ಕುದ್ರೋಳಿ ನವರಾತ್ರಿ ಮಹೋತ್ಸವದಲ್ಲಿ ಸ್ವಯಂ ಸೇವೆ
ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ನಡೆಯುತ್ತಿರುವ ನವರಾತ್ರಿ ಮಹೋತ್ಸವದಲ್ಲಿ ಯುವವಾಹಿನಿ ಉಪ್ಪಿನಂಗಡಿ ಘಟಕದ ವತಿಯಿಂದ ಸ್ವಯಂ ಸೇವೆ ನಡೆಯಿತು.
ಘಟಕದ ಅಧ್ಯಕ್ಷರಾದ ನಾಣ್ಯಪ್ಪ ಕೋಟ್ಯಾನ್ ಇವರ ನೇತೃತ್ವದಲ್ಲಿ 100 ಕ್ಕೂ ಹೆಚ್ಚಿನ ಮಂದಿ ಸದಸ್ಯರು02.10.2025ರಂದು ಬೆಳಿಗ್ಗೆಯಿಂದ ಸಂಜೆ ತನಕ ಸೇವೆ ಸಲ್ಲಿಸಿದರು.
ಸೇವೆಯಲ್ಲಿ ಘಟಕದ ಗೌರವ ಸಲಹೆಗಾರರಾದ ವರದರಾಜ್, ಪದಾಧಿಕಾರಿಗಳು ಮತ್ತು ಸದಸ್ಯರು ಭಾಗವಹಿಸಿದ್ದರು.


