Yuvavahini

DEC 12, 2025 5.49 AM IST

ಪ್ರೀಮಿಯರ್ ಲೀಗ್ ಕ್ರಿಕೆಟ್-ಯುವವಾಹಿನಿ(ರಿ.)ಬಂಟ್ವಾಳ ಘಟಕ

ನವೆಂಬರ್ 22 ಹಾಗೂ 23ರಂದು ಬಂಟ್ವಾಳ ಭಂಡಾರಿಬೆಟ್ಟು ಎಸ್‌ವಿ‌ಎಸ್ ಶಾಲಾ ಮೈದಾನದಲ್ಲಿ, ಘಟಕದ ಆಶ್ರಯದಲ್ಲಿ, ಸೇವಾ ಚಟುವಟಿಕೆಗಳಿಗೆ ಸಹಾಯಾರ್ಥವಾಗಿ ಬಂಟ್ವಾಳ ತಾಲೂಕು ಮಟ್ಟದ 12 ತಂಡಗಳೊಂದಿಗೆ ಆಯೋಜಿಸಲ್ಪಟ್ಟ ಬೈದ್ಯಶ್ರೀ ಪ್ರೀಮಿಯರ್ ಲೀಗ್ ಬಿಲ್ಲವ ಕ್ರಿಕೆಟ್ ಪಂದ್ಯಾಟದಲ್ಲಿ ನಾಗೇಶ್ ಪೂಜಾರಿ ಏಲಾಬೆ ಮಾಲಕತ್ವದ ಬಿಲ್ಲವ ಫ್ರೆಂಡ್ಸ್ ದಿಂಡಿಕೆರೆ ಮೂವತ್ತು ಸಾವಿರ ನಗದು ಹಾಗೂ ಬೈದಶ್ರೀ ಟ್ರೋಫಿ ಮೂಲಕ ಚಾಂಪಿಯನ್ ಪಟ್ಟ ಅಲಂಕರಿಸಿತು.

ಪೃಥ್ವಿರಾಜ್ ಮಣಿಹಳ್ಳ
ಮಾಲಕತ್ದದ ಬಿರುವೆರ ಕನಸು ಮಣಿಹಳ್ಳ ದ್ವೀತೀಯ ಪ್ರಶಸ್ತಿ,
ವಿಕ್ರಮ್ ಶಾಂತಿ ಕೆರೆಕೋಡಿಗುತ್ತು ಮಾಲಕತ್ದದ ಶ್ರೀ ಗುರು ಫ್ರೆಂಡ್ಸ್ ಬೀಯಪಾದೆ ತೃತೀಯ ಪ್ರಶಸ್ತಿ,
ರಂಜಿತ್ ಬಿಸಿರೋಡ್ ಮಾಲಕತ್ದದ ಬಿಲ್ಲವ ವಾರಿಯರ್ಸ್ ಬಂಟ್ವಾಳ ಚತುರ್ಥ ಪ್ರಶಸ್ತಿ ಪಡೆದುಕೊಂಡಿತು

ವೈಯಕ್ತಿಕ ಪ್ರಶಸ್ತಿಗಳು :
ಬಿಲ್ಲವ ಫ್ರೇಂಡ್ಸ್
ಡಿಂಡಿಕೆರೆ ತಂಡದ ಚರಣ್ ಸರಣಿ ಶ್ರೇಷ್ಠ ಪ್ರಶಸ್ತಿ, ಶ್ರೀನಾಥ್ ಪಂದ್ಯಶ್ರೇಷ್ಠ ಪ್ರಶಸ್ತಿ, ಬಿರುವೆರೆ ಕನಸು ಮಣಿಹಳ್ಳ ತಂಡದ ಜೀವನ್ ಅತ್ಯುತ್ತಮ ಎಸೆತಗಾರ, ಜೀವನ್ ಅತ್ಯುತ್ತಮ ಬ್ಯಾಟ್ಸ್‌ಮನ್ ಪ್ರಶಸ್ತಿ ಹಾಗೂ ಬಿಲ್ಲವ ವಾರಿಯರ್ಸ್ ತಂಡದ ಮೋಕ್ಷಿತ್ ಎಮರ್ಜಿಂಗ್ ಪ್ಲೇಯರ್ ಪ್ರಶಸ್ತಿ ಪಡೆದುಕೊಂಡರು

ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಅಧ್ಯಕ್ಷತೆ ವಹಿಸಿದ್ದರು.
ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಪಡ್ಪು, ವಿದ್ಯಾ ರಾಕೇಶ್, ಕರ್ನಾಟಕ ಸರಕಾರದ ಹಿಂದುಳಿದ ವರ್ಗಗಳ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ, ಶ್ರೀ ನಾಲ್ಕೈತ್ತಾಯ ಪಂಜುರ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆದ್ದೇಲು ಗುತ್ತು ಜಗನ್ನಾಥ್ ನಿರ್ಮಲ್ ಬಂಗೇರ , ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಉಪಾಧ್ಯಕ್ಷ ಜಯಪ್ರಕಾಶ್ ಜೆ.ಎಸ್, ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ ಪೂಜಾರಿ ಮೆಲ್ಕಾರ್, ಸಿದ್ದಕಟ್ಟೆ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಕಿರಣ್ ಕುಮಾ‌ರ್ ಮಂಜಿಲ, ಮಂಗಳೂರು ಮಹಾನಗರಪಾಲಿಕೆ ಮಾಜಿ ಸದಸ್ಯರಾದ ಅನಿಲ್ ಕುಮಾ‌ರ್, ಕಿರಣ್ ಕೋಡಿಕಲ್ ಬಿಜೆಪಿ ಬಂಟ್ವಾಳ ಮಂಡಲ ಪ್ರಧಾನ ಕಾರ್ಯದರ್ಶಿ ಸುದರ್ಶನ್ ಬಜ, ಉದ್ಯಾಮಿ ಪುರುಷೋತ್ತಮ ಕಾರಾಜೆ, ಮಣಿನಾಲ್ಕೂರು ಬಿಲ್ಲವ ಸಮಾಜ ಸೇವಾ ಸಂಘ, ಅಧ್ಯಕ್ಷ ಸಂಜೀವ ಪೂಜಾರಿ ಕಟ್ಟದಡೆ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು

ಘಟಕದ ಉಪಾಧ್ಯಕ್ಷ ಕಿರಣ್‌ರಾಜ್ ಪೂಂಜರೆಕೋಡಿ, ನಿಕೇಶ್ ಕೋಟ್ಯಾನ್, ಕೋಶಾಧಿಕಾರಿ ನವೀನ್ ಪೂಜಾರಿ ಲೊರೆಟ್ಟೋ,
ಕ್ರೀಡಾ ನಿರ್ದೇಶಕ ಧನುಷ್ ಮದ್ವ,
ಸಂಚಾಲಕ ರಂಜಿತ್ ಬಿ.ಸಿ.ರೋಡ್, ನವೀನ್ ಕುಡ್ಮೇರು, ಚಿಂತನ್ ರಾಜ್ ಕಡಂಬಳಿಕೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಘಟಕದ ಅಧ್ಯಕ್ಷ ನಾಗೇಶ್ ಪೂಜಾರಿ ನೈಬೇಲು ಸ್ವಾಗತಿಸಿದರು, ಕಾರ್ಯದರ್ಶಿ ಮಧುಸೂದನ್ ಮದ್ವ ಧನ್ಯವಾದ ನೀಡಿದರು, ನಿಕಟಪೂರ್ವ ಅಧ್ಯಕ್ಷ ದಿನೇಶ್ ಸುವರ್ಣ ರಾಯಿ ಕಾರ್ಯಕ್ರಮ ನಿರೂಪಿಸಿದರು.

