Yuvavahini

OCT 22, 2025 3.27 PM IST

ಆಟಿಡೊಂಜಿ ದಿನ -ಯುವವಾಹಿನಿ(ರಿ.) ಶಕ್ತಿನಗರ ಘಟಕ

ದಿನಾಂಕ 27/07/2025 ರಂದು ಘಟಕ ಹಾಗೂ ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಸಹಭಾಗಿತ್ವದಲ್ಲಿ

ಕಾರ್ಯಕ್ರಮ ನಡೆಯಿತು, ಬ್ರಹ್ಮಶ್ರೀ ನಾರಾಯಣ ಗುರುಗಳಿಗೆ ಗುರುಪೂಜೆ ಸಲ್ಲಿಸಿ ಕಾರ್ಯಕ್ರಮವನ್ನು ಆರಂಭಿಸಲಾಯಿತು. ಮೊದಲಿಗೆ ಘಟಕದ ಸದಸ್ಯರು ಹಾಗೂ ಊರ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು ಸಾಂಸ್ಕೃತಿಕ ಕಾರ್ಯಕ್ರಮದ ನಂತರ ಸಭಾ ಕಾರ್ಯಕ್ರಮವನ್ನು ನಡೆಸಲಾಯಿತು. ಈ ಕಾರ್ಯಕ್ರಮದಲ್ಲಿ ಉದ್ಘಾಟಕರಾಗಿ ಸಂತ ಅಲೋಶಿಯಸ್ ಸ್ನಾತಕೋತರ ವಿಭಾಗದಲ್ಲಿ ಮುಖ್ಯಸ್ಥರಾದ ಪ್ರೊ|ಡಾ| ರಾಕೇಶ್ ಕುಮಾರ್ ಹಾಗೂ ಸಾಹಿತಿಕಾರರು ಮತ್ತು ಸಂತ ಅಲೋಶಿಯಸ್ ಪಿಯು ಕಾಲೇಜಿನ ಉಪನ್ಯಾಸಕರಾದ ಶ್ರೀ ಮೋಹನ್ ರಾಜ್ ಆಗಮಿಸಿದ್ದರು. ಸಭಾ ಕಾರ್ಯಕ್ರಮವನ್ನು ಪ್ರಾರ್ಥನೆಯೊಂದಿಗೆ ಆರಂಭಿಸಿ ದೀಪವನ್ನು ಬೆಳಗುವುದರ ಮೂಲಕ ಉದ್ಘಾಟಿಸಲಾಯಿತು. ಘಟಕದ ಅಧ್ಯಕ್ಷರಾದ ಶ್ರೀಮತಿ ಸುಜಾತ ನವೀನ್ ರವರು ಆಗಮಿಸಿದಂತಹ ಅತಿಥಿಗಳಿಗೆ ವೀಳ್ಯದೆಲೆ ಕೊಟ್ಟು ಶಾಲು ಹೊದಿಸಿ ಹಾಗೂ ಬಂದಂತಹ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು, ನಂತರ ಮುಖ್ಯ ಅತಿಥಿಗಳಾದ ಮೋಹನ್ ರಾಜ್ ರವರು ನಮ್ಮ ಆಟಿಡೊಂಜಿ ದಿನ ಕಾರ್ಯಕ್ರಮವನ್ನು ಉದ್ದೇಶಿಸಿ ಶುಭಹಾರೈಸಿದರು ನಂತರ ಆಟಿ ತಿಂಗಳ ಮದಿಪು ನುಡಿಯಲು ಬಂದಂತಹ ಪ್ರೊ|ಡಾ| ರಾಕೇಶ್ ಕುಮಾರ್ ರವರು ಆಟಿ ತಿಂಗಳ ವಿಶೇಷತೆಗಳನ್ನು ವೇದಿಕೆಯ ಮೇಲೆ ಪ್ರಸ್ತಾಪಿಸಿದರು. ಕಾರ್ಯಕ್ರಮದಲ್ಲಿ ನಾಲ್ಕು ಜನ ಹಿರಿಯರಿಗೆ ಸನ್ಮಾನವನ್ನು ಮಾಡಿ ಅವರ ಆಶೀರ್ವಾದವನ್ನು ಪಡೆಯಲಾಯಿತು. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತ್ಯುತ್ತಮ ಅಂಕವನ್ನು ಪಡೆದ 9 ಮಕ್ಕಳನ್ನು ಗುರುತಿಸಿ ಸನ್ಮಾನಿಸಿ ಪ್ರೋತ್ಸಾಹಿಸಲಾಯಿತು. ನಂತರ ಅತಿಥಿಗಳಾಗಿ ಬಂದಂತಹ ಯುವ ವಾಹಿನಿ (ರಿ) ಕೇಂದ್ರ ಸಮಿತಿಯ ಕೋಶಾಧಿಕಾರಿಯದ ಸುನಿಲ್ ಕೆ ಅಂಚನ್ ರವರು ನಮ್ಮ ಘಟಕಕ್ಕೆ ಹಾಗೂ ನಾವು ನಡೆಸಿದ ಕಾರ್ಯಕ್ರಮಕ್ಕೆ ಶುಭಾಶಯ ನೀಡಿದರು, ಒಟ್ಟಿಗೆ ಇಪ್ಪತ್ತಕ್ಕೂ ಅಧಿಕ ಖಾದ್ಯಗಳನ್ನು ಘಟಕದ ಸದಸ್ಯರು ಹಾಗೂ ಆತ್ಮೀಯರು ಮನೆಯಲ್ಲಿ ತಯಾರಿಸಿ ಎಲ್ಲರಿಗೂ ಉಣಬಡಿಸಿದರು. ನಂತರ ಆಗಮಿಸಿದಂತಹ ಅತಿಥಿಗಳಿಗೆ ನೆನಪಿನ ಕಾಣಿಕೆಯಾಗಿ ಗಿಡವನ್ನು ನೀಡಲಾಯಿತು. ಕೊನೆಯದಾಗಿ ಘಟಕದ ಪದಾಧಿಕಾರಿ ಹಾಗೂ ಬ್ರಹ್ಮ ಶ್ರೀ ನಾರಾಯಣ ಗುರು ಮಂದಿರ ಸೇವಾ ಟ್ರಸ್ಟ್ (ರಿ) ಇದರ ಅಧ್ಯಕ್ಷರಾದ ತುಕಾರಾಂ ಪೂಜಾರಿಯವರು ಆಗಮಿಸಿದಂತಹ ಹಾಗೂ ಈ ಕಾರ್ಯಕ್ರಮ ಯಶಸ್ವಿಯಾಗಲು ಪ್ರೋತ್ಸಾಹಿಸಿದಂತಹ ಎಲ್ಲರಿಗೂ ಧನ್ಯವಾದಗಳು ಸಮರ್ಪಿಸಿದರು. ನಿರೂಪಕರಾಗಿ ಶ್ರೀಯುತ ಪ್ರತಿಷ್ ಗೌರೀಶ್ ಅವರು ಕಾರ್ಯನಿರ್ವಹಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!