Yuvavahini

OCT 22, 2025 4.41 PM IST

ಗುರುನಮನ ಕಾರ್ಯಕ್ರಮ -ಯುವವಾಹಿನಿ( ರಿ.)ಬೆಳ್ತಂಗಡಿ ಘಟಕ

05/10/2025 ಆದಿತ್ಯವಾರ
ಬೆಳ್ತಂಗಡಿಯ ಶ್ರೀ ಗುರುನಾರಾಯಣ ಸ್ವಾಮಿ ಸಭಾಭವನ

ನಾರಾಯಣ ಗುರುಗಳು ಸಮಾಜದ ಪ್ರೇರಣಾ ಶಕ್ತಿ ಅವರ ವಿಚಾರಧಾರೆ ಆಧರಿಸಿ ಸಮಾಜದಲ್ಲಿ ಹಿಂದುಳಿದವರನ್ನು ಮುಖ್ಯ ವಾಹಿನಿಗೆ ತರಲು ಯುವವಾಹಿನಿ ಪ್ರಯತ್ನಿಸುತ್ತಿದೆ ಸಂಘಟನೆ ಮೂಲಕ ಸಮಾಜ ಉತ್ತಮ ಸದೃಢವಾಗಿ ಮುಂದುವರಿಯಲಿ ಎಂದು ಬೆಳ್ತಂಗಡಿ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಂ ಕಲ್ಲಾಪು ಹಾರೈಸಿದರು.
ಘಟಕದ ಆಶ್ರಯದಲ್ಲಿ ಯುವವಾಹಿನಿ ಮಹಿಳಾ ಸಂಚಾಲನ ಸಮಿತಿ ಬೆಳ್ತಂಗಡಿ ಸಹಕಾರದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜಯಂತಿ ಅಂಗವಾಗಿ ನಡೆದ ಗುರುನಮನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಉಪಾಧ್ಯಕ್ಷ ಜಯಂತ್ ಕೋಟ್ಯಾನ್ ನಾರಾಯಣ ಗುರುಗಳ ಆದರ್ಶವನ್ನು ಸಮಾಜದಲ್ಲಿ ಬೆಳೆಸುವುದೇ ಸಮಾಜಕ್ಕೆ ನೀಡುವ ಕೊಡುಗೆಯಾಗಿದೆ ಯುವಕರು ಕುಟುಂಬಕ್ಕೆ ಸೀಮಿತವಾಗದೆ ನಾರಾಯಣ ಗುರುಗಳ ವಿಚಾರದಡಿ ಬದುಕು ರೂಪಿಸಿಕೊಳ್ಳಬೇಕು ಎಂದರು.
ಬೆಳ್ತಂಗಡಿ ಗುರುದೇವ ವಿವಿಧೋದ್ದೇಶ ಸಹಕಾರಿ ಸಂಘದ ನೂತನ ಅಧ್ಯಕ್ಷ ಭಗೀರಥ ಜಿ ಇವರನ್ನು ಘಟಕದ ವತಿಯಿಂದ ಸನ್ಮಾನಿಸಲಾಯಿತು. ಸನ್ಮಾನ ಸ್ವೀಕರಿಸಿ ಮಾತನಾಡಿ ಎಲ್ಲರ ಬದುಕು ಉತ್ತಮವಾಗಿರಬೇಕು ಎಂಬುದೇ ಯುವವಾಹಿನಿಯ ಕಾಳಜಿ ಎಂದರು.
ಘಟಕದ ಅಧ್ಯಕ್ಷ ಗುರುರಾಜ ಗುರಿಪಳ್ಳ ಅಧ್ಯಕ್ಷತೆ ವಹಿಸಿದ್ದರು, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಕೂಳೂರು ಶುಭ ಹಾರೈಸಿದರು, ಯುವ ವಾಹಿನಿ ವೇಣೂರು ಘಟಕದ ಅಧ್ಯಕ್ಷ ಶುಭಕರ ಸಾವ್ಯ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಘಟಕದ ಈ ಹಿಂದಿನ ಅಧ್ಯಕ್ಷರುಗಳನ್ನು ಗೌರವಿಸಲಾಯಿತು.
ಮಹಿಳಾ ಸಂಚಾಲನಾ ಸಮಿತಿಯ ಪ್ರಧಾನ ಸಂಚಾಲಕಿ ಲೀಲಾವತಿ ಪನಕಜೆ ಪ್ರಾರ್ಥಿಸಿ, ಘಟಕದ ಮಾಜಿ ಅಧ್ಯಕ್ಷ ಎಂ ಕೆ ಪ್ರಸಾದ್ ಸ್ವಾಗತಿಸಿ ಪ್ರಸ್ತಾವಿಸಿದರು, ಶ್ರೀಮತಿ ಶ್ವೇತ ಯುವರಾಜ್ ನಿರೂಪಿಸಿದರು ಕಾರ್ಯದರ್ಶಿ ಮಧುರ ರಾಘವ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!