Yuvavahini

DEC 01, 2025 2.47 PM IST

ಮೊದಲ ಶಿವಗಿರಿ ತೀರ್ಥಯಾತ್ರೆ-ಯುವವಾಹಿನಿ (ರಿ.) ಬೆಂಗಳೂರು ಘಟಕ

ಯುವವಾಹಿನಿ (ರಿ.) ಬೆಂಗಳೂರು ಘಟಕದ 41 ಮಂದಿ ಸದಸ್ಯರು ತಮ್ಮ ಜೀವನದ ಮೊದಲ ಶಿವಗಿರಿ ತೀರ್ಥಯಾತ್ರೆಯನ್ನು 31 ಅಕ್ಟೋಬರ್ 2025 ರಂದು ಮೆಜಸ್ಟಿಕ್ ರೈಲು ನಿಲ್ದಾಣ ದಿಂದ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಹಾಗೂ ಕಾರ್ಯದರ್ಶಿಯಾದ ಸಂತೋಷ್ ಪಣಪಿಲ ಇವರ ಮಾರ್ಗದರ್ಶನದಲ್ಲಿ ಪ್ರಾರಂಭಿಸಿದರು.
ಗುರುಗಳ ಕೃಪೆಯಿಂದಲೇ ಈ ಯಾತ್ರೆ ಸಾಧ್ಯವಾಯಿತು

ನವೆಂಬರ್ 1, ಶನಿವಾರದ ಬೆಳಿಗ್ಗೆ ತಂಡ ಶಿವಗಿರಿ ತಲುಪಿತು. ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿಯವರು ನಮ್ಮ ತಂಡಕ್ಕೆ ಆಶೀರ್ವಾದ ನೀಡಿ, ಎಲ್ಲ ವ್ಯವಸ್ಥೆಗಳನ್ನು ಸುಗಮವಾಗಿ ನಡೆಸಿಕೊಟ್ಟರು.

ತಂಡವು ಮೊದಲು ಶ್ರೀ ಗಾಯತ್ರಿ ದೇವಾಲಯ ಮತ್ತು ಬ್ರಹ್ಮಶ್ರೀ ನಾರಾಯಣ ಗುರುಗಳ ಸಮಾಧಿ ಸ್ಥಳಕ್ಕೆ ಭೇಟಿ ನೀಡಿತು. ಉಪಹಾರವಾದ ನಂತರ ತಂಡ ಕನ್ಯಾಕುಮಾರಿ ಗೆ ಪ್ರಯಾಣಿಸಿ, ಅಲ್ಲಿ ವಿವೇಕಾನಂದ ಸ್ಮಾರಕ, ತಿರುಳ್ಳುವರ್ “Statue of Wisdom”, ಹಾಗೂ ಗ್ಲಾಸ್ ಬ್ರಿಡ್ಜ್ ಮೂಲಕದ ಪ್ರವಾಸವನ್ನು ಆನಂದಿಸಿತು. ಅಲ್ಲಿ ಕಡಲತೀರದ ಸೂರ್ಯಾಸ್ತದ ಸೌಂದರ್ಯವನ್ನು ಕಣ್ತುಂಬಿಕೊಂಡು, ಮೂಗುತಿ ಸುಂದರಿ ಶ್ರೀ ಕನ್ಯಾಕುಮಾರಿ ದೇವಿ ಯ ಆಶೀರ್ವಾದ ಪಡೆದರು. ನಂತರ ತಂಡ ಮರುತಮಲೈ ನಾರಾಯಣ ಗುರು ಆಶ್ರಮ ಕ್ಕೆ ತೆರಳಿ, ಭೋಜನದ ನಂತರ ಶ್ರೀ ಸತ್ಯಾನಂದ ಸ್ವಾಮೀಜಿ ಯವರ ಆಶೀರ್ವಾದ ಪಡೆದರು ಹಾಗೂ ಆಶ್ರಮದಲ್ಲೇ ವಾಸ್ತವ್ಯ ಮಾಡಿದರು.

