Yuvavahini

DEC 12, 2025 5.36 AM IST

ಸಂಗೀತ ಸ್ಪರ್ಧೆ-ಯುವವಾಹಿನಿ(ರಿ.)ಮಂಗಳೂರು ಘಟಕ

25-11-2025 ಸಂಗೀತ ಎಂಬುದು ಮನಸ್ಸುಗಳನ್ನು ಜೋಡಿಸುವ ಶಕ್ತಿ, ಜನರನ್ನು ಒಗ್ಗೂಡಿಸುವ ಶಕ್ತಿ ಹಾಗೂ ನಮ್ಮ ಮನಸ್ಸಿನ ಭಾವನೆಗಳನ್ನು ಸುಂದರವಾಗಿ ವ್ಯಕ್ತಪಡಿಸುವ ಒಂದು ಕಲೆಯಾಗಿದೆ ಎಂದು ಯುವ ಕಾಂಗ್ರೆಸ್ ದಕ್ಷಿಣ ಕನ್ನಡ ಜಿಲ್ಲೆಯ ಉಪಾಧ್ಯಕ್ಷರಾದ ದೀಕ್ಷಿತ್ ಅತ್ತಾವರ ಹೇಳಿದರು. ಅವರು ಘಟಕದ ಆಶ್ರಯದಲ್ಲಿ ನಡೆದ ಸಂಗೀತ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಪ್ರಥಮ ಉಪಾಧ್ಯಕ್ಷರಾದ ಅಶೋಕ್ ಕುಮಾರ್ ಪಡ್ಪು ಮಾತನಾಡಿ ಪ್ರತಿಯೊಬ್ಬ ವ್ಯಕ್ತಿಯಲ್ಲೂ ಪ್ರತಿಭೆಯೊoದಿರುತ್ತದೆ ಅಂತಹ ಪ್ರತಿಭೆಗಳನ್ನು ಮುನ್ನೆಲೆಗೆ ತರಲು ಮಂಗಳೂರು ಘಟಕವೂ ಸಂಗೀತ ಸ್ಪರ್ಧೆಯ ಮೂಲಕ ವೇದಿಕೆಯನ್ನು ಕಲ್ಪಿಸಿರುವುದು ಶ್ಲಾಘನೀಯವಾಗಿದೆ ಎಂದರು.

ಒಟ್ಟು ಮೂರು ವಿಭಾಗಗಳಲ್ಲಿ ನಡೆದ ಸಂಗೀತ ಸ್ಪರ್ಧೆಯಲ್ಲಿ ಮಕ್ಕಳ ವಿಭಾಗದಲ್ಲಿ ಸಾರಿಕಾ ಬಿ ಎಚ್ ಪ್ರಥಮ, ಚಿರಂತ್ ಎಸ್ ಪೂಜಾರಿ ದ್ವಿತೀಯ, ರಮ್ಯಶ್ರೀ ಟಿ ತ್ರತೀಯ, ಮಹಿಳೆಯರ ವಿಭಾಗದಲ್ಲಿ ಕಾವ್ಯಶ್ರೀ ಪ್ರಥಮ, ಜಯಂತಿ ಕೋಟ್ಯಾನ್ ದ್ವಿತೀಯ, ದಯಾವತಿ ತೃತೀಯ ಹಾಗೂ ಪುರುಷರ ವಿಭಾಗದಲ್ಲಿ ದಿಶಾಂತ್ ಪ್ರಥಮ, ಪ್ರವೀಣ್ ಕಿರೋಡಿ ದ್ವಿತೀಯ, ಯಶವಂತ್ ಪೂಜಾರಿ ತೃತೀಯ ಬಹುಮಾನ ವಿಜೇತರಾದರು.
ಈ ಸಂದರ್ಭದಲ್ಲಿ ರಾಜ್ಯ ಪವರ್ ಲಿಫ್ಟಿಂಗ್ ಬೆಂಚ್ ಪ್ರೆಸ್ ಸ್ಪರ್ಧೆಯಲ್ಲಿ 105 ಕೆಜಿ ಮಾಸ್ಟರ್ಸ್-3 ವಿಭಾಗದಲ್ಲಿ ಚಿನ್ನದ ಪದಕವನ್ನು ಪಡೆದ ಘಟಕದ ಸದಸ್ಯರಾದ ಕಮಲಾಕ್ಷ ರನ್ನು ಸನ್ಮಾನಿಸಲಾಯಿತು ,
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕದ ಪ್ರಥಮ ಉಪಾಧ್ಯಕ್ಷರಾದ ಹರೀಶ್ ಕೆ ಸುವರ್ಣ ವಹಿಸಿದ್ದರು.
ಹೆಸರಾಂತ ಗಾಯಕರಾದ ಪ್ರಶಾಂತ್ ಕಂಕನಾಡಿ ಹಾಗೂ ಅರುಣ ರಾವ್ ಕಟೀಲ್ ಸಂಗೀತ ಸ್ಪರ್ಧೆಯ ತೀರ್ಪುಗಾರಿಕೆಯಲ್ಲಿ ಸಹಕರಿಸಿದರು. ಕಾರ್ಯಕ್ರಮದ ಸಂಚಾಲಕರಾದ ದಿನೇಶ್ ಕಂದಾವರ ಸ್ವಾಗತಿಸಿದರು. ಕಾರ್ಯದರ್ಶಿ ಯಶವಂತ್ ಪೂಜಾರಿ ಉಳಾಯಿಬೆಟ್ಟು ವಂದಿಸಿದರು. ಘಟಕದ ಸದಸ್ಯರಾದ ಸತೀಶ್ ಕೆ ಕಾರ್ಯಕ್ರಮ ನಿರೂಪಿಸಿದರು. ಉಷಾ, ಜಯಂತಿ ಕೋಟ್ಯಾನ್ ಹಾಗೂ ಪೂರ್ಣಿಮಾ ಯು ಆರ್ ಪ್ರಾರ್ಥನೆ ಗೀತೆ ಹಾಡಿದರು

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!