ದಿನಾಂಕ 19-10-2025 ನೇ ಆದಿತ್ಯವಾರ ದಂದು ದೀಪಾವಳಿ ಹಬ್ಬದ ಪ್ರಯುಕ್ತ ಬಡ ಕುಟುಂಬಗಳಿಗೆ ದಿನಸಿ ವಿತರಣೆ ಮಾಡುವ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ರವರು ಬ್ರಹ್ಮ ಶ್ರೀ ನಾರಾಯಣ ಗುರುಗಳಿಗೆ ದೀಪ ಬೆಳಗಿಸಿ, ಪ್ರಾರ್ಥಿಸಿದರು. ನಂತರ ಸದಸ್ಯರ ಜೊತೆಗೆ ಸೇರಿಕೊಂಡು ದೀಪಾವಳಿ ಹಬ್ಬವನ್ನು ನಮ್ಮಂತೆಯೇ ಬಡ ಕುಟುಂಬದವರೂ ಆಚರಣೆ ಮಾಡಬೇಕು ಎಂಬ ಉದ್ದೇಶದಿಂದ 8 ಬಡ ಕುಟುಂಬಗಳಿಗೆ ಒಂದು ತಿಂಗಳಿಗೆ ಬೇಕಾದಷ್ಟು ದಿನಸಿ ಸಾಮಾಗ್ರಿಗಳನ್ನು ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಘಟಕದ ಕಾರ್ಯದರ್ಶಿ ಜಯಲಕ್ಷ್ಮಿ, ಪ್ರಥಮ ಉಪಾಧ್ಯಕ್ಷರಾದ ಗೀತಾ ವಸಂತ್, ನಿಕಟಪೂರ್ವ ಅಧ್ಯಕ್ಷರಾದ ಇಂದಿರಾ ಸುರೇಶ್, ಮಾಜಿ ಅಧ್ಯಕ್ಷರಾದ ಭಾಸ್ಕರ್ ಕೋಟ್ಯಾನ್, ದೀಕ್ಷಿತ್ ಸಿ ಎಸ್, ಯಶವಂತ ಪೂಜಾರಿ, ಮಾರ್ಗದರ್ಶಕರಾದ ಚಂದಪ್ಪ ಸನಿಲ್, ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.
DEC 01, 2025 3.06 PM IST


