Yuvavahini

DEC 04, 2025 5.35 PM IST

ತುಳುನಾಡಿನ ದೀಪಾವಳಿ ಆಚರಣೆ -ಯುವವಾಹಿನಿ(ರಿ.)ಕೂಳೂರು ಘಟಕ

ದಿನಾಂಕ 30-10-2025 ನೇ ಗುರುವಾರ ಘಟಕದ ವತಿಯಿಂದ ಘಟಕದ ಸದಸ್ಯರಾದ ತುಕಾರಾಮ ಎಸ್ ಪೂಜಾರಿ ಮತ್ತು ಅನಿತಾ ತುಕಾರಾಮ್ ದಂಪತಿಗಳ ಮನೆಯಲ್ಲಿ ಜರುಗಿದ

ನಮ್ಮ ಮನೆ ಹಬ್ಬ ದೀಪಾವಳಿ, ಕತ್ತಲಿನಿಂದ ಬೆಳಕಿನೆಡೆಗೆ
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು. ತುಳುನಾಡಿನ ಹಿಂದಿನ ಆಚರಣೆಗಳ ವಿಶೇಷತೆ, ಮೂಲ ಅರ್ಥ, ನಮ್ಮ ಹಿರಿಯರು ದೀಪಾವಳಿ ಹಬ್ಬವನ್ನು ಹೇಗೆ ಆಚರಿಸಿಕೊಂಡು ಬಂದಿದ್ದಾರೆ ಎಂಬುದರ ಬಗ್ಗೆ ವಿವರಿಸಿದರು. ತುಳುನಾಡಿನ ದೀಪಾವಳಿ ಎಂದರೆ ಅದು ಭೂಮಿ ತಾಯಿ, ಪ್ರಕೃತಿ ಸಂಬಂಧದ ಅರಿವು ಮೂಡಿಸುವ ಸಲುವಾಗಿ ಆಚರಿಸಲಾಗುತ್ತಿತ್ತು ಎಂದರು. ಈಗಿನ ಕಾಲದಲ್ಲಿ ಯುವವಾಹಿನಿ ಕಾರ್ಯಕ್ರಮದಲ್ಲಿ ದೀಪಾವಳಿ ಆಚರಣೆ ಮಾಡಿರುವ ಬಗ್ಗೆ ಶ್ಲಾಘಿಸಿದರು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಕಳೆದ 10 ವರ್ಷಗಳಿಂದ ಘಟಕದ ಒಂದೊಂದು ಸದಸ್ಯರ ಮನೆಯಲ್ಲಿ ಆಚರಿಸಿಕೊಂಡು ಬರುತ್ತಿದ್ದೇವೆ. ಇಂತಹ ವಿಶಿಷ್ಟವಾದ ಕಾರ್ಯಕ್ರಮಗಳು ಇನ್ನಷ್ಟು ನಡೆಯಲಿ ಎಂದು ಶುಭ ಹಾರೈಸಿದರು.
ಇನ್ನೋರ್ವ ಮುಖ್ಯ ಅತಿಥಿ ದೇವಿಕಾ ಟಿಂಬರ್ಸ್ ಮಾಲಕರಾದ ಮಧುಗೋಪಾಲನ್ ಭಾಗವಹಿಸಿದ್ದರು.
ಕಾರ್ಯಕ್ರಮದಲ್ಲಿ ಶ್ರೀಕಾಂತ್ ಶೆಟ್ಟಿ ಸಾಮಾಜಿಕ ಕಾಳಜಿಯನ್ನು ಗುರುತಿಸಿ ಅಭಿನಂದಿಸಲಾಯಿತು.
ಮಧು ಗೋಪಾಲನ್ ಅವರನ್ನು ಯುವವಾಹಿನಿ ಕೂಳೂರು ಘಟಕಕ್ಕೆ ನೀಡಿದ ಸಹಕಾರ ಗುರುತಿಸಿ ಅಭಿನಂದಿಸಲಾಯಿತು.
ಕಾರ್ಯಕ್ರಮವನ್ನು ತಮ್ಮ ಮನೆಯಲ್ಲಿ ನಡೆಸಲು ಅನುವು ಮಾಡಿಕೊಟ್ಟ ಮನೆಯ ಯಜಮಾನರಾದ ತುಕಾರಾಮ ಎಸ್ ಪೂಜಾರಿ, ಅನಿತಾ ತುಕಾರಾಮ್ ರವರನ್ನು ಅಭಿನಂದಿಸಲಾಯಿತು.
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಅಧ್ಯಕ್ಷರಾದ ಲೋಕೇಶ್ ಕೋಟ್ಯಾನ್ ಹಾಗೂ ಯುವವಾಹಿನಿ (ರಿ) ಕೂಳೂರು ಘಟಕದ ಅಧ್ಯಕ್ಷರಾದ ಲತೀಶ್ ಪೂಜಾರಿ ರವರನ್ನು ಮನೆಯವರು ಸೇರಿ ಅಭಿಮಾನದಿಂದ ಸನ್ಮಾನಿಸಿದರು. ವೇದಿಕೆಯಲ್ಲಿ ಘಟಕದ ಕಾರ್ಯದರ್ಶಿ ಜಯಲಕ್ಷ್ಮಿ, ಮನೆ ಯಜಮಾನರಾದ ತುಕಾರಾಮ ಎಸ್ ಪೂಜಾರಿ, ಕಾರ್ಯಕ್ರಮ ಸಂಚಾಲಕರಾದ ಅನಿತಾ ತುಕಾರಾಮ್ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ತುಳುನಾಡಿನ ದೀಪಾವಳಿ ಆಚರಣೆಗಳಾದ ಎಣ್ಣೆ ಸ್ನಾನ, ಲಕ್ಷ್ಮೀ ಪೂಜೆ, ಗೋಪೂಜೆ, ಬಲೀಂದ್ರ ಪೂಜೆ, ದೀಪ ಬೆಳಗಿಸಿ ತುಳಸೀ ಪೂಜೆಯನ್ನು ಮಾಡಲಾಯಿತು.
ಕಾರ್ಯಕ್ರಮದಲ್ಲಿ ಗೂಡುದೀಪ ಹಾಗೂ ರಂಗೋಲಿ ಸ್ಪರ್ಧೆ ಆಯೋಜಿಸಲಾಗಿತ್ತು.
ಅತಿಥಿಗಳು ವಿಜೇತರಿಗೆ ಬಹುಮಾನ ವಿತರಿಸಿದರು. ಸಭಾ ಕಾರ್ಯಕ್ರಮದ ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ಸದಸ್ಯರಿಂದ ದಾಂಡಿಯಾ ನೃತ್ಯ ಪ್ರದರ್ಶನ ಕಾರ್ಯಕ್ರಮದ ಮೆರುಗು ಹೆಚ್ಚಿಸಿತು.
ಅಧ್ಯಕ್ಷರು ಸ್ವಾಗತಿಸಿದರು. ಹರ್ಷಿತಾ, ಸೃಜನಿ ಪ್ರಾರ್ಥಿಸಿದರು. ಮಧುಶ್ರೀ ಪ್ರಶಾಂತ್ ಮತ್ತು ಲೋಕೇಶ್ ಪೂಜಾರಿ ನಿರೂಪಿಸಿದರು. ಕಾರ್ಯಕ್ರಮ ಸಂಚಾಲಕರಾದ ಅನಿತಾ ತುಕಾರಾಮ್ ವಂದಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!