Yuvavahini

DEC 01, 2025 2.27 PM IST

ತುಳುವೆರೆ ತುಳಸಿ ಪರ್ಬ ಆಚರಣೆ-ಯುವವಾಹಿನಿ(ರಿ.) ಹೆಜಮಾಡಿ ಘಟಕ

ಘಟಕದ ಆಶ್ರಯದಲ್ಲಿ ದಿನಾಂಕ:02-11-2025 ಆದಿತ್ಯವಾರದಂದು ತುಳುವೆರೆ ತುಳಸಿ ಪರ್ಬ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದಲ್ಲಿ ಜರಗಿತು.

* ತುಳಸಿ ಪೂಜೆಯ ವಿಧಿ ವಿಧಾನಗಳನ್ನು ಗುರು ಮಂದಿರದ ಅರ್ಚಕರಾದ ಹರೀಶ್ ಶಾಂತಿ ಮುಂಬೈ ಇವರ ನೇತೃತ್ವದಲ್ಲಿ ಗುರು ಮಂದಿರದಲ್ಲಿ ನೆರವೇರಿಸಲಾಹಿತು.
* ನಂತರ ಸಭಾ ಕಾರ್ಯಕ್ರಮವು ಹೆಜಮಾಡಿ ಬಿಲ್ಲವರ ಸಂಘದ ವಠಾರದಲ್ಲಿ ಪ್ರಾಥನೆಯೊಂದಿಗೆ ಆರಂಭವಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಅಧ್ಯಕ್ಷರಾದ ನಿಶಾಂಕ್.ಎಸ್.ಕೋಟ್ಯಾನ್ ರವರು ವಹಿಸಿದ್ದು ಅತಿಥಿ ಗಣ್ಯರನ್ನು ಸ್ವಾಗತಿಸಿದರು. ಮುಖ್ಯ ಅತಿಥಿಯಾಗಿ ಯುವವಾಹಿನಿ(ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷರಾದ ಶ್ರೀ ಅಶೋಕ್ ಕುಮಾರ್ ಪಡ್ಪು, ಶ್ರೀ ಮೋಹನ್ ದಾಸ್ ಹೆಜಮಾಡಿ, ಶ್ರೀ ಗಣೇಶ್ ನಾರಾಯಣ ಪಂಡಿತ್, ಶ್ರೀ ಎಮ್. ಎ. ಗಫೂರ್,ಶ್ರೀ ಲೋಹಿತ್ ರೆಂಜಾಳ ಸುಳ್ಯ ಉಪಸ್ಥಿತರಿದ್ದರು.ತುಳಸಿ ಪೂಜೆಯ ಅಂಗವಾಗಿ ನಮ್ಮ ಊರಿನ ನಾಲ್ಕು ಕರೆಯ ಬಿಲ್ಲವ ಸದಸ್ಯರಿಗೆ ನಡೆದ ಆಟೋಟ ಸ್ಪರ್ಧೆಯ ಬಹುಮಾನವನ್ನು ವಿತರಿಸಲಾಯಿತು ಮತ್ತು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ವಿಜೇತರಾದ ಶ್ರೀ ಶರಣ್ ಕುಮಾರ್ ಮಟ್ಟು, ಶ್ರೀ ವಿಜಯ್ ಕುಮಾರ್ ಹೆಜಮಾಡಿಕೋಡಿ,ನವೀನ್ ಪಡು ಇನ್ನ ಇವರನ್ನು ಈ ಸಂದರ್ಭದಲ್ಲಿ ಗುರುತಿಸಲಾಯಿತು. ವೇದಿಕೆಯಲ್ಲಿ ಶ್ರೀ ಎಮ್ ಎ ಗಪೂರ್, ಶ್ರೀ ಗಣೇಶ ನಾರಾಯಣ ಪಂಡಿತ್ ಇವರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದ ನಿರೂಪಣೆಯನ್ನು ಧೀರಜ್, ಮನೋಹರ್, ಶಿವರಾಮ್ ಜಿ ಅಮೀನ್, ನೆರವೇರಿಸಿದರು. ಕೊನೆಯಲ್ಲಿ ಕಾರ್ಯದರ್ಶಿ ಪ್ರಾಪ್ತಿ ಆರ್ ಸುವರ್ಣ ಬಾಗವಹಿಸಿ ಎಲ್ಲರಿಗೂ ಧನ್ಯವಾದ ಸಲ್ಲಿಸುವ ಮೂಲಕ ಕಾರ್ಯಕ್ರಮವನ್ನು ಮುಕ್ತಾಯಗೊಳಿಸಲಾಗಿತು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!