ಮುಂದಿನ ದಿನ ಭಾನುವಾರ, 2 ನವೆಂಬರ್ 2025, ಬೆಳಿಗ್ಗೆ 5 ಗಂಟೆಗೆ ತಂಡ ಆಶ್ರಮದಲ್ಲಿ ಧ್ಯಾನ ಹಾಗೂ ಪ್ರಾರ್ಥನೆಗಳಲ್ಲಿ ಭಾಗವಹಿಸಿತು. ನಂತರ ಮರುತಮಲೈ ಪಾದದ ಶ್ರೀ ಹನುಮಾನ್ ದೇವಾಲಯಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದು, ತಂಡ ತಿರುವನಂತಪುರಂ ಶ್ರೀ ಅನಂತ ಪದ್ಮನಾಭಸ್ವಾಮಿ ದೇವಾಲಯದತ್ತ ಪ್ರಯಾಣಿಸಿತು. ಅಲ್ಲಿ ದೇವರ ದರ್ಶನ ಪಡೆದ ನಂತರ ಪ್ರಸಾದ ಊಟ ಮಾಡಿ, ನಂತರ ಚೆಂಬಲತೀ (ಗುರುವಿನ ಜನ್ಮಸ್ಥಳ) ಗೆ ತೆರಳಿ, ನಾರಾಯಣ ಗುರುಗಳ ಬಾಲ್ಯದ ಮನೆಯನ್ನು ನೋಡಿದರು. ಆ ಸ್ಥಳದ ಪವಿತ್ರತೆ ಮತ್ತು ಶಾಂತ ವಾತಾವರಣ ಎಲ್ಲರಿಗೂ ಆಧ್ಯಾತ್ಮಿಕ ಅನುಭವ ನೀಡಿತು.

ಅನಂತರ ತಂಡ ಕುಚುವೇಲಿ ರೈಲು ನಿಲ್ದಾಣದಿಂದ ಬೆಂಗಳೂರಿನತ್ತ ಪ್ರಯಾಣ ಬೆಳೆಸಿತು.
ಎಲ್ಲ ಸದಸ್ಯರು ಈ ಯಾತ್ರೆಯನ್ನು ಅಮೂಲ್ಯ ಹಾಗೂ ಆಧ್ಯಾತ್ಮಿಕವಾಗಿ ಉನ್ನತ ಅನುಭವ ಎಂದು ವಿವರಿಸಿದರು.
. ಈ ಯಾತ್ರೆಯನ್ನು ಆಯೋಜಿಸಿದ ಘಟಕದ ಶ್ರೀ ನಾರಾಯಣ ಗುರು ತತ್ವ ಪ್ರಚಾರ ನಿರ್ದೇಶಕ ರಾದ ಧನ್ಯಶ್ರೀ ಮತ್ತು ಪುನೀತ್ ಇವರನ್ನು ಅಭಿನಂದಿಸಲಾಯಿತು.
ಸ್ಥಾಪಕಾಧ್ಯಕ್ಷರಾದ ಶ್ರೀ ಸುಧೀರ್ ಪೂಜಾರಿ, ಮಾಜಿ ಅಧ್ಯಕ್ಷರಾದ ಶ್ರೀ ಶ್ರೀಧರ ಡಿ. , ಮಾಜಿ ಗೌರವ ಸಲಹೆಗಾರರಾದ ಶ್ರೀ ರಘು ಮಟ್ಟು ಹಾಗೂ ಆರೋಗ್ಯ ನಿರ್ದೇಶಕರಾದ ಶ್ರೀಮತಿ ಅನಿತಾ ಕಮಲಾಕ್ಷ , ವಿದ್ಯಾನಿಧಿ ನಿರ್ದೇಶಕರಾದ ಶ್ರುತಿ ಇವರೆಲ್ಲರೂ ಸಂಪೂರ್ಣ ಸಹಕಾರ ನೀಡಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!