಕೋಡಿಕಲ್ ಮಾತನಾಡಿ ಸೇನೆಯಲ್ಲಿ ಸೇವೆ ಮಾಡಲು ಅವಕಾಶ ದೊರಕದಿದ್ದರೂ ಇಂದು ದೇಶ ಸೇವೆ ಮಾಡಿದಂತಹ ಯೋಧರ ಜೊತೆ ವೇದಿಕೆ ಹಂಚಿಕೊಂಡದ್ದು ಹರ್ಷ ತಂದಿದೆ ಎಂದರು.

ಈ ಸಂದರ್ಭದಲ್ಲಿ ನಿವೃತ್ತ ಯೋಧರಾದ ಜನಾರ್ದನ್ ಕರ್ಕೇರ ಹಾಗೂ ಪ್ರಶಾಂತ್ ಶೆಟ್ಟಿಗಾರ್ ಗೋಳಿಜೋರ ಇವರನ್ನು ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಘಟಕದ ವತಿಯಿಂದ ಸನ್ಮಾನಿಸಲಾಯಿತು.

ಘಟಕದ ಮಾಜಿ ಅಧ್ಯಕ್ಷರು,ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು. ಸಮಾಜ ಸೇವಾ ನಿರ್ದೇಶಕರಾದ ಉಷಾರವರು ಸ್ವಾಗತಿಸಿದರು. ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ನಿಕಟ ಪೂರ್ವ ಅಧ್ಯಕ್ಷರಾದ ನಾಗೇಶ್ ಅಮೀನ್ ಮುಲ್ಲಾಕಾಡ್ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!