ದಿನಾಂಕ 04-11-2025:
ಘಟಕದಲ್ಲಿ ಸೈಬರ್ ವಂಚನೆಯ ಕುರಿತು ಮಾಹಿತಿ ಕಾರ್ಯಾಗಾರ ನೆರವೇರಿತು.
ಉರ್ವ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯಾದ ವೇಣುಗೋಪಾಲ್ ರವರು ಸೈಬರ್ ವಂಚನೆಯ ಕುರಿತು ಮಾತನಾಡಿ ಇಂದಿನ ದಿನಗಳಲ್ಲಿ ಹಿಂದೆ ಇದ್ದ ಅಪರಾಧ ಪ್ರಕರಣಗಳ ಚಿತ್ರಣವೆ ಬದಲಾಗಿದ್ದು ಇಂದು ಪೊಲೀಸ್ ಠಾಣೆಯಲ್ಲಿ ದಾಖಲಾಗುವ ಪ್ರಕರಣಗಳಲ್ಲಿ ಸೈಬರ್ ವಂಚನೆ ಹಾಗೂ ಡ್ರಗ್ಸ್ ಸೇವನೆಗೆ ಸಂಬಂಧಿಸಿದ ಪ್ರಕರಣಗಳೇ ಹೆಚ್ಚಾಗಿದೆ.
ಸೈಬರ್ ವಂಚನೆ ಪ್ರಕರಣಗಳಲ್ಲಿ ಹೆಚ್ಚಾಗಿ ವಿದ್ಯಾವಂತರೇ ಸಾಮಾಜಿಕ ಜಾಲತಾಣ, ಅಂತರ್ಜಾಲದ ಮೂಲಕ ವಂಚನೆಗೊಳಗಾಗುತ್ತಿದ್ದಾರೆ.
ಆದ್ದರಿಂದ ಸಾಮಾಜಿಕ ಜಾಲತಾಣ ಹಾಗೂ ಇಂಟರ್ನೆಟ್ ಬಳಸುವಾಗ ಜಾಗೃತರಾಗಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಾದ ವೇಣುಗೋಪಾಲ್ ಹಾಗೂ ಕುಸುಮಾರವರನ್ನು ಘಟಕದ ವತಿಯಿಂದ ಗೌರವಿಸಲಾಯಿತು.
ಘಟಕದ ಸದಸ್ಯರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.