Leave a Reply

Your email address will not be published. Required fields are marked *

ಸಂಪರ್ಕಿಸಿ : +91 94484 63345
yuvavahinicentral@gmail.com

ಮುಂದಿನ ಕಾರ್ಯಕ್ರಮಗಳು
ಜಾಹೀರಾತುಗಳು
ಪ್ರಮುಖ ಕಾರ್ಯಕ್ರಮ
ಯುವವಾಹಿನಿ (ರಿ) ಕೇಂದ್ರ ಸಮಿತಿಯ ಆಶ್ರಯದಲ್ಲಿ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಅಂತರ್ ಘಟಕ ಸಾಂಸ್ಕ್ರತಿಕ ಸ್ಪರ್ಧೆ

ಡೆನ್ನಾನ-ಡೆನ್ನನ 2026 : ಯುವವಾಹಿನಿ(ರಿ) ಕೂಳೂರು ಘಟಕ ಚಾಂಪಿಯನ್

ಬಂಟ್ವಾಳ : ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ, ಬಂಟ್ವಾಳ ಘಟಕದ ಆತಿಥ್ಯದಲ್ಲಿ ಏಪ್ರಿಲ್ 19ರಂದು ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧೆ ‘ಡೆನ್ನಾನ-ಡೆನ್ನನ 2026’ರಲ್ಲಿ ಯುವವಾಹಿನಿ ಕೂಳೂರು ಘಟಕ ₹50,000/- ನಗದು ಹಾಗು ಆಕರ್ಷಕ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರಿಗೆ ಗೌರವಾರ್ಪಣೆ

ಸವಿನೆನಪಿನ ಸಿಂಚನದ ನಮನ

ಬಂಟ್ವಾಳ : ಬಂಟ್ವಾಳದಲ್ಲಿ ಸಂಭ್ರಮದಿಂದ ಜರುಗಿದ “ಡೆನ್ನಾನ ಡೆನ್ನನ 2026” ಸಾಂಸ್ಕೃತಿಕ ವೇದಿಕೆಯಲ್ಲಿ ಒಂದು ಐತಿಹಾಸಿಕ ಕ್ಷಣ ಅನಾವರಣಗೊಂಡಿತು. ಕಳೆದ 39 ವರ್ಷಗಳಲ್ಲಿ ಯುವವಾಹಿನಿಯನ್ನು ಸಮರ್ಥವಾಗಿ ಮುನ್ನಡೆಸಿದ 33 ಮಂದಿ ಯುವವಾಹಿನಿ ಕೇಂದ್ರ ಸಮಿತಿಯ ಮಾಜಿ ಅಧ್ಯಕ್ಷರನ್ನು ಒಂದೇ ವೇದಿಕೆಯಲ್ಲಿ ಗೌರವಿಸುವ...

Sunday, 19-04-2026
ಯುವವಾಹಿನಿ ಡೆನ್ನಾನ ಡೆನ್ನನ : 2026

ಪಿಯುಸಿ ಟಾಪರ್ ದಿಶಾ ಪೂಜಾರಿ ಇವರಿಗೆ ಯುವವಾಹಿನಿ ಗೌರವಾರ್ಪಣೆ

ಬಂಟ್ವಾಳ: ಯುವವಾಹಿನಿ (ರಿ.) ಕೇಂದ್ರ ಸಮಿತಿಯ ಆಶ್ರಯದಲ್ಲಿ ಹಾಗೂ ಬಂಟ್ವಾಳ ಘಟಕದ ಆತಿಥ್ಯದಲ್ಲಿ ಬಿ.ಸಿ.ರೋಡ್‌ನ ಸ್ಪರ್ಶ ಕಲಾ ಮಂದಿರದಲ್ಲಿ ನಡೆದ ಯುವವಾಹಿನಿ ಅಂತರ್‌ಘಟಕ ಸಾಂಸ್ಕೃತಿಕ ಸ್ಪರ್ಧಾ ಸಮಾರಂಭದಲ್ಲಿ, ಇತ್ತೀಚೆಗೆ ಪಿಯುಸಿ ಪರೀಕ್ಷೆಯಲ್ಲಿ 600 ಅಂಕಗಳನ್ನು ಪಡೆದು ರಾಜ್ಯದಲ್ಲಿ ಪ್ರಥಮ ಸ್ಥಾನ ಪಡೆದ...

Sunday, 19-04-2026
ಯುವವಾಹಿನಿ ಕೇಂದ್ರ ಸಮಿತಿಯ ಆಶ್ರಯದಲ್ಲಿ ಕೊಲ್ಯ ಘಟಕದ ಆತಿಥ್ಯದಲ್ಲಿ “ಸಖೀ ಸಂವಾದ” ಕಾರ್ಯಾಗಾರ

ಸಖೀ ಸಂವಾದ: ಮಹಿಳಾ ಸಬಲೀಕರಣಕ್ಕೆ ರಾಜಕೀಯ ಪ್ರಾತಿನಿಧ್ಯದ ಅಗತ್ಯತೆ – ಪ್ರೊ. ಪಿ.ಎಲ್. ಧರ್ಮ

ಮಂಗಳೂರು: ಮಹಿಳೆಯರು ಕೇವಲ ಮತದಾರರಾಗಿ ಉಳಿಯದೆ, ದೇಶದ ರಾಜಕೀಯ ನಿರ್ಧಾರಗಳಲ್ಲಿ ಪಾಲ್ಗೊಳ್ಳುವ ನಿರ್ಣಾಯಕ ಶಕ್ತಿಯಾಗಿ ಬೆಳೆಯಬೇಕು. ನಿರ್ಧಾರ ತೆಗೆದುಕೊಳ್ಳುವ ಉನ್ನತ ಸ್ಥಾನಗಳಲ್ಲಿ ಮಹಿಳೆಯರು ಇದ್ದಾಗ ಮಾತ್ರ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗಲು ಸಾಧ್ಯ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ....

Saturday, 14-03-2026
ಯುವವಾಹಿನಿ (ರಿ.) ಕೇಂದ್ರ ಸಮಿತಿ, ಮಂಗಳೂರು ಆಶ್ರಯದಲ್ಲಿ ಹಾಗೂ ಕೂಳೂರು ಘಟಕದ ಆತಿಥ್ಯದಲ್ಲಿ ಯುವವಾಹಿನಿಯ 38ನೇ ವಾರ್ಷಿಕ ಸಮಾವೇಶ ಸಂಪನ್ನ

ಶಾಂತಿ–ಸೌಹಾರ್ದತೆ ರಾಷ್ಟ್ರದ ಶಕ್ತಿ, ಯುವಜನತೆ ಅಧಿಕಾರದಲ್ಲೂ ಮುನ್ನಡೆಯಬೇಕು : ಜಿಲ್ಲಾಧಿಕಾರಿ ಜಗದೀಶ್

ಮಂಗಳೂರು: “ನಮ್ಮ ನಾಡಿನಲ್ಲಿ ನಾವು ಸಹೋದರತ್ವ ಬದುಕಬೇಕು. ಶಾಂತಿ ಮತ್ತು ಸೌಹಾರ್ದತೆ ನೆಲೆಸಿದರೆ ನಾಡಿನ ಅಭಿವೃದ್ಧಿ ಖಚಿತ. ಯುವ ಮನಸ್ಸುಗಳು ಕೇವಲ ಸಾಮಾಜಿಕ ನ್ಯಾಯದ ಹೋರಾಟದಲ್ಲಿ ಮಾತ್ರವಲ್ಲ, ಆಡಳಿತ ಹಾಗೂ ಅಧಿಕಾರದ ವಲಯದಲ್ಲೂ ಮುನ್ನಡೆಯಬೇಕು” ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್...

Sunday, 21-12-2025
error: Content is protected !!