Yuvavahini

DEC 01, 2025 2.38 PM IST

ಉಚಿತ ನೇತ್ರ ತಪಾಸಣಾ ಶಿಬಿರ-ಯುವವಾಹಿನಿ (ರಿ.) ಪಡುಬಿದ್ರಿ ಘಟಕ

ಯುವವಾಹಿನಿ (ರಿ.) ಪಡುಬಿದ್ರಿ ಘಟಕ
ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಪಡುಬಿದ್ರಿ ಶಾಖೆ ಹಾಗೂ ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಜಂಟಿ ಸಹಯೋಗದೊಂದಿಗೆ ದಿನಾಂಕ 02/11/2025 ಭಾನುವಾರ ದಂದು ಉಚಿತ ನೇತ್ರ ತಪಾಸಣಾ ಶಿಬಿರ ವು ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ವೈದ್ಯಕೀಯ ತಂಡದೊಂದಿಗೆ ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ (ರಿ.) ಪಡುಬಿದ್ರಿ ಇಲ್ಲಿ ಆಯೋಜಿಸಲಾಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಚಿತ್ತರಂಜನ್ ಬೋಳಾರ್ ನೆರವೇರಿಸಿದರು.
ವೇದಿಕೆಯಲ್ಲಿ ಯುವವಾಹಿನಿ (ರಿ.) ಪಡುಬಿದ್ರಿ ಘಟಕದ ಅಧ್ಯಕ್ಷರಾದ ಶ್ರೀ ವಿಧಿತ್ ಪೂಜಾರಿ ಕರ್ನಿರೆ, ಘಟಕದ ಆರೋಗ್ಯ ನಿರ್ದೇಶಕರಾದ ಶ್ರೀ ಜಯ ಎನ್ ಪೂಜಾರಿ, ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಅಧ್ಯಕ್ಷರಾದ ಪ್ರಗತ್ ಶೆಟ್ಟಿ,
ಲಯನ್ಸ್ ಕ್ಲಬ್ ಪಡುಬಿದ್ರಿ ಇದರ ಮಾಜಿ ಅಧ್ಯಕ್ಷರು ಹಾಗೂ ಅಡ್ವೆ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷರಾದ ಶ್ರೀ ನವೀನ್ ಚಂದ್ರ ಸುವರ್ಣ, ಶ್ರೀ ಬ್ರಹ್ಮಬೈದರ್ಕಳ ಗರೋಡಿ ಕನ್ನಂಗಾರ್ ಇದರ ಅಧ್ಯಕ್ಷರಾದ ಶ್ರೀ ಶೀನ ಪೂಜಾರಿ, ಪಡುಬಿದ್ರಿ ಬಿಲ್ಲವ ಸಮಾಜ ಸೇವಾ ಸಂಘ ಹಾಗೂ ಪಡುಬಿದ್ರಿ ವ್ಯವಸಾಯ ಸೊಸೈಟಿಯ ಅಧ್ಯಕ್ಷರಾದ ಶ್ರೀ ವೈ ಸುಧೀರ್ ಕುಮಾರ್, ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ ಕಣ್ಣಿನ ತಜ್ಞರಾದ ಡಾ ನಿರಂಜನ್ ಹಾಗೂ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಮುಖ್ಯ ಕಾರ್ಯನಿರ್ವಹಣಾ ಅಧಿಕಾರಿಯಾದ ಶ್ರೀಮತಿ ಸೌಮ್ಯ ವಿಜಯ್ ಉಪಸ್ತಿತರಿದ್ದರು.

ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸಿದ ಎಲ್ಲರನ್ನು ಶ್ರೀಮತಿ ಸೌಮ್ಯ ವಿಜಯ್ ಸ್ವಾಗತಿಸಿದರು.
ಕಾರ್ಯಕ್ರಮದ ಕೊನೆಯಲ್ಲಿ ಶ್ರೀಮತಿ ಚೈತ್ರ ಎಲ್ಲರಿಗೂ ಧನ್ಯವಾದ ಸಲ್ಲಿಸಿದರು.
ಶ್ರೀಮತಿ ಸ್ವಾತಿ ಮತ್ತು ಕುಮಾರಿ ಯಶೋಧ ಕಾರ್ಯಕ್ರಮ ನಿರೂಪಿಸಿದರು.

ನೇತ್ರ ತಪಾಸಣಾ ಶಿಬಿರದಲ್ಲಿ ಸುಮಾರ್ 190 ಶಿಬಿರಾರ್ಥಿಗಳು ಉಚಿತ ಕಣ್ಣಿನ ತಪಾಸಣೆ ಮಾಡಿಸಿಕೊಂಡು ಅವಶ್ಯಕತೆ ಉಳ್ಳವರು ಕನ್ನಡಕ ಪಡೆದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!