Yuvavahini

DEC 04, 2025 5.23 PM IST

ಯುವವಾಹಿನಿ ಅಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಿದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿಯವರಿಗೆ ಮನೆಯ ಹಸ್ತಾಂತರ -ಯುವವಾಹಿನಿ(ರಿ) ಮಾಣಿ ಘಟಕ

ಯುವವಾಹಿನಿ(ರಿ)ಕೇಂದ್ರಸಮಿತಿಯ ಸಹಕಾರದೊಂದಿಗೆ
ಯುವವಾಹಿನಿ ಅಶ್ರಯ ಯೋಜನೆಯಡಿಯಲ್ಲಿ ನಿರ್ಮಿಸಿದ ಬಂಟ್ವಾಳ ತಾಲೂಕು ಅನಂತಾಡಿ ಗ್ರಾಮದ ಪೆಲತ್ತಡಿ ಕಮಲ ಪೂಜಾರ್ತಿಯವರಿಗೆ ಮನೆಯ ಹಸ್ತಾಂತರ ಕಾರ್ಯಕ್ರಮ ಹಾಗೂ ತುಳಸಿ ಪೂಜಾ ಆಚರಣೆ
ದಿನಾಂಕ 12.11.2025 ಬುಧವಾರ

. ಸಂಜೆ ಭಜನಾ ಕಾರ್ಯಕ್ರಮದ ಜೊತೆಗೆ ತುಳಸಿ ಪೂಜೆಯ ನಂತರ ಸಭಾ ಕಾರ್ಯಕ್ರಮವನ್ನು ಅಖಿಲ ಭಾರತ ಬಿಲ್ಲವರ ಯೂನಿಯನ್ (ರಿ) ಕುದ್ರೋಳಿ ಮಂಗಳೂರು ಇದರ ಅಧ್ಯಕ್ಷರಾದ ಶ್ರೀಯುತ ನವೀನ್ ಚಂದ್ರ ಡಿ ಸುವರ್ಣ ಇವರು ಉದ್ಘಾಟಿಸಿದರು.
ಯುವವಾಹಿನಿ(ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಶ್ರೀ ಲೋಕೇಶ್ ಕೋಟ್ಯಾನ್ ಸಭಾಧ್ಯಕ್ಷತೆ ವಹಿಸಿದರು.
ಶ್ರೀ ಗೋಕರ್ಣನಾಥ ಕ್ಷೇತ್ರ ಕುದ್ರೋಳಿಯ ಕೋಶಾಧಿಕಾರಿ ಶ್ರೀ ಪದ್ಮರಾಜ್ ಆರ್ ಪೂಜಾರಿಯವರು ಮನೆಯ ಕೀ ಹಸ್ತಾಂತರ ಮಾಡಿದರು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ನೌಕರರ ಸಂಘದ ಮಾಜಿ ಅಧ್ಯಕ್ಷರಾದ ಶ್ರೀ ಸಂಜೀವ ಪೂಜಾರಿ, ನಾರಾಯಣ ಗುರು ಸೇವಾ ಸಂಘ ಮಾಣಿ ಇದರ ಅಧ್ಯಕ್ಷರಾದ ಶ್ರೀ ಸುರೇಶ್ ಪೂಜಾರಿ ಸೂರ್ಯ, ಮಂಗಳೂರಿನ ವಕೀಲರಾದ ಶ್ರೀ ರಂಜಿತ್ ಪೂಜಾರಿ ಮೈರ, ಬಂಟ್ವಾಳ ತಾಲೂಕು ಮಟ್ಟದ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜಯಂತಿ ಪೂಜಾರಿ, ಅನಂತಾಡಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಸುಜಾತ ಸುರೇಶ್ ಪೂಜಾರಿ ಬಾಕಿಲ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಶ್ರೀ ನಾರಾಯಣ ಗುರು ಸಹಕಾರ ಸಂಘ ಮಾಣಿ ಇದರ ಅಧ್ಯಕ್ಷರಾದ ಶ್ರೀ ನಾರಾಯಣ ಸಾಲ್ಯಾನ್, ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಮಾಜಿ ಅಧ್ಯಕ್ಷರುಗಳಾದ ಶ್ರೀ ಜಯಂತ ನಡುಬೈಲು, ಶ್ರೀ ಡಾ. ರಾಜಾರಾಮ್ ಕೆ ಬಿ, ಶ್ರೀ ರಾಜೇಶ್ ಬಿ ಭಾಗವಹಿಸಿದ್ದರು..
ಕಾರ್ಯಕ್ರಮದಲ್ಲಿ ಮನೆ ನಿರ್ಮಾಣ ಕಾರ್ಯಕ್ರಮಕ್ಕೆ ಸಹಕರಿಸಿದ ಎಲ್ಲರನ್ನು ಗೌರವಿಸಲಾಯಿತು, ವಿಶೇಷವಾಗಿ ಮನೆ ನಿರ್ಮಾಣದ ಕೆಲಸ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಸಮಾಜ ಸೇವೆ ನಿರ್ದೇಶಕರಾದ ಶ್ರೀ ರವಿಚಂದ್ರ ಬಾಬನ ಕಟ್ಟೆ, ಮತ್ತು ಯುವವಾಹಿನಿ ಮಾಣಿ ಘಟಕದ ಅಧ್ಯಕ್ಷರಾದ ಶಿವರಾಜ್ ಪಿ.ಆರ್ ಅನಂತಾಡಿ ಇವರನ್ನು ಗೌರವಿಸಲಾಯಿತು.
ವೇದಿಕೆಯಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಪ್ರಧಾನ ಕಾರ್ಯದರ್ಶಿ ಶ್ರೀ ಬಾಬು ಪೂಜಾರಿ, ಘಟಕದ ಕಾರ್ಯದರ್ಶಿಯಾದ ಶ್ರೀ ದೀಪಕ್ ಪೆರಾಜೆ, ಘಟಕದ ಸಮಾಜ ಸೇವಾ ನಿರ್ದೇಶಕರಾದ ಶ್ರೀ ಕಿರಣ್ ಗೋಳಿಕಟ್ಟೆ, ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಯುವವಾಹಿನಿ ಕೇಂದ್ರ ಸಮಿತಿ ಮಂಗಳೂರು ಇದರ ಪದಾಧಿಕಾರಿಗಳು,ಯುವವಾಹಿನಿ ಮಾಣಿ ಘಟಕದ ಮಾಜಿ ಅಧ್ಯಕ್ಷರುಗಳು ಭಾಗವಹಿಸಿದ್ದರು. ಘಟಕದ ಅಧ್ಯಕ್ಷರಾದ ಶಿವರಾಜ್ ಪಿ.ಆರ್ ಅನಂತಾಡಿ ಪ್ರಾಸ್ತಾವಿಕ ಮಾತುಗಳೊಂದಿಗೆ ಬಂದಂತಹ ಅತಿಥಿಗಳನ್ನು ಸ್ವಾಗತಿಸಿದರು. ಘಟಕದ ಕಾರ್ಯದರ್ಶಿಗಳಾದ ದೀಪಕ್ ಪೆರಾಜೆ ವಂದಿಸಿದರು. ಘಟಕದ ಸದಸ್ಯರಾದ ಶ್ರೀಮತಿ ರೇಣುಕಾ ಕಣಿಯೂರು ಮತ್ತು ಶ್ರೀ ರಾಜೇಶ್ ಬಲ್ಯ ಕಾರ್ಯಕ್ರಮವನ್ನ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